ಫುಟ್‌ಬಾಲ್‌ | ಛೆಟ್ರಿ ಗೋಲಿನ ಬಲದಲ್ಲಿ ಇಂಟರ್‌ಕಾಂಟಿನೆಂಟಲ್‌ ಕಪ್‌ ಗೆದ್ದ ಭಾರತ

Date:

ನಾಯಕ ಸುನಿಲ್ ಛೆಟ್ರಿ ಮತ್ತು ಲಾಲಿಯನ್ಜುವಾಲಾ ಚಾಂಗ್ಟೆ ಗಳಿಸಿದ  ಗೋಲುಗಳ ನೆರವಿನಿಂದ ಭಾರತ ತಂಡ, ಇಂಟರ್‌ಕಾಂಟಿನೆಂಟಲ್ ಕಪ್ 2023 ಫುಟ್‌ಬಾಲ್‌ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ.  

ಭುವನೇಶ್ವರದಲ್ಲಿರುವ ಕಳಿಂಗ ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರೆದುರು ನಡೆದ ಫೈನಲ್‌ ಹೋರಾಟದಲ್ಲಿ ಭಾರತ, ಇಗೋರ್‌ ಸ್ಟಿಮಾಕ್‌ ಕೋಚ್‌ ಆಗಿರುವ ಲೆಬನಾನ್‌ ತಂಡವನ್ನು 2-0 ಗೋಲುಗಳ ಅಂತರದಿಂದ ಮಣಿಸಿ ಚಾಂಪಿಯನ್‌ ಆಯಿತು. ಈ ಗೆಲುವಿನೊಂದಿಗೆ ಫಿಫಾ ರ‍್ಯಾಂಕಿಂಗ್‌ನಲ್ಲಿ ಭಾರತ ಮೊದಲ ಬಾರಿಗೆ 98ನೇ ಸ್ಥಾನಕ್ಕೇರಿದೆ.

ಸಮಬಲದ ಹೋರಾಟಕ್ಕೆ ಸಾಕ್ಷಿಯಾದ ಮೊದಲಾರ್ಧ ಗೋಲು ರಹಿತವಾಗಿ ಕೊನೆಗೊಂಡಿತ್ತು. ದ್ವಿತಿಯಾರ್ಧದ ಮೊದಲ ನಿಮಿಷದಲ್ಲೇ (46) ನಾಯಕ ಸುನಿಲ್ ಛೆಟ್ರಿ ಗೋಲಿನ ಮೂಲಕ ಭಾರತ ಮುನ್ನಡೆ ಸಾಧಿಸಿತ್ತು. ಇದಾದ ಬಳಿಕ ಪಂದ್ಯದಲ್ಲಿ ಪೂರ್ಣ ಹಿಡಿತ ಸಾಧಿಸಿದ ಭಾರತ, 65ನೇ ನಿಮಿಷದಲ್ಲಿ ಲಾಲಿಯನ್ಜುವಾಲಾ ಚಾಂಗ್ಟೆ ಗೋಲಿನ ಮೂಲಕ ಮುನ್ನಡೆಯನ್ನು 2-0ಗೆ ಏರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

80ನೇ ನಿಮಿಷದಲ್ಲಿ ಲೆಬನಾನ್‌ ತಂಡದ ಪಾಲಿಗೆ ಗೋಲು ಗಳಿಸುವ ಉತ್ತಮ ಅವಕಾಶ ನಿರ್ಮಾಣವಾಗಿತ್ತು. ಆದರೆ ಲೆಫ್ಟ್‌ ವಿಂಗ್‌ನಿಂದ ದೊರೆತ ಕ್ರಾಸ್‌ಅನ್ನು ಗೋಲಾಗಿ ಪರಿವರ್ತಿಸುವಲ್ಲಿ ನಾಯಕ ಹಸನ್‌ ಮಾಟೌಕ್‌ ವಿಫಲವಾದರು.

ಯುವ  ಆಟಗಾರರನ್ನು ಒಳಗೊಂಡ ಲೆಬನಾನ್‌ ಮತ್ತು ಭಾರತ ತಂಡಗಳ ನಡುವೆ ಟೂರ್ನಿಯ ಗುಂಪು ಹಂತದಲ್ಲಿ ನಡೆದಿದ್ದ ಪಂದ್ಯ, ಗೋಲು ರಹಿತ ಡ್ರಾದಲ್ಲಿ ಅಂತ್ಯಗೊಂಡಿತ್ತು.

ಭಾರತದ ಸಾರ್ವಕಾಲಿಕ ಗರಿಷ್ಠ ಗೋಲು ಸ್ಕೋರರ್‌  ಆಗಿರುವ ಸುನೀಲ್‌ ಛೇಟ್ರಿ, ಭಾನುವಾರ ಲೆಬನಾನ್‌ ವಿರುದ್ಧ 87ನೇ ಅಂತಾರಾಷ್ಟ್ರೀಯ ಗೋಲು ದಾಖಲಿಸಿ ಮಿಂಚಿದರು.

2021ರಲ್ಲಿ ಎಸ್‌ಎಎಫ್‌ಎಫ್‌ (ಸ್ಯಾಫ್) ಚಾಂಪಿಯನ್‌ಶಿಪ್ ಗೆಲುವಿನ ಬಳಿಕ ಭಾರತೀಯ ಫುಟ್‌ಬಾಲ್‌ ತಂಡ ಗೆಲ್ಲುತ್ತಿರುವ ಮೊದಲ ಅಂತಾರಾಷ್ಟ್ರೀಯ ಟ್ರೋಫಿ ಇದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...