IND vs ENG T20 | ಸರಣಿ ಗೆಲುವಿನೊಂದಿಗೆ ಇತಿಹಾಸ ನಿರ್ಮಿಸಿದ ಭಾರತದ ವನಿತೆಯರು

Date:

ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತದ ವನಿತೆಯರ ತಂಡ ಭರ್ಜರಿ ಜಯ ಸಾಧಿಸಿ 3-1 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ವಿಶೇಷವೆಂದರೆ ಇಂಗ್ಲೆಂಡ್ ವಿರುದ್ಧದ ಟಿಂ ಇಂಡಿಯಾ ಮಹಿಳಾ ತಂಡದ ಮೊದಲ ಟಿ20 ಸರಣಿ ಗೆಲುವು ಇದಾಗಿದ್ದು, ಐತಿಹಾಸಿಕ ಸಾಧನೆ ಮಾಡುವಲ್ಲಿ ವನಿತೆಯರ ತಂಡ ಯಶಸ್ವಿಯಾಗಿದೆ.

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಉತ್ತಮ ಆರಂಭ ಪಡೆದಿರಲಿಲ್ಲ.

ಸೋಫಿಯಾ ಡಂಕ್ಲಿ 22 ರನ್ ಬಾರಿಸಿದರೆ, ವ್ಯಾಟ್ ಹಾಡ್ಜ್ 5 ರನ್​ಗಳಿಸಿ ನಿರ್ಗಮಿಸಿದ್ದರು. ಆ ಬಳಿಕ ಬಂದ ಅಲೀಸ್ ಕಾಪ್ಸಿ 18 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಾಯಕಿ ಬ್ಯೂಮಾಂಟ್ 20 ರನ್ ಗಳ ಕೊಡುಗೆ ನೀಡಿದರೆ, ಸ್ಕೋಲ್​​ಫೀಲ್ಡ್ 16 ರನ್ ಗಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನಾಯಕನಾಗಿ ಅಭೂತಪೂರ್ವ ದಾಖಲೆ ನಿರ್ಮಿಸಿದ ಶುಭ್​ಮನ್ ಗಿಲ್

ಈ ಮೂಲಕ ಇಂಗ್ಲೆಂಡ್ ತಂಡವು 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 126 ರನ್ ಕಲೆಹಾಕಿತು. ಟೀಮ್ ಇಂಡಿಯಾ ಪರ ಉತ್ತಮ ದಾಳಿ ಸಂಘಟಿಸಿದ ರಾಧಾ ಯಾದವ್ 4 ಓವರ್‌ಗಳಲ್ಲಿ 15 ರನ್ ನೀಡಿ 2 ವಿಕೆಟ್ ಪಡೆದರೆ, ಶ್ರೀ ಚರಣಿ 4 ಓವರ್‌ಗಳಲ್ಲಿ 30 ರನ್ ನೀಡಿ 2 ವಿಕೆಟ್ ಪಡೆದರು.

ಇನ್ನು 127 ರನ್ ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಸ್ಫೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್‌ನಿಂದಲೇ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಈ ಜೋಡಿ ಪವರ್ ಪ್ಲೇನಲ್ಲಿ 53 ರನ್ ಕಲೆಹಾಕಿದರು.

ಇದರ ಬೆನ್ನಲ್ಲೇ 19 ಎಸೆತಗಳಲ್ಲಿ 6 ಬೌಂಡರಿಗಳೊಂದಿಗೆ 31 ರನ್ ಬಾರಿಸಿದ್ದ ಶಫಾಲಿ ವರ್ಮಾ ಔಟಾದರು. ಈ ಹಂತದಲ್ಲಿ ಆಗಮಿಸಿದ ಜೆಮಿಮಾ ರೊಡ್ರಿಗಸ್ 24 ರನ್ ಗಳಿಸಿದರು. ಮತ್ತೊಂದೆಡೆ ಸ್ಮೃತಿ ಮಂಧಾನ 31 ರನ್ ಗಳಿಸಿ ನಿರ್ಗಮಿಸಿದರು. ಈ ವೇಳೆ ಕಣಕ್ಕಿಳಿದ ನಾಯಕಿ ಹರ್ಮನ್ ಪ್ರೀತ್ ಕೌರ್ 26 ರನ್ ಗಳನ್ನು ಕಲೆಹಾಕಿದರು.

ಈ ಮೂಲಕ ಟೀಮ್ ಇಂಡಿಯಾ 17 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 127 ರನ್ ಬಾರಿಸಿ 6 ವಿಕೆಟ್‌ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...