ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿ | ಗೆಲುವಿನೊಂದಿಗೆ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ

Date:

ಅಭಿಷೇಕ್‌ ಶರ್ಮಾ ಅಬ್ಬರದ ಬ್ಯಾಟಿಂಗ್‌, ವರುಣ್ ಚಕ್ರವರ್ತಿ ಮಾರಕ ಬೌಲಿಂಗ್‌ ನೆರವಿನಿಂದ ಆಂಗ್ಲ ಪಡೆ ವಿರುದ್ಧ ಟೀಂ ಇಂಡಿಯಾ 7 ವಿಕೆಟ್‌ಗಳ ಜಯ ಗಳಿಸಿ 5 ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯ ಕುಮಾರ್ ಯಾದವ್‌ ಪಡೆ 1-0 ಮುನ್ನಡೆ ಪಡೆದಿದೆ.

ಈ ಜಯದೊಂದಿಗೆ ಟೀಮ್ ಇಂಡಿಯಾ ಟಿ20 ಕ್ರಿಕೆಟ್‌ನಲ್ಲಿ ಅಮೋಘ ಗೆಲುವಿನ ದಾಖಲೆ ಬರೆದಿದೆ. ಅಂದರೆ ಟಿ20 ಪಂದ್ಯದಲ್ಲಿ ಭಾರತ ತಂಡವು ಇದೇ ಮೊದಲ ಬಾರಿಗೆ 130 ಕ್ಕೂ ಹೆಚ್ಚು ರನ್‌ಗಳ ಗುರಿಯನ್ನು ಅತೀ ವೇಗವಾಗಿ ಬೆನ್ನಟ್ಟಿ ಜಯಭೇರಿ ಬಾರಿಸಿದೆ.

ಇದಕ್ಕೂ ಮುನ್ನ ಭಾರತ ತಂಡ 2012 ರಲ್ಲಿ 130 ಕ್ಕೂ ಸ್ಕೋರ್ ಅನ್ನು ಅತೀ ವೇಗವಾಗಿ ಬೆನ್ನಟ್ಟಿತ್ತು. ಪುಣೆಯಲ್ಲಿ ನಡೆದ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 158 ರನ್‌ಗಳನ್ನು 17.5 ಓವರ್‌ಗಳಲ್ಲಿ ಚೇಸ್ ಮಾಡಿ ದಾಖಲೆ ಬರೆದಿತ್ತು.ಇದೀಗ ಬರೋಬ್ಬರಿ 12 ವರ್ಷಗಳ ಬಳಿಕ 43 ಎಸೆತಗಳನ್ನು ಬಾಕಿ ಇರಿಸಿ ಟೀಮ್ ಇಂಡಿಯಾ 133 ರನ್ ಗಳನ್ನು ಬೆನ್ನಟ್ಟಿ ಗೆದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೊದಲ ಟಿ20 | ಅಭಿಷೇಕ್ 34 ಎಸೆತಗಳಲ್ಲಿ 79; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯ

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ 20 ಓವರ್‌ಗಳಿಗೆ 132 ರನ್‌ ಗಳಿಸಲಷ್ಟೆ ಶಕ್ತವಾಯಿತು. 133 ರನ್‌ ಗುರಿ ಬೆನ್ನಟ್ಟಿದ ಭಾರತ 12.5 ಓವರ್‌ಗಳಿಗೆ 3 ವಿಕೆಟ್‌ ನಷ್ಟಕ್ಕೆ ಗೆದ್ದು ಬೀಗಿತು.

ಟೀಂ ಇಂಡಿಯಾ ವಿರುದ್ಧ ಇಂಗ್ಲೆಂಡ್‌ ಕಳಪೆ ಬ್ಯಾಟಿಂಗ್‌ ಪ್ರದರ್ಶನ ತೋರಿತು. ಆರಂಭಿಕರಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ ಶೂನ್ಯ ಸುತ್ತಿ ತಂಡಕ್ಕೆ ಆಘಾತ ನೀಡಿದರು. ಬೆನ್ ಡಕೆಟ್ ಕೇವಲ 4 ರನ್‌ ಗಳಿಸಿ ಬಂದಷ್ಟೇ ಬೇಗ ಪೆವಿಲಿಯನ್‌ ಸೇರಿದರು. ತಂಡದ ನಾಯಕ ಜೋಸ್ ಬಟ್ಲರ್ ಏಕಾಂಗಿ ಹೋರಾಟ ನಡೆಸಿ ತಂಡಕ್ಕೆ ಭರವಸೆ ಮೂಡಿಸಿದ್ದರು. 44 ಚಂಡುಗಳಿಗೆ 68 ರನ್‌ (8 ಬೌಂಡರಿ, 2 ಸಿಕ್ಸರ್‌) ಗಳಿಸಿದರು. ಹ್ಯಾರಿ ಬ್ರೂಕ್ 17, ಜೋಫ್ರಾ ಆರ್ಚರ್ 12 ರನ್‌ ಗಳಿಸಿದರು. ಉಳಿದಂತೆ ಆಟಗಾರರು ಕಳಪೆ ಬ್ಯಾಟಿಂಗ್‌ ಮಾಡಿದರು.

ಭಾರತ ತಂಡದ ಪರ ಉತ್ತಮ ಬೌಲಿಂಗ್‌ ಪ್ರದರ್ಶನ ತೋರಿದ ವರುಣ್ ಚಕ್ರವರ್ತಿ 3 ವಿಕೆಟ್‌ ಕಿತ್ತು ಗಮನ ಸೆಳೆದರು. ಅರ್ಶದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ತಲಾ 2 ವಿಕೆಟ್‌ ಕಬಳಿಸಿದರು.

ಇಂಗ್ಲೆಂಡ್‌ ನೀಡಿದ 133 ರನ್‌ ಗುರಿ ಬೆನ್ನಟ್ಟಿದ ಭಾರತ ಉತ್ತಮ ಬ್ಯಾಟಿಂಗ್‌ ಪ್ರದರ್ಶನದಿಂದ ಭರ್ಜರಿ ಜಯ ಸಾಧಿಸಿತು. ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್‌ ಶರ್ಮಾ ಜೋಡಿ ಜವಾಬ್ದಾರಿಯುತ ಆಟವಾಡಿ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿತು. ಸಂಜು 26 ರನ್‌ ಗಳಿಸಿ ಔಟಾದರು. ಈ ವೇಳೆ ಕ್ರೀಸ್‌ನಲ್ಲಿ ಅಬ್ಬರಿಸಿದ ಶರ್ಮಾ 34 ಚಂಡುಗಳಲ್ಲಿ 79 ರನ್‌ (5 ಬೌಂಡರಿ, 8 ಸಿಕ್ಸರ್‌)ಗಳಿಸಿದರು. ಈ ಮಧ್ಯೆ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ ಶೂನ್ಯ ಸುತ್ತಿ ಔಟಾಗಿದ್ದು, ಕ್ರಿಕೆಟ್‌ ಪ್ರಿಯರಲ್ಲಿ ಬೇಸರ ಮೂಡಿಸಿತು. ತಿಲಕ್‌ ವರ್ಮಾ 19 ರನ್‌ ಗಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...