ಟಿ20 ವಿಶ್ವಕಪ್: ರೋಚಕ ಹಣಾಹಣಿಯಲ್ಲಿ ಇಂಗ್ಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿದ ಭಾರತ; ಬೆಥೆಲ್ ಶತಕ ವ್ಯರ್ಥ

Date:

ಬೃಹತ್ ಮೊತ್ತದ ಹಾಗೂ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನ ರೋಚಕ ಹಣಾಹಣಿಯಲ್ಲಿ ಇಂಗ್ಲೆಂಡ್ ತಂಡವನ್ನು 7 ರನ್‌ಗಳಿಂದ ಮಣಿಸಿದ ಟೀಮ್ ಇಂಡಿಯಾ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಇಂಗ್ಲೆಂಡ್ ಪರ ಯುವ ಆಟಗಾರ ಜೇಕಬ್ ಬೆಥೆಲ್ ಸಿಡಿಸಿದ ಸ್ಫೋಟಕ ಶತಕದ ಹೋರಾಟ ಅಂತಿಮವಾಗಿ ವ್ಯರ್ಥವಾಯಿತು.
ಮೊದಲು ಬ್ಯಾಟ್ ಮಾಡಿದ ಭಾರತ ತಂಡ ತನ್ನ ಪಾಲಿನ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್, ಭಾರತದ ಬೌಲರ್‌ಗಳಿಗೆ ತೀವ್ರ ಪೈಪೋಟಿ ನೀಡಿತು.

ಇಂಗ್ಲೆಂಡ್ ತಂಡದ ಗೆಲುವಿಗೆ ಕೊನೆಯ ಓವರ್‌ನಲ್ಲಿ 30 ರನ್‌ಗಳ ಕಠಿಣ ಸವಾಲು ಎದುರಾಗಿತ್ತು ಕೇವಲ 47 ಎಸೆತಗಳಲ್ಲಿ 104 ರನ್ ಸಿಡಿಸಿದ ಜೇಕಬ್ ಬೆಥೆಲ್ ಹಾಗೂ ಜೇಮೀ ಓವರ್ಟನ್ (1) ಕ್ರೀಸ್‌ನಲ್ಲಿದ್ದರು. ಆದರೆ ಅಂತಿಮ ಓವರ್‌ನಲ್ಲಿ 30 ರನ್ ಕಲೆಹಾಕಲು ವಿಫಲವಾದ ಇಂಗ್ಲೆಂಡ್ 7 ರನ್‌ಗಳ ಅಂತರದಿಂದ ಶರಣಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಪರ ಅತ್ಯುತ್ತಮ ದಾಳಿ ಸಂಘಟಿಸಿದ ಪ್ರಮುಖ ವೇಗಿ ಜಸ್‌ಪ್ರೀತ್ ಬುಮ್ರಾ ತಮ್ಮ 4 ಓವರ್‌ಗಳ ಕೋಟಾದಲ್ಲಿ ಕೇವಲ 33 ರನ್ ನೀಡಿ 1 ಪ್ರಮುಖ ವಿಕೆಟ್ ಕಬಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ರೋಚಕ ಗೆಲುವಿನೊಂದಿಗೆ ಭಾರತ ಪ್ರಶಸ್ತಿ ಸುತ್ತಿಗೆ ಮುನ್ನಡೆದಿದೆ.

ಸಂಕ್ಷಿಪ್ತ ಸ್ಕೋರ್
ಭಾರತ: 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 253
ಇಂಗ್ಲೆಂಡ್: 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 246 (ಭಾರತಕ್ಕೆ 7 ರನ್‌ಗಳ ರೋಚಕ ಜಯ)
(ಜೇಕಬ್ ಬೆಥೆಲ್ 105 ರನ್ (47 ಎಸೆತ)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...