ಐಸಿಸಿ ಏಕದಿನ ಬ್ಯಾಟಿಂಗ್ ರ್‍ಯಾಂಕಿಂಗ್‌: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು

Date:

ಪ್ರಸ್ತುತ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಈ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಏಕದಿನ ರ್‍ಯಾಂಕಿಂಗ್‌​ನಲ್ಲಿ ಭಾರತದ ನಾಲ್ವರು ಬ್ಯಾಟರ್​ಗಳು ಅಗ್ರ ಹತ್ತರ ಸ್ಥಾನ ಪಡೆದುಕೊಂಡಿದ್ದಾರೆ.

ಈ ನಾಲ್ವರಲ್ಲಿ ಮೂವರು ಮೂವರು ಭಾರತೀಯರು ಅಗ್ರ -5 ರಲ್ಲಿದ್ದಾರೆ. ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯುವ ಆಟಗಾರ ಶುಭ್​ಮನ್ ಗಿಲ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಗಿಲ್ ಒಟ್ಟು 817 ಅಂಕಗಳೊಂದಿಗೆ ಅಗ್ರಾಸ್ಥಾನ ಕಾಯ್ದುಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಪಾಕಿಸ್ತಾನ ತಂಡದ ಬ್ಯಾಟರ್ ಬಾಬರ್ ಆಜಂ. ಚಾಂಪಿಯನ್ಸ್ ಟ್ರೋಫಿಯಲ್ಲಿನ ಕಳಪೆ ಪ್ರದರ್ಶನದ ಹೊರತಾಗಿಯೂ ಬಾಬರ್ ಒಟ್ಟು 770 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿರುವುದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ. ಹಿಟ್​ಮ್ಯಾನ್ 757 ಅಂಕಗಳೊಂದಿಗೆ ತೃತೀಯ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ನಮ್ಮ ಪೂರ್ವಜರು ಜೈಲಿನಲ್ಲಿದ್ದಾಗ, ನಿಮ್ಮವರು ಬ್ರಿಟೀಷರ ಗುಲಾಮರಾಗಿದ್ದರು’: ಸಂಘಿಗೆ ಸಾಹಿತಿ ಜಾವೇದ್‌ ಅಖ್ತರ್ ತಿರುಗೇಟು

ದಕ್ಷಿಣ ಆಫ್ರಿಕಾದ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ 749 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಪಾಕಿಸ್ತಾನದ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ 743 ಅಂಕಗಳನ್ನು ಪಡೆದಿದ್ದಾರೆ. ಹಾಗೆಯೇ 717 ಅಂಕಗಳನ್ನು ಹೊಂದಿರುವ ನ್ಯೂಜಿಲೆಂಡ್​ನ ಡೇರಿಲ್ ಮಿಚೆಲ್ ಆರನೇ ಸ್ಥಾನವನ್ನು ಪಡೆದಿದ್ದಾರೆ.

ಐರ್ಲೆಂಡ್​ನ ಹ್ಯಾರಿ ಟೆಕ್ಟರ್ (713) ಹಾಗೂ ಶ್ರೀಲಂಕಾದ ಚರಿತ್ ಅಸಲಂಕಾ (694) ಕ್ರಮವಾಗಿ 7ನೇ ಮತ್ತು 8ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ 679 ಅಂಕಗಳೊಂದಿಗೆ 9ನೇ ಸ್ಥಾನ ಅಲಂಕರಿಸಿದ್ದಾರೆ. 672 ಅಂಕಗಳನ್ನು ಹೊಂದಿರುವ ವೆಸ್ಟ್ ಇಂಡೀಸ್​ನ ಶಾಯ್ ಹೋಪ್ ಟಾಪ್-10 ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...