ಸಾಂಘಿಕ ಹೋರಾಟದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: ಟೀಂ ಇಂಡಿಯಾಗೆ 4-1 ಟಿ20 ಸರಣಿ

Date:

ಭಾರತ ತಂಡ ಜಿಂಬಾಬ್ವೆ ವಿರುದ್ಧದ ಐದನೇ ಪಂದ್ಯದಲ್ಲಿ 42 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ 4-1 ಮೂಲಕ ಜಯಗಳಿಸಿತು.

ಹಾರಾರೆ ಸ್ಪೋರ್ಟ್‌ ಕ್ಲಬ್‌ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ನೀಡಿದ 168 ರನ್ನುಗಳ ಸವಾಲನ್ನು ಬೆನ್ನಟ್ಟಿದ ಜಿಂಬಾಬ್ವೆ ಭಾರತದ ಬೌಲರ್‌ಗಳ ದಾಳಿಗೆ ಕುಸಿದು 125 ರನ್‌ಗಳಿಗೆ ಆಲೌಟ್‌ ಆಯಿತು.

ವೇಗಿ ಮುಖೇಶ್ ಕುಮಾರ್ 22/4, ಶಿವಂ ದುಬೆ 25/2 ಹಾಗೂ ತುಷಾರ್‌ ದೇಶಪಾಂಡೆ, ವಾಷಿಂಗ್ಟನ್‌ ಸುಂದರ್ ಹಾಗೂ ಅಭಿಷೇಕ್ ಶರ್ಮಾ ತಲಾ ಒಂದೊಂದು ವಿಕೆಟ್ ಕಬಳಿಸಿ ಗೆಲುವಿನ ರೂವಾರಿಗಳಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಂಬಾಬ್ವೆ ಪರ ಡಿಯೋನ್‌ ಮೈಯರ್ಸ್ 34, ತದಿವನ್ಷೆ ಮರುಮಣಿ 27 ಹಾಗೂ ಫರಾಜ್‌ ಅಕ್ರಮ್ 27 ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರ್ಯಾರು 10ರ ಗಡಿ ದಾಟಲಿಲ್ಲ.

ಈ ಸುದ್ದಿ ಓದಿದ್ದೀರಾ? ಕೆಲವೇ ತಿಂಗಳ ಅಂತರದಲ್ಲಿ ಏಳು-ಬೀಳು ಎದುರಿಸಿ ಗೆದ್ದು ಬಂದ ಹಾರ್ದಿಕ್ ಪಾಂಡ್ಯ!

ಮೊದಲು ಟಾಸ್‌ ಗೆದ್ದ ಜಿಂಬಾಬ್ವೆ ಟಿಂ ಇಂಡಿಯಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.ಕಳೆದ ಪಂದ್ಯಗಳಲ್ಲಿ ಮಿಂಚಿದ್ದ ಯಶಸ್ವಿ ಜೈಸ್ವಾಲ್(12), ನಾಯಕ ಶುಭಮನ್‌ ಗಿಲ್(13) ಹಾಗೂ ಅಭಿಷೇಕ್‌ ಶರ್ಮಾ (14) ಬೇಗನೆ ಪೆವಲಿಯನ್‌ಗೆ ತೆರಳಿದರು.

ವಿಕೆಟ್‌ ಕೀಪರ್‌ ಸಂಜು ಸ್ಯಾಮ್ಸನ್‌ ಅವರ ಉಪಯುಕ್ತ ಅರ್ಧ ಶತಕ ತಂಡ ಗೌರವಾನ್ವಿತ ಮೊತ್ತ ಕಲೆ ಹಾಕಲು ಕಾರಣವಾಯಿತು. 45 ಚೆಂಡುಗಳಲ್ಲಿ 4 ಸಿಕ್ಸರ್ ಹಾಗೂ 1 ಬೌಂಡರಿಯಿಂದಿಗೆ ಸ್ಯಾಮ್ಸನ್ 58 ಗಳಿಸಿದರು.

ಸಂಜುಗೆ ರಿಯಾನ್‌ ಪರಾಗ್‌ 22, ಶಿವಂ ದುಬೆ 26 ಉತ್ತಮ ಬೆಂಬಲ ನೀಡಿದರು. ಕೊನೆಯಲ್ಲಿ ಬಂದ ರಿಂಕು ಸಿಂಗ್‌ ಅಜೇಯ 11 ರನ್‌ ಗಳಿಸಿದ ಪರಿಣಾಮ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 167 ಮೊತ್ತ ಕಲೆ ಹಾಕಲು ಕಾರಣರಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...