IPL | ಹೈದ್ರಾಬಾದ್‌ ತಂಡದಿಂದ ಹೊರಬಿದ್ದ ಬಳಿಕ ಭಾವನಾತ್ಮಕ ಪತ್ರ ಬರೆದ ಭುವನೇಶ್ವರ್‌

Date:

ವೇಗಿ ಬೌಲರ್‌ ಭುವನೇಶ್ವರ್ ಕುಮಾರ್ ಅವರು ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಸನ್ ರೈಸರ್ಸ್‌ ಹೈದ್ರಾಬಾದ್ (ಎಸ್‌ಆರ್‌ಎಚ್‌) ತಂಡವನ್ನು ತೊರೆದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಸೇರಿಕೊಂಡಿದ್ದಾರೆ. 11 ವರ್ಷಗಳ ಕಾಲ ಎಸ್‌ಆರ್‌ಎಚ್‌ ತಂಡದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಅವರು ತಂಡ ತೊರೆದ ಬಳಿಕ ಎಸ್‌ಆರ್‌ಎಚ್‌ಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

2011ರಲ್ಲಿ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆಡಿದ್ದ ಭುವನೇಶ್ವರ್ ಈವರೆಗೆ ಬರೋಬ್ಬರಿ 176 ಪಂದ್ಯಗಳಲ್ಲಿ ಬೌಲ್ ಮಾಡಿದ್ದಾರೆ. 181 ವಿಕೆಟ್‌ಗಳನ್ನು ಪಡೆದಿದ್ದಾರೆ. 2024ರ ಐಪಿಎಲ್‌ನಲ್ಲಿ ಎಸ್‌ಆರ್‌ಎಚ್‌ ತಂಡದಲ್ಲಿ ಆಡಿದ್ದ ಅವರು 16 ಪಂದ್ಯಗಳಲ್ಲಿ 11 ವಿಕೆಟ್‌ಗಳನ್ನು ಪಡೆದಿದ್ದರು.

ಆರ್‌ಸಿಬಿ ಸೇರಿದ ಬಳಿಕ ಭಾವನಾತ್ಮಕ ಪತ್ರ ಬರೆದಿದ್ದು, “SRH ಜೊತೆಗಿನ 11 ವರ್ಷಗಳ ನಂಬಲಾಗದ ಪಯಣದ ನಂತರ, ನಾನು ಈ ತಂಡಕ್ಕೆ ವಿದಾಯ ಹೇಳುತ್ತಿದ್ದೇನೆ. ಹಲವಾರು ಮರೆಯಲಾಗದ ಮತ್ತು ಅನುಸರಿಸಬೇಕಾದ ನೆನಪುಗಳನ್ನು ನನ್ನಲ್ಲಿವೆ. ಅದ್ಭುತ ವಿಜಯಗಳು, ಟ್ರೋಫಿ ಗೆಲುವು, ಎರಡು ಬಾರಿ ನೇರಳೆ ಕ್ಯಾಪ್ ಪಡೆದದ್ದು, ಇನ್ನೂ ಹಲವಾರು ನೆನಪುಗಳಿವೆ. ಎಲ್ಲಕ್ಕಿಂತ ಮಿಗಿಲಾದ ವಿಷಯವೆಂದರೆ ಅಭಿಮಾನಿಗಳ ಪ್ರೀತಿ. ನಾನು ಇಂದು ನನ್ನೊಂದಿಗೆ ಈ ಪ್ರೀತಿ ಮತ್ತು ಬೆಂಬಲವನ್ನು ಹೊತ್ತೊಯ್ಯುತ್ತಿದ್ದೇನೆ. ನಿಮ್ಮ ಬೆಂಬಲ ನಿರಂತರ ಮತ್ತು ಶಾಶ್ವತವಾಗಿರಲಿ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ನಡೆದ ಐಪಿಎಲ್‌ ಬಿಡ್‌ನಲ್ಲಿ ಭುವನೇಶ್ವರ್ ಕುಮಾರ್ ಅವರ ಹರಾಜು ಪ್ರಕ್ರಿಯೆ 2 ಕೋಟಿ ರೂ.ಗಳೊಂದಿಗೆ ಆರಂಭವಾಯಿತು. ಎಲ್‌ಎಸ್‌ಜಿ ಮತ್ತು ಮುಂಬೈ ಪ್ರಾಂಚೈಸಿಗಳು ಬಿಡ್ಡಿಂಗ್‌ಗಾಗಿ ಹಣಾಹಣಿ ನಡೆಸಿದವು. ಬಿಡ್‌ಅನ್ನು ಎಲ್‌ಎಸ್‌ಜಿ 10 ಕೋಟಿ ರೂ.ಗೆ ಹೆಚ್ಚಿಸಿತು. ಬಳಿಕ, ಮುಂಬೈ ಪ್ರಾಂಚೈಸಿ ಹಿಂದೆ ಸರಿಯಿತು. ಬಳಿಕ, ಆರ್‌ಸಿಬಿ 10.75 ಕೋಟಿ ರೂ.ಗಳ ಬಿಡ್‌ ಮಾಡಿ, ಭುವನೇಶ್ವರ್‌ ಅವರನ್ನು ತಂಡಕ್ಕೆ ಸೇರಿಸಿಕೊಂಡಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...