ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಅಭಿಷೇಕ್ ಶರ್ಮಾ ದಾಖಲೆ ಶತಕ

Date:

ಭಾರತ ತಂಡ ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ 100 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಸರಣಿಯನ್ನು 1-1ರಿಂದ ಸಮಬಲ ಸಾಧಿಸಿದೆ.

ಭಾರತ ನೀಡಿದ 235 ರನ್‌ಗಳ ಸವಾಲನ್ನು ಬೆನ್ನಟ್ಟಿದ ಜಿಂಬಾಬ್ವೆ 18.4 ಓವರ್‌ಗಳಲ್ಲಿ 134 ರನ್‌ಗಳಿಗೆ ಆಲೌಟ್‌ ಆಯಿತು. ಟೀಂ ಇಂಡಿಯಾ ಪರ ಮುಖೇಶ್ ಕುಮಾರ್ 37/3, ಆವೇಶ್ ಖಾನ್‌ 15/3, ರವಿ ಬಿಷ್ಣೋಯಿ 11/2 ವಿಕೆಟ್ ಕಬಳಿಸಿ ಗೆಲುವಿನ ರೂವಾರಿಯಾದರು.

ಜಿಂಬಾಬ್ವೆ ಪರ ವಸ್ಲೆ ಮದವರೆ 43, ಬ್ರಿಯಾನ್‌ ಬೆನೆಟ್ 26 ಹಾಗೂ ಲೂಕ್‌ ಜೋಂಗ್ವೆ 33 ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ರನ್‌ ಗಳಿಸುವಲ್ಲಿ ವಿಫಲರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹರಾರೆಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಈ ಮೊದಲು ಟಾಸ್‌ ಗೆದ್ದು ಭಾರತ ತಂಡದ ನಾಯಕ ಶುಭಮನ್‌ ಗಿಲ್ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡು ಅಭಿಷೇಕ್‌ ಶರ್ಮಾ ಸ್ಪೋಟಕ ಶತಕ, ರುತುರಾಜ್‌ ಗಾಯಕ್‌ವಾಡ್‌ ಹಾಗೂ ರಿಂಕು ಸಿಂಗ್‌ ಭರ್ಜರಿ ಬ್ಯಾಟಿಂಗ್‌ನಿಂದಾಗಿ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 234 ರನ್‌ ಕಲೆ ಹಾಕಿತು.

ಅಭಿಷೇಕ್‌ ಶರ್ಮಾ ದಾಖಲೆ

ಅಂತಾರಾಷ್ಟ್ರೀಯ ಪಾದಾರ್ಪಣೆ ಮಾಡಿದ ಎರಡನೇ ಪಂದ್ಯದಲ್ಲಿಯೇ ಪಂಜಾಬ್‌ನ 23 ವರ್ಷದ ಉದಯೋನ್ಮುಖ ಆಟಗಾರ ಅಭಿಷೇಕ್‌ ಶರ್ಮಾ ಸಿಕ್ಸರ್‌ ಬೌಂಡರಿಗಳ ಮೂಲಕ ಜಿಂಬಾಬ್ವೆ ಬೌಲರ್‌ಗಳ ಬೆವರಿಳಿಸಿದರು. ಕೇವಲ 47 ಚೆಂಡುಗಳಲ್ಲಿ 8 ಭರ್ಜರಿ ಸಿಕ್ಸರ್‌ ಹಾಗೂ 7 ಆಕರ್ಷಕ ಬೌಂಡರಿಗಳೊಂದಿಗೆ 100 ರನ್‌ ಸಿಡಿಸಿದರು. ಟಿ20 ಮಾದರಿಯಲ್ಲಿ ವೇಗದ ಶತಕ ಬಾರಿಸಿದ ಟೀಂ ಇಂಡಿಯಾ ಆಟಗಾರರರಲ್ಲಿ ಮೂರನೇ ಸ್ಥಾನ ಅಭಿಷೇಕ್‌ ಅವರ ಪಾಲಾಯಿತು. ಮೊದಲ ಸ್ಥಾನದಲ್ಲಿ ರೋಹಿತ್‌ ಶರ್ಮಾ ಅವರಿದ್ದಾರೆ.

ಅಭಿಷೇಕ್‌ ಶರ್ಮಾ ಜೊತೆ ಮತ್ತೊಬ್ಬ ಉದಯೋನ್ಮುಖ ಆಟಗಾರ ರುತುರಾಜ್‌ ಗಾಯಕ್‌ವಾಡ್ ಕೂಡ ಅದ್ಭುತವಾಗಿ ಆಟವಾಡಿದರು. ಇವರಿಬ್ಬರು ಎರಡನೇ ವಿಕೆಟ್ ಜೊತೆಯಾಟದಲ್ಲಿ 76 ಚೆಂಡುಗಳಲ್ಲಿ 137 ರನ್‌ ಸ್ಫೋಟಿಸಿದರು.

ಅಜೇಯರಾಗಿ ಉಳಿದ ರುತುರಾಜ್‌ ಗಾಯಕ್‌ವಾಡ್ 47 ಎಸೆತಗಳಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್‌ನೊಂದಿಗೆ 77 ರನ್‌ ಬಾರಿಸಿದರು.

ಅಭಿಷೇಕ್‌ ಶರ್ಮಾ ಔಟಾದ ನಂತರ ಕೊನೆಯ 6 ಓವರ್‌ಗಳಲ್ಲಿ ಆಡಲು ಬಂದ ಯುವ ಪ್ರತಿಭೆ ರಿಂಕು ಸಿಂಗ್ ಕೂಡ ಅಬ್ಬರಿಸಿದರು. ಕೇವಲ 22 ಚೆಂಡುಗಳಲ್ಲಿ ಅಮೋಘ 5 ಸಿಕ್ಸರ್ ಹಾಗೂ 2 ಬೌಂಡರಿಯೊಂದಿಗೆ ಅಜೇಯ 48 ರನ್‌ ಸಿಡಿಸಿದರು.

ಜಿಂಬಾಂಬ್ವೆಯ 7 ಬೌಲರ್‌ಗಳು ಬೌಲ್‌ ಮಾಡಿದರೂ ಅಭಿಷೇಕ್‌, ರುತುರಾಜ್‌ ಹಾಗೂ ರಿಂಕು ಆರ್ಭಟವನ್ನು ತಡೆಯಲು ಸಾಧ್ಯವಾಗಲಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...