ವಿಂಡೀಸ್‌ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ: ಸರಣಿ ಕೈವಶ

Date:

ದೆಹಲಿಯ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿ 7 ವಿಕೆಟ್‌ಗಳಿಂದ ಗೆದ್ದು, ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0ರಿಂದ ಕೈವಶ ಮಾಡಿಕೊಂಡಿತು. ಈ ಗೆಲುವಿನೊಂದಿಗೆ ಭಾರತವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್‌ಗಳ ಪಟ್ಟಿಯಲ್ಲೂ ಮುನ್ನಡೆ ಸಾಧಿಸಿದೆ.

ವೆಸ್ಟ್ ಇಂಡೀಸ್ ನೀಡಿದ 121 ರನ್‌ಗಳ ಸಣ್ಣ ಗುರಿಯನ್ನು ಭಾರತವು 35.2 ಓವರ್‌ಗಳಲ್ಲಿ ಕೇವಲ ಮೂರು ವಿಕೆಟ್ ಕಳೆದುಕೊಂಡು ಪೂರೈಸಿತು. ಕೆ.ಎಲ್. ರಾಹುಲ್ 58 ರನ್‌ಗಳೊಂದಿಗೆ ಅಜೇಯನಾಗಿದ್ದು, ಸಾಯಿ ಸುದರ್ಶನ್ 39 ರನ್‌ಗಳನ್ನು ಪೇರಿಸಿದರು. ನಾಯಕ ಶುಭ್‌ಮನ್ ಗಿಲ್ 13, ಧ್ರುವ ಜುರೇಲ್ 6 ರನ್‌ಗಳನ್ನು ಗೆಲುವಿನಲ್ಲಿ ಕೊಡುಗೆಯಾಗಿ ನೀಡಿದರು.

ಮೊದಲ ಇನಿಂಗ್ಸ್‌ನಲ್ಲಿ ಭಾರತವು ಭರ್ಜರಿಯಾಗಿ 518/5 ರನ್‌ಗಳಿಗೆ ಡಿಕ್ಲೇರ್‌ ಮಾಡಿಕೊಂಡಿತು. ಯಶಸ್ವಿ ಜೈಸ್ವಾಲ್ 175, ಶುಭ್ಮನ್ ಗಿಲ್ ಅಜೇಯ 129, ಸಾಯಿ ಸುದರ್ಶನ್ 87 ಹಾಗೂ ನಿತೀಶ್ ಕುಮಾರ್ ರೆಡ್ಡಿ 43 ರನ್‌ಗಳ ಕೊಡುಗೆಯಿಂದ ತಂಡವು ಬಲಿಷ್ಠ ಮೊತ್ತ ಕಲೆ ಹಾಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಉತ್ತರವಾಗಿ ವೆಸ್ಟ್ ಇಂಡೀಸ್ ಮೊದಲ ಇನಿಂಗ್ಸ್‌ನಲ್ಲಿ 248 ರನ್‌ಗಳಿಗೆ ಆಲೌಟ್ ಆಗಿ ಫಾಲೋಆನ್ ಪಡೆಯಿತು, ಕುಲದೀಪ್ ಯಾದವ್ 5 ವಿಕೆಟ್‌ಗಳನ್ನು ಕಸಿದುಕೊಂಡರೆ, ಜಡೇಜಾ 3 ವಿಕೆಟ್‌ಗಳನ್ನು ಪಡೆದರು.

ಇದನ್ನು ಓದಿದ್ದೀರಾ? ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡ ಸಿದ್ದ; ಶುಭಮನ್ ಗಿಲ್‌ಗೆ ನಾಯಕತ್ವ – ತಂಡಕ್ಕೆ ಮರಳಿದ ಕೊಹ್ಲಿ, ರೋಹಿತ್

ವೆಸ್ಟ್ ಇಂಡೀಸ್ ಫಾಲೋ ಆನ್ ಪಡೆದು ಎರಡನೇ ಇನ್ನಿಂಗ್ಸ್‌ನಲ್ಲಿ 390 ರನ್‌ಗಳನ್ನು ಗಳಿಸಿತು. ಜಾನ್ ಕ್ಯಾಂಪ್‌ಬೆಲ್ 115 ಮತ್ತು ಶೈ ಹೋಪ್ 103 ರನ್‌ಗಳ ಶತಕಗಳು ತಂಡಕ್ಕೆ ಹೋರಾಟದ ಆಸರೆಯಾದವು. ಜಸ್ಟಿನ್ ಗ್ರೀವ್ಸ್ ಅಜೇಯ 50 ರನ್‌ಗಳೊಂದಿಗೆ ಕೊನೆಯವರೆಗೂ ಆಡಿದರು. ಭಾರತದ ಬೌಲರ್‌ಗಳಲ್ಲಿ ಜಸ್‌ಪ್ರೀತ್ ಬುಮ್ರಾ 3 ವಿಕೆಟ್‌ಗಳನ್ನು ಕಿತ್ತರು.

ಫಾಲೋಆನ್‌ನ ನಂತರ ವಿಂಡೀಸ್ ಎರಡನೇ ಇನಿಂಗ್ಸ್‌ನಲ್ಲಿ ಉತ್ತಮ ಹೋರಾಟ ತೋರಿಸಿ 390 ರನ್‌ಗಳನ್ನು ಗಳಿಸಿತು. ಜಾನ್ ಕ್ಯಾಂಪ್ಬೆಲ್ (115) ಹಾಗೂ ಶೈ ಹೋಪ್ (103) ಶತಕಗಳನ್ನು ದಾಖಲಿಸಿದರು. ಆದರೆ ಬಮ್ರಾ ಮತ್ತು ಕುಲದೀಪ್ ತಲಾ 3 ವಿಕೆಟ್‌ಗಳನ್ನು ಪಡೆದು ಮುನ್ನಡೆ ಸಾಧಿಸಲು ತಡೆಯೊಡ್ಡಿದರು.

ಈ ಪಂದ್ಯವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಸೇರಿದ್ದು, ಭಾರತಕ್ಕೆ 12 ಅಂಕಗಳು ಸಿಕ್ಕಿವೆ. ಈ ಗೆಲುವು ಭಾರತದ ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ಮೈಲುಗಲ್ಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...