ಏಷ್ಯಾ ಕಪ್ | ಮತ್ತೆ ಮಿಂಚಿದ ಕುಲ್‌ದೀಪ್; ಶ್ರೀಲಂಕಾ ತಂಡವನ್ನು ಬಗ್ಗುಬಡಿದು ಫೈನಲ್‌ ಪ್ರವೇಶಿಸಿದ ಭಾರತ

Date:

ಸೂಪರ್‌ 4ನ ತನ್ನ 2ನೇ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ತಂಡದ ವಿರುದ್ಧ 41 ರನ್‌ಗಳ ಅಂತರದಲ್ಲಿ ಜಯಗಳಿಸಿ ಏಷ್ಯಾ ಕಪ್ ಟೂರ್ನಿಯ ಫೈನಲ್‌ ಪ್ರವೇಶಿಸಿತು.

ಭಾರತಕ್ಕೆ ಸೆ.15 ರಂದು ಬಾಂಗ್ಲಾದೇಶದ ವಿರುದ್ಧ ಪಂದ್ಯವಿದ್ದರೂ ಗೆಲ್ಲಲ್ಲೇಬೇಕಾದ ಅಗತ್ಯವಿಲ್ಲ. ಇದು ಔಪಚಾರಿಕ ಪಂದ್ಯವಾಗಲಿದೆ.

ಭಾರತ ನೀಡಿದ 214 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ತಂಡ 41.3 ಓವರ್‌ಗಳಲ್ಲಿ 172 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಆಲೌಟ್‌ ಆಯಿತು. ಟೀಂ ಇಂಡಿಯಾ ಪರ ಕುಲ್‌ದೀಪ್‌ ಯಾದವ್‌ ಮತ್ತೆ ಅತ್ಯುತ್ತಮ ಬೌಲಿಂಗ್‌ ಮಾಡಿ 43/4 ವಿಕೆಟ್ ಗಳಿಸಿದರು. ರವೀಂದ್ರ ಜಡೇಜಾ 33/2,ಬೂಮ್ರಾ 30/2 ವಿಕೆಟ್ ಕಬಳಿಸಿದರೆ, ಪಾಂಡ್ಯಾ ಹಾಗೂ ಸಿರಾಜ್‌ ತಲಾ ಒಂದೊಂದು ವಿಕೆಟ್ ಕಿತ್ತು ಗೆಲುವಿನ ರೂವಾರಿಗಳಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಂಕಾ ಪರ ಧುನಿತ್‌ ವೆಲ್ಲಲಿಗೆ 42,ಧನಂಜಯ ಡಿಸೆಲ್ವಾ 41 ಹಾಗೂ ಚರಿತ ಅಸಲಂಕ 22 ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್‌ಗಳ್ಯಾರು ಪ್ರತಿರೋಧ ತೋರಲಿಲ್ಲ.

ಲಂಕಾ ಸ್ವಿನ್ನರ್‌ಗಳಿಗೆ ಪರದಾಡಿದ ಭಾರತದ ಬ್ಯಾಟರ್‌ಗಳು
ಈ ಮೊದಲು ಏಷ್ಯಾ ಕಪ್ ಎರಡನೇ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ಭಾರತ, ಲಂಕಾ ಸ್ಪಿನ್ನರ್‌ಗಳಾದ ದುನಿತ್ ವೆಲ್ಲಲಾ ಹಾಗೂ ಚರಿತ ಅಸಲಂಕ ಅವರ ದಾಳಿಗೆ ಸಿಲುಕಿ 49.1 ಓವರ್‌ಗಳಲ್ಲಿ ಆಲೌಟ್‌ ಆಗಿ 213 ರನ್‌ಗಳಷ್ಟೆ ಮಾತ್ರ ಗಳಿಸಲು ಸಾಧ್ಯವಾಯಿತು.

ಟೀಂ ಇಂಡಿಯಾದ ಆರಂಭಿಕರಾದ ನಾಯಕ ರೋಹಿತ್ ಶರ್ಮಾ, ಶುಭಮನ್‌ ಗಿಲ್ ಹಾಗೂ ವಿರಾಟ್ ಕೊಹ್ಲಿ ಅವರ ವಿಕೆಟ್‌ಗಳನ್ನು ಬೇಗ ಪಡೆದ ವೆಲ್ಲಲಾಗೆ ಲಂಕಾ ತಂಡಕ್ಕೆ ಆರಂಭಿಕ ಮುನ್ನಡೆ ತಂದುಕೊಟ್ಟರು. 11.1ನೇ ಓವರ್‌ನಲ್ಲಿ ವೆಲ್ಲಲಾಗೆ ಶುಭ್ಮನ್ ಗಿಲ್ (19),13.5ನೇ ಓವರ್‌ನಲ್ಲಿ ವಿರಾಟ್ ಕೊಹ್ಲಿ ಹಾಗೂ ಅರ್ಧ ಶತಕ ಗಳಿಸಿ ಆಡುತ್ತಿದ್ದ ನಾಯಕ ರೋಹಿತ್ ಶರ್ಮಾ (53) ಕೂಡ 15.1ನೇ ಓವರ್‌ನಲ್ಲಿ ವೆಲ್ಲಲಾಗೆ ವಿಕೆಟ್ ಒಪ್ಪಿಸಿದರು.

ಈ ಸುದ್ದಿ ಓದಿದ್ದೀರಾ? ಏಷ್ಯಾ ಕಪ್ | ಕುಲ್‌ದೀಪ್‌ ಮಾರಕ ದಾಳಿ; ಪಾಕ್‌ ವಿರುದ್ಧ ಭಾರತಕ್ಕೆ 228 ರನ್‌ಗಳ ಭರ್ಜರಿ ಜಯ

ಈ ವೇಳೆ ಇಶಾನ್ ಕಿಶನ್ ಅವರ ಜೊತೆಗೂಡಿದ ಕನ್ನಡಿಗ ಕೆ ಎಲ್ ರಾಹುಲ್ ತಂಡವನ್ನು ಆರಂಭಿಕ ಹಿನ್ನಡೆಯಿಂದ ಪಾರು ಮಾಡಲು ಯತ್ನಿಸಿದರು ಆದರೆ ರಾಹುಲ್ (39) ಅವರನ್ನೂ ವೆಲ್ಲಲಾಗ ಸುಲಭವಾಗಿ ಔಟ್ ಮಾಡಿದರು. ಬಳಿಕ ಇಶಾನ್ ಕಿಶನ್ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. 61 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿ 33 ರನ್ ಗಳಿಸಿ ಚರಿತ್ ಅಸಲಂಕಾ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

ಹಾರ್ದಿಕ್ ಪಾಂಡ್ಯ (5), ರವೀಂದ್ರ ಜಡೇಜಾ (4) ಬಂದಷ್ಟೇ ವೇಗವಾಗಿ ಪೆಲಿವಿಯನ್ ಸೇರಿಕೊಂಡರು. ಜಸ್ಪ್ರೀತ್ ಬುಮ್ರಾ (5) ಚರಿತ್ ಅಸಲಂಕಾ ಎಸೆತದಲ್ಲಿ ಬೋಲ್ಡ್ ಆದರು. ಕುಲ್ದೀಪ್ ಯಾದವ್ (0) ಅಸಲಂಕಾ ಎಸೆತದಲ್ಲಿ ಧನಂಜಯ ಡಿ ಸಿಲ್ವಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಕೊನೆಯಲ್ಲಿ ಅಕ್ಷರ್ ಪಟೇಲ್ 26 ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು ಇನ್ನೂರರ ಗಡಿ ದಾಟಿಸಿದರು. ಶ್ರೀಲಂಕಾ ಪರ ದುನಿತ್ ವೆಲ್ಲಲಾಗೆ 10 ಓವರ್‌ಗಳಲ್ಲಿ 1 ಮೆಡಿನ್ ಸಹಿತ 40 ರನ್ ನೀಡಿ ಟೀಂ ಇಂಡಿಯಾದ ಪ್ರಮುಖ ಐದು ವಿಕೆಟ್ ಪಡೆದರು. ಚರಿತ್ ಅಸಲಂಕಾ 9 ಓವರ್‌ಗಳಲ್ಲಿ 18 ರನ್ ನೀಡಿ ನಾಲ್ಕು ವಿಕೆಟ್ ಕಬಳಿಸಿದರು.

5 ವಿಕೆಟ್‌ ಹಾಗೂ 42 ರನ್‌ ಗಳಿಸಿದ ಶ್ರೀಲಂಕಾದ ದುನಿತ್ ವೆಲ್ಲಲಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು

ರೋಹಿತ್ ಶರ್ಮಾ ಹತ್ತು ಸಾವಿರ ರನ್

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ಗಳ ಗಡಿ ದಾಟಿದರು.

ಈ ಸಾಧನೆ ಮಾಡಿದ ಭಾರತದ ಆರನೇ ಹಾಗು ವಿಶ್ವದ 15ನೇ ಬ್ಯಾಟರ್‌ ಆದರು. ಲಂಕಾ ಎದುರಿನ ಪಂದ್ಯದಲ್ಲಿ ಕಸುನ್ ರಜಿತಾ ಎಸೆತವನ್ನು ಸಿಕ್ಸರ್‌ಗೆತ್ತಿದಾಗ ಅವರು ಹತ್ತು ಸಾವಿರ ರನ್‌ ಮೈಲುಗಲ್ಲು ದಾಟಿದರು.

ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್ ಹಾಗೂ ಮಹೇಂದ್ರಸಿಂಗ್ ಧೋನಿ ಅವರ ಸಾಲಿಗೆ ರೋಹಿತ್ ಸೇರಿದರು.

36 ವರ್ಷದ ರೋಹಿತ್ ಇದುವರೆಗೆ 248 ಪಂದ್ಯಗಳಲ್ಲಿ ಆಡಿದ್ದಾರೆ. 30 ಶತಕ, ಮೂರು ದ್ವಿಶತಕ ಹಾಗೂ 51 ಅರ್ಧಶತಕ ಗಳಿಸಿದ್ದಾರೆ.

.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...