ಏಕದಿನ ವಿಶ್ವಕಪ್ 2023 | ಮುಂದುವರೆದ ಭಾರತದ ಗೆಲುವಿನ ಓಟ; ಇಂಡಿಯಾ ಬೌಲರ್ ಗಳ ದಾಳಿಗೆ ಆಂಗ್ಲ ಪಡೆ ಧೂಳೀಪಟ

Date:

ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಭಾರತದ ಗೆಲುವಿನ ನಾಗಲೋಟ ಮುಂದುವರೆದಿದೆ. ಕಡಿಮೆ ಮೊತ್ತ ದಾಖಲಿಸಿದ್ದರೂ ಆಂಗ್ಲ ತಂಡವನ್ನು ಟೀಂ ಇಂಡಿಯಾ 129 ರನ್‌ಗಳಿಗೆ ಆಲೌಟ್ ಮಾಡಿ ಸತತ 6ನೇ ಗೆಲುವು ದಾಖಲಿಸಿತು.

ಲಖನೌದ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 230 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಜೋಸ್‌ ಬಟ್ಲರ್‌ ನೇತೃತ್ವದ ಇಂಗ್ಲೆಂಡ್ ತಂಡ ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿ 34.5 ಓವರ್‌ಗಳಲ್ಲಿ 129 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 100 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಪರ ಮೊಹಮ್ಮದ್ ಶಮಿ 22/4, ಜಸ್‌ಪ್ರೀತ್ ಬೂಮ್ರಾ 32/3, ಕುಲದೀಪ್‌ ಯಾದವ್‌ 34/2 ಹಾಗೂ ರವೀಂದ್ರ ಜಡೇಜಾ 16/1 ವಿಕೆಟ್ ಕಬಳಿಸಿ ಗೆಲುವಿನ ರೂವಾರಿಯಾದರು.

ಲಿಯಾಮ್ ಲಿವಿಂಗ್‌ಸ್ಟೋನ್ (27) ಹೊರತುಪಡಿಸಿದರೆ ಉಳಿದ ಬ್ಯಾಟ್ಸ್‌ಮನ್‌ಗಳು 20ರ ಗಡಿ ದಾಟದೆ ಸಂಪೂರ್ಣ ವಿಫಲರಾದರು. ಆರು ಪಂದ್ಯವಾಡಿರುವ ಇಂಗ್ಲೆಂಡ್‌ಗೆ ಇದು ಐದನೇ ಸೋಲು. ಕಳೆದ ಬಾರಿಯ ಚಾಂಪಿಯನ್‌ ಇಂಗ್ಲೆಂಡ್ ಈ ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ನೀಡಿ 6 ಪಂದ್ಯಗಳಲ್ಲಿ 5 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಈ ಸುದ್ದಿ ಓದಿದ್ದೀರಾ? ಭಾರತದ ಮಾಜಿ ಕ್ರಿಕೆಟಿಗ, ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ ನಿಧನ

ರೋಹಿತ್‌, ಸೂರ್ಯಕುಮಾರ್‌ ಉತ್ತಮ ಆಟ

ಟಾಸ್‌ ಸೋತ ಭಾರತ ಮೊದಲು ಬ್ಯಾಟಿಂಗ್‌ ಆರಂಭಿಸಿ ನಾಯಕ ರೋಹಿತ್ ಶರ್ಮಾ (87), ಸೂರ್ಯ ಕುಮಾರ್‌ ಯಾದವ್‌ (49) ಹಾಗೂ ಕೆಎಲ್ ರಾಹುಲ್ (39) ರನ್‌ಗಳ ಉಪಯುಕ್ತ ಆಟದಿಂದ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 229 ರನ್‌ ದಾಖಲಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...