IND vs ENG ODI | ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್ ಅಮೋಘ ಆಟ; ಭಾರತ ವನಿತೆಯರಿಗೆ ಗೆಲುವು

Date:

ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರ ತಂಡ ಮೊದಲ ಗೆಲುವು ಸಾಧಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1–0 ಮುನ್ನಡೆ ಪಡೆದಿದೆ. ದ ರೋಸ್‌ ಬೌಲ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ದೀಪ್ತಿ ಶರ್ಮಾ(ಅಜೇಯ 62) ಮತ್ತು ಜೆಮಿಮಾ ರಾಡ್ರಿಗಸ್ (48) ಅವರ ಅಮೋಘ ಆಟದಿಂದ ಟೀಂ ಇಂಡಿಯಾ 4 ವಿಕೆಟ್‌ಗಳಿಂದ ಜಯಿಸಿತು.

ಟಾಸ್ ಗೆದ್ದ ಇಂಗ್ಲೆಂಡ್ ತಂಡವು 50 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 258 ರನ್ ಗಳಿಸಿತು. ಸೋಫಿಯಾ (83; 92ಎ, 4X9) ಮತ್ತು ಅಲೈಸ್ ಡೇವಿಡ್‌ಸನ್ ರಿಚರ್ಡ್ಸ್ (53; 73ಎ, 4X2) ಅವರ ಶತಕದ ಜೊತೆಯಾಟದಿಂದಾಗಿ (108 ರನ್) ಉತ್ತಮ ಮೊತ್ತ ಪೇರಿಸಲು ಸಾಧ್ಯವಾಯಿತು. ಅದಕ್ಕುತ್ತರವಾಗಿ ಭಾರತ ತಂಡವು 48.2 ಓವರ್‌ಗಳಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡು 262 ರನ್ ಗಳಿಸಿತು.

ಭಾರತ ತಂಡವು 124 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿತು. ಇದರಿಂದಾಗಿ ಜಯ ಕೈತಪ್ಪುವ ಆತಂಕ ಮೂಡಿತು. ಈ ಹಂತದಲ್ಲಿ ಜಿಮಿಮಾ (48; 54 ಎ) ಮತ್ತು ಅಜೇಯ ಅರ್ಧಶತಕ ಗಳಿಸಿದ ದೀಪ್ತಿ ಶರ್ಮಾ (ಔಟಾಗದೇ 62) ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? Wimbledon 2025: 23 ವರ್ಷದ ಯಾನಿಕ್ ಸಿನರ್ ಚೊಚ್ಚಲ ವಿಂಬಲ್ಡನ್ ಚಾಂಪಿಯನ್

ಭಾರತ ತಂಡದ ಭರವಸೆಯ ಮಧ್ಯಮವೇಗಿ ಕ್ರಾಂತಿ ಗೌಡ್ (55ಕ್ಕೆ2) ಅವರು ಆತಿಥೇಯರಿಗೆ ಆರಂಭದಲ್ಲಿಯೇ ಪೆಟ್ಟುಕೊಟ್ಟರು. ತಮ್ಮ ಮೊದಲ ಓವರ್‌ನಲ್ಲಿ ಎಮಿ ಜೋನ್ಸ್ ಅವರನ್ನು ಕ್ಲೀನ್‌ಬೌಲ್ಡ್ ಮಾಡಿದರು. ಎರಡನೇ ಓವರ್‌ನಲ್ಲಿ ಟಾಮಿ ಬೆಮೌಂಟ್ ಅವರನ್ನು ಎಲ್‌ಬಿ ಬಲೆಗೆ ಕೆಡವಿದರು. ಆನಂತರದಲ್ಲಿ ಎಮಾ ಲ್ಯಾಂಬ್ (39; 50ಎ, 4X4) ಮತ್ತು ನಾಯಕಿ ನ್ಯಾಟ್ ಶಿವರ್ ಬ್ರಂಟ್ (41; 52ಎ, 4X5) ಮೂರನೇ ವಿಕೆಟ್ ಜೊತೆಯಾಟದಲ್ಲಿ 71 ರನ್‌ ಸೇರಿಸಿದರು. ಈ ಜೋಡಿ ಆಟ ಮುಂದುವರಿಯದಂತೆ ಆಫ್‌ಸ್ಪಿನ್ನರ್ ಸ್ನೇಹ ರಾಣಾ ನೋಡಿಕೊಂಡರು. ಅವರು ಮೊದಲಿಗೆ ಬ್ರಂಟ್ ವಿಕೆಟ್ ಪಡೆದರು.

ಸ್ನೇಹ ಹಾಕಿದ ಇನ್ನೊಂದು ಓವರ್‌ನಲ್ಲಿ ಜೆಮಿಮಾ ಪಡೆದ ಆಕರ್ಷಕ ಕ್ಯಾಚ್‌ಗೆ ಬ್ರಂಟ್ ಆಟ ಮುಗಿಯಿತು. ತದ ನಂತರ ಸೋಫಿಯಾ ಮತ್ತು ಡೇವಿಡಸನ್ ಜೋಡಿ ಮಿಂಚಿತು.

ಸಂಕ್ಷಿಪ್ತ ಸ್ಕೋರು: ಇಂಗ್ಲೆಂಡ್: 50 ಓವರ್‌ಗಳಲ್ಲಿ 6ಕ್ಕೆ258, ಭಾರತ: 48.2 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 262

ಪಂದ್ಯದ ಆಟಗಾರ್ತಿ: ದೀಪ್ತಿ ಶರ್ಮಾ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...