ಸ್ಯಾಫ್ ಚಾಂಪಿಯನ್‌ಶಿಪ್‌ ಫುಟ್‌ಬಾಲ್‌ ಟೂರ್ನಿ | ಸೆಮಿಫೈನಲ್‌ ಪ್ರವೇಶಿಸಿದ ಭಾರತ

Date:

ಸ್ಯಾಫ್ ಚಾಂಪಿಯನ್‌ಶಿಪ್‌ನ ಹಾಲಿ ಚಾಂಪಿಯನ್‌ ಭಾರತ ಸೆಮಿ ಫೈನಲ್‌ ಪ್ರವೇಶಿಸಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣಲ್ಲಿ ಶನಿವಾರ ನಡೆದ ಗುಂಪು ಹಂತದ ತನ್ನ ಎರಡನೇ ಪಂದ್ಯದಲ್ಲಿ ಭಾರತ, ನೇಪಾಳ ತಂಡವನ್ನು 2-0 ಗೋಲುಗಳಿಂದ ಮಣಿಸಿತು.

ʻಗ್ರೂಪ್‌-ಎʼ ನಲ್ಲಿ ಆಡಿದ 2 ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸುವ ಮೂಲಕ ಭಾರತ, ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದೆ. ಬುಧವಾರ ನಡೆದಿದ್ದ ಟೂರ್ನಿಯ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಭಾರತ 4-0 ಗೋಲುಗಳ ಅಂತರದಿಂದ ಭರ್ಜರಿಯಾಗಿ ಮಣಿಸಿತ್ತು.

ಶನಿವಾರ ನಡೆದ ಪಂದ್ಯದ ಮೊದಲಾರ್ಧದಲ್ಲಿ ಉಭಯ ತಂಡಗಳು ಗೋಲು ಗಳಿಸಲು ವಿಫಲವಾಗಿದ್ದವು. ದ್ವಿತಿಯಾರ್ಧದ 62ನೇ ನಿಮಿಷದಲ್ಲಿ ನಾಯಕ ಸುನಿಲ್‌ ಛೆಟ್ರಿ ಮೂಲಕ ಭಾರತ ಗೋಲಿನ ಖಾತೆ ತಗೆರೆದಿತ್ತು. ಈ ಮೂಲಕ ಅಂತಾರಾಷ್ಟ್ರೀಯ ಫುಟ್‌ಬಾಲ್‌ನಲ್ಲಿ ತಮ್ಮ ಗೋಲಿನ ಗಳಿಕೆಯನ್ನು ಛೆಟ್ರಿ 91ಕ್ಕೆ ಏರಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಸ್ಯಾಫ್ ಚಾಂಪಿಯನ್‌ಶಿಪ್‌ | ಛೆಟ್ರಿ ಹ್ಯಾಟ್ರಿಕ್‌; ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಇದಾದ 8ನೇ ನಿಮಿಷದಲ್ಲಿ ನವೋರೆಮ್ ಮಹೇಶ್ ಸಿಂಗ್, ತಂಡಕ್ಕೆ ಎರಡನೇ ಗೋಲಿನ ಕೊಡುಗೆ ನೀಡಿದರು.  ಮಣಿಪುರ ಮೂಲದ ವಿಂಗರ್ ಮಹೇಶ್‌, ಅಂತಾರಾಷ್ಟ್ರೀಯ ಫುಟ್‌ಬಾಲ್‌ ಪಂದ್ಯದಲ್ಲಿ ದಾಖಲಿಸಿದ ಚೊಚ್ಚಲ ಗೋಲು ಇದಾಗಿತ್ತು.

ಮಂಗಳವಾರ ನಡೆಯುವ ಗುಂಪು ಹಂತದ ಮೂರನೇ ಪಂದ್ಯದಲ್ಲಿ ಭಾರತ, ಗ್ರೂಪ್‌-ಎʼ ಅಗ್ರಸ್ಥಾನಿ ಕುವೈತ್‌ ಸವಾಲನ್ನು ಎದುರಿಸಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...