ಕ್ರಿಕೆಟ್‌ಗೆ ಪಿಯೂಷ್ ಚಾವ್ಲಾ ನಿವೃತ್ತಿ; 2 ಬಾರಿ ಭಾರತ ವಿಶ್ವಕಪ್‌ ಗೆದ್ದಾಗ ತಂಡದ ಪ್ರಮುಖ ಬೌಲರ್‌

Date:

ಭಾರತ ಎರಡು ಬಾರಿ ವಿಶ್ವಕಪ್‌ ಗೆದ್ದಿದ್ದ ಸಂದರ್ಭದಲ್ಲಿ ತಂಡದ ಪ್ರಮುಖ ಬೌಲರ್‌ ಆಗಿದ್ದ ಲೆಗ್‌ ಸ್ಪಿನ್ನರ್‌ ಪಿಯೂಶ್‌ ಚಾವ್ಲಾ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಇಂದು ನಿವೃತ್ತಿ ಘೋಷಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿರುವ ಅವರು, “ಎರಡು ದಶಕಗಳಿಗೂ ಹೆಚ್ಚು ಕಾಲ ಮೈದಾನದಲ್ಲಿದ್ದ ನಂತರ, ಸೊಗಸಾದ ಆಟಕ್ಕೆ ವಿದಾಯ ಹೇಳುವ ಸಮಯ ಬಂದಿದೆ” ಎಂದು 36 ವರ್ಷದ ಪಿಯೂಶ್‌ ಚಾವ್ಲಾ ಬರೆದುಕೊಂಡಿದ್ದಾರೆ.

ಪಿಯೂಶ್‌ ಚಾವ್ಲಾ ಅವರು ಭಾರತ ತಂಡ 2007ರ ಟಿ20 ಹಾಗೂ 2011ರ ಏಕದಿನ ವಿಶ್ವಕಪ್‌ ಗೆದ್ದ ತಂಡದ ಸದಸ್ಯರಾಗಿದ್ದರು. ಮೂರು ಟೆಸ್ಟ್‌, 25 ಏಕದಿನ ಹಾಗೂ 7 ಟಿ20 ಆಡಿರುವ ಪಿಯೂಷ್‌, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 446 ವಿಕೆಟ್‌ ಹಾಗೂ 5486 ರನ್‌ಗಳನ್ನು ಪೇರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚಿನ್ನಸ್ವಾಮಿ ಸ್ಟೇಡಿಯಂ ದುರಂತ: ಆರ್‌ಸಿಬಿ, ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ಧ ಎಫ್‌ಐಆರ್‌ ದಾಖಲು

“ಭಾರತವು ಅತ್ಯುನ್ನತ ಟೂರ್ನಿಯಾದ 2007ರ ಟಿ20 ಹಾಗೂ 2011ರ ಏಕದಿನ ವಿಶ್ವಕಪ್‌ ಜಯಿಸಿದ ತಂಡದ ಸದಸ್ಯನಾಗಿದ್ದು, ಈ ಅದ್ಭುತ ಪ್ರಯಾಣದ ಪ್ರತಿಯೊಂದು ಕ್ಷಣವೂ ಅಭೂತಪೂರ್ವವಾದುದು. ಈ ನೆನಪುಗಳು ನನ್ನ ಹೃದಯದಲ್ಲಿ ಸದಾ ಕಾಲ ಉಳಿದುಕೊಳ್ಳುತ್ತದೆ” ಎಂದು ಬರೆದುಕೊಂಡಿದ್ದಾರೆ.

“ಐಪಿಎಲ್‌ ಟೂರ್ನಿಯಲ್ಲಿ ನನಗೆ ಅವಕಾಶ ಕೊಟ್ಟ ಪ್ರಾಂಚೈಸಿಗಳಾದ ಪಂಜಾಬ್‌ ಕಿಂಗ್ಸ್, ಕೋಲ್ಕತ್ತಾ ನೈಟ್‌ ರೈಡರ್ಸ್‌, ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳಿಗೆ ಹೃದಯಪೂರ್ವಕ ಧನ್ಯವಾದಗಳು. ಐಪಿಎಲ್‌ ಟೂರ್ನಿ ನನ್ನ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ನಿಜವಾದ ವಿಶೇಷ ಅಧ್ಯಾಯವಾಗಿದೆ. ಅದರಲ್ಲಿ ಆಡುವ ಪ್ರತಿ ಕ್ಷಣವನ್ನು ನಾನು ಪ್ರೀತಿಸುತ್ತೇನೆ. ನನ್ನನ್ನು ಉತ್ತಮ ಕ್ರಿಕೆಟರ್‌ ಆಗಿ ರೂಪಿಸಿದ ನನ್ನ ಕೋಚ್‌ಗಳಿಗೂ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...