ಇಂಗ್ಲೆಂಡ್‌ ಪ್ರವಾಸಕ್ಕೆ ಭಾರತದ ಅಂಡರ್‌ 19 ತಂಡ ಪ್ರಕಟ; ವೈಭವ್ ಸೂರ್ಯವಂಶಿ, ಆಯುಷ್‌ಗೆ ಸ್ಥಾನ

Date:

ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಅಂಡರ್‌ 19 ಕ್ರಿಕೆಟ್ ಸರಣಿಗಾಗಿ ಪ್ರವಾಸಿ ಭಾರತ ತಂಡವನ್ನು ಬಿಸಿಸಿಐ ಇಂದು (ಗುರುವಾರ) ಪ್ರಕಟಿಸಿದೆ.

ಭಾರತ ತಂಡವನ್ನು 17 ವರ್ಷದ ಆಯುಷ್ ಮಾತ್ರೆ ಮುನ್ನಡೆಸಲಿದ್ದು, 14 ವರ್ಷದ ವೈಭವ್ ಸೂರ್ಯವಂಶಿ ಸಹ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಪ್ರಸಕ್ತ ಸಾಗುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆಯುಷ್ ಮತ್ತು ರಾಜಸ್ಥಾನ ರಾಯಲ್ಸ್ ತಂಡವನ್ನು ವೈಭವ್ ಪ್ರತಿನಿಧಿಸುತ್ತಿದ್ದಾರೆ.ಐಪಿಎಲ್‌ನಲ್ಲಿ ಈ ಉದಯೋನ್ಮುಖ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಗ್ಲೆಂಡ್ ವಿರುದ್ಧದ ಅಂಡರ್ 19 ಸರಣಿಯು ಜೂನ್ 24ರಿಂದ ಆರಂಭವಾಗಲಿದೆ. 50 ಓವರ್‌ಗಳ ಅಭ್ಯಾಸ ಪಂದ್ಯದ ಬಳಿಕ ಐದು ಪಂದ್ಯಗಳ ಯೂತ್ ಏಕದಿನ ಸರಣಿಯು ನಡೆಯಲಿದೆ. ತದನಂತರ ನಾಲ್ಕು ದಿನಗಳ ಎರಡು ಪಂದ್ಯಗಳು ನಡೆಯಲಿವೆ.

ಇದನ್ನು ಓದಿದ್ದೀರಾ? 90.23 ಮೀಟರ್ ದೂರ ಜಾವೆಲಿನ್ ಎಸೆದು ಹೊಸ ದಾಖಲೆ ಬರೆದ ನೀರಜ್ ಚೋಪ್ರಾ

14 ವರ್ಷದ ಸೂರ್ಯವಂಶಿ, ಐಪಿಎಲ್ ನಲ್ಲಿ ಶತಕ ಗಳಿಸಿದ (35 ಎಸೆತ) ಅತಿ ಕಿರಿಯ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಹಾಗೆಯೇ ಐಪಿಎಲ್‌ ನಲ್ಲಿ ವೇಗದ ಶತಕ ಗಳಿಸಿದ ಭಾರತೀಯ ಬ್ಯಾಟರ್ ಎನಿಸಿದ್ದಾರೆ. ಕ್ರಿಸ್ ಗೇಲ್‌ ಬಳಿಕ ಐಪಿಎಲ್‌ನಲ್ಲಿ ವೇಗದ ಶತಕ ಗಳಿಸಿದ 2ನೇ ಆಟಗಾರರಾಗಿದ್ದಾರೆ. ಸಿಎಸ್‌ಕೆ ಪರ ಆಡುತ್ತಿರುವ ಆಯುಷ್ ಮಾತ್ರೆ ಕೂಡ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ.

ಕಳೆದ ವರ್ಷ ಆಸ್ಟ್ರೇಲಿಯಾ ಅಂಡರ್ 19 ತಂಡದ ವಿರುದ್ಧದ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಕೇರಳದ ಬೆಗ್ ಸ್ಪಿನ್ನ‌ರ್ ಮೊಹಮ್ಮದ್ ಇನಾನ್ ಸಹ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್‌ ಪ್ರವಾಸ ಜೂನ್‌ 24 ರಂದು ಆರಂಭವಾಗಿ ಜುಲೈ ಅಂತ್ಯದವರೆಗೂ ನಡೆಯಲಿದೆ.

ಭಾರತ ಅಂಡರ್-19 ತಂಡ:

ಆಯುಷ್ ಮಾತ್ರೆ (ನಾಯಕ), ವೈಭವ್ ಸೂರ್ಯವಂಶಿ, ವಿಹಾನ್ ಮಲ್ಹೋತ್ರ, ಮೌಲ್ಯರಾಜ್‌ಸಿನ್ಹ್ ಚಾವ್ಡಾ, ರಾಹುಲ್ ಕುಮಾರ್, ಅಭಿಜ್ಞಾನ್ ಕುಂಡು (ಉಪನಾಯಕ ಮತ್ತು ವಿಕೆಟ್ ಕೀಪರ್), ಹರ್ವಾಂಶ್ ಸಿಂಗ್ (ವಿಕೆಟ್ ಕೀಪರ್), ಆರ್.ಎಸ್. ಅಂಬರೀಶ್, ಕನಿಷ್ಕ್ ಚೌಹಾಣ್, ಖಿಲಾನ್ ಪಟೇಲ್, ಹೆನಿಲ್ ಪಟೇಲ್, ಯುಧಾಜಿತ್ ಗುಹಾ, ಪ್ರಣವ್ ರಾಘವೇಂದ್ರ, ಮೊಹಮ್ಮದ್ ಇಹಾನ್‌, ಆದಿತ್ಯ ರಾಣಾ, ಅನ್ಮೋಲ್‌ಜೀತ್ ಸಿಂಗ್

ಮೀಸಲು ಆಟಗಾರರು: ನಮನ್ ಪುಷ್ಕಕ್, ಡಿ. ದಿಪೇಶ್, ವೇದಾಂತ್ ತ್ರಿವೇದಿ, ವಿಕಲ್ಪ್‌ ತಿವಾರಿ, ಅಲಂಕೃತ್ ರಾಪೊಲ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...