ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಹರಿಣಗಳ ತಂಡ ಟೀಂ ಇಂಡಿಯಾಗೆ 271 ರನ್‌ಗಳ ಗುರಿ ನೀಡಿದೆ.
ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಕ್ವಿಂಟನ್ ಡಿಕಾಕ್ ಶತಕ(106) ಹಾಗೂ ನಾಯಕ ತೆಂಬ ಬವುಮಾ(48) ಅವರ ಸಮಯೋಚಿತ ಆಟದ ನೆರವಿನಿಂದ 47.5 ಓವರ್‌ಗಳಲ್ಲಿ 270 ರನ್ ಪೇರಿಸಿತು.
ಇದನ್ನು ಓದಿದ್ದೀರಾ? ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ
ಟೀಂ ಇಂಡಿಯಾ ಪರ ಕುಲ್ದೀಪ್ ಯಾದವ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ತಲಾ 4 ವಿಕೆಟ್ ಕಬಳಿಸಿದರೆ, ರವೀಂದ್ರ ಜಡೇಜಾ ಹಾಗೂ ಅರ್ಷದೀಪ್ ಸಿಂಗ್ ಒಂದೊಂದು ವಿಕೆಟ್ ಕಬಳಿಸಿದರು.
ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳಿಂದ ರನ್ ಮಳೆಯೇ ಹರಿದಿತ್ತು. ಹೀಗಾಗಿ ಮೂರನೇ ಪಂದ್ಯದಲ್ಲೂ ಅದನ್ನೇ ನಿರೀಕ್ಷಿಸಲಾಗಿತ್ತು. ಆದರೆ ಮೂರನೇ ಪಂದ್ಯದಲ್ಲಿ ಲಯ ಕಂಡುಕೊಂಡ ಟೀಂ ಇಂಡಿಯಾ ವೇಗಿಗಳು ಆಫ್ರಿಕಾ ತಂಡವನ್ನು 300 ರನ್‌ಗಳ ಒಳಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ.





