IND – SA ODI | ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆದ್ದ ಭಾರತ: ಜೈಸ್ವಾಲ್‌ ದಾಖಲೆಯ ಚೊಚ್ಚಲ ಶತಕ

Date:

ಟೆಸ್ಟ್‌ ಸರಣಿ ಸೋತು ಅಪಮಾನಕ್ಕೀಡಾಗಿದ್ದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 2-1 ಅಂತರದಲ್ಲಿ ಏಕದಿನ ಸರಣಿ ತನ್ನದಾಗಿಸಿಕೊಂಡಿದೆ. ಆರಂಭಿಕ ಹಾಗೂ ಯುವ ಆಟಗಾರ ಯಶಸ್ವಿ ಜೈಸ್ವಾಲ್‌ ಚೊಚ್ಚಲ ಶತಕ(ಅಜೇಯ 116) ಹಾಗೂ ಮಾಜಿ ನಾಯಕ ರೋಹಿತ್‌ ಶರ್ಮಾ ಅವರ ಸ್ಫೋಟಕ 75 ರನ್‌ ಹಾಗೂ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಅವರ ಅಜೇಯ ಅರ್ಧ ಶತಕದ ನೆರವಿನಿಂದ ಭಾರತ 9 ವಿಕೆಟ್‌ಗಳ ಭರ್ಜರಿ ಜಯಗಳಿಸಿತು

ವಿಶಾಖಾಪಟ್ಟಣದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ್ದ 270 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ 39.5 ಓವರ್‌ಗಳಲ್ಲಿ ಸುಲಭವಾಗಿ ಗುರಿ ಮುಟ್ಟಿತು.

ಅಜೇಯರಾಗಿ ಉಳಿದ ಯಶಸ್ವಿ ಜೈಸ್ವಾಲ್‌ ಅವರ 121 ಎಸೆತಗಳ ಆಟದಲ್ಲಿ 12 ಬೌಂಡರಿ ಹಾಗೂ 2 ಸಿಕ್ಸರ್‌ಗಳಿದ್ದವು. ಇದರೊಂದಿಗೆ ಜೈಸ್ವಾಲ್‌ ಮೂರು ಮಾದರಿಗಳಲ್ಲಿ ಶತಕ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರದಾರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಹಿತ್‌ ಶರ್ಮಾ 73 ಎಸೆತಗಳಲ್ಲಿ 7 ಸಿಕ್ಸರ್ 3 ಬೌಂಡರಿಗಳೊಂದಿಗೆ 75 ರನ್‌ ಬಾರಿಸಿದರು. ವಿರಾಟ್‌ ಕೊಹ್ಲಿ 45 ಚೆಂಡುಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್‌ ಸಿಡಿಸಿದರು.

ಹರಿಣಗಳ ತಂಡದ ಯಾವ ಬೌಲರ್‌ ಕೂಡ ಟೀಂ ಇಂಡಿಯಾದ ಆಟಗಾರರನ್ನು ಕಟ್ಟಿ ಹಾಕಲು ಸಾಧ್ಯವಾಗಲಿಲ್ಲ. ಇದಕ್ಕೂ ಮೊದಲು ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ತೆಂಬ ಬವುಮಾ ಸಾರಥ್ಯದ ದಕ್ಷಿಣ ಆಫ್ರಿಕಾ  ಕ್ವಿಂಟನ್ ಡಿಕಾಕ್‌ ಶತಕ(106) ಶತಕದ ನೆರವಿನಿಂದ 47.5 ಓವರ್‌ಗಳಲ್ಲಿ 270 ರನ್‌ ಪೇರಿಸಿತು.

ಇದನ್ನು ಓದಿದ್ದೀರಾ? ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ

ಟೀಂ ಇಂಡಿಯಾ ಪರ ಕುಲ್ದೀಪ್ ಯಾದವ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ತಲಾ 4 ವಿಕೆಟ್ ಕಬಳಿಸಿದರೆ, ರವೀಂದ್ರ ಜಡೇಜಾ ಹಾಗೂ ಅರ್ಷದೀಪ್‌ ಸಿಂಗ್‌ ಒಂದೊಂದು ವಿಕೆಟ್ ಕಬಳಿಸಿದರು.

ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳಿಂದ ರನ್ ಮಳೆಯೇ ಹರಿದಿತ್ತು. ಹೀಗಾಗಿ ಮೂರನೇ ಪಂದ್ಯದಲ್ಲೂ ಅದನ್ನೇ ನಿರೀಕ್ಷಿಸಲಾಗಿತ್ತು. ಆದರೆ ಮೂರನೇ ಪಂದ್ಯದಲ್ಲಿ ಲಯ ಕಂಡುಕೊಂಡ ಟೀಂ ಇಂಡಿಯಾ ವೇಗಿಗಳು ಆಫ್ರಿಕಾ ತಂಡವನ್ನು 300 ರನ್​ಗಳ ಒಳಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...