ಐಪಿಎಲ್‌ 2023 | ದಾಖಲೆಯ 10ನೇ ಬಾರಿ ಫೈನಲ್ ಪ್ರವೇಶಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌

Date:

ಎಂಎಸ್‌ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌, ಸಿಎಸ್‌ಕೆ ತಂಡ ದಾಖಲೆಯ 10ನೇ ಬಾರಿಗೆ ಐಪಿಎಲ್‌ ಟೂರ್ನಿಯ ಫೈನಲ್‌ ಪ್ರವೇಶಿಸಿದೆ.

ಮಂಗಳವಾರ ಚೆನ್ನೈ ಚೆಪಾಕ್‌  ಮೈದಾನದಲ್ಲಿ ನಡೆದ ಕ್ವಾಲಿಫೈಯರ್-1 ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡವನ್ನು ಸಿಎಸ್‌ಕೆ 15 ರನ್‌ಗಳಿಂದ ಭರ್ಜರಿಯಾಗಿ ಮಣಿಸಿತು.

ಈ ಗೆಲುವಿನೊಂದಿಗೆ ಚೆನ್ನೈ ತಂಡ  ಐಪಿಎಲ್‌ 16ನೇ ಆವೃತ್ತಿಯಲ್ಲಿ ಮೊದಲ ತಂಡವಾಗಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದೆ. ಮತ್ತೊಂದೆಡೆ ಚೆನ್ನೈ ಎದುರು ಟೂರ್ನಿಯಲ್ಲಿ ಮೊದಲ ಸೋಲು ಕಂಡ ಹಾರ್ದಿಕ್‌ ಬಳಗ, ಮುಂಬೈ-ಲಕ್ನೋ ತಂಡಗಳ ನಡುವಿನ ಎಲಿಮಿನೇಟರ್ ಪಂದ್ಯದ ವಿಜೇತರನ್ನು‌ ಕ್ವಾಲಿಫೈಯರ್‌-2ನಲ್ಲಿ ಎದುರಿಸಲಿದೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ್ದ ಸಿಎಸ್‌ಕೆ ತಂಡ, ಆರಂಭಿಕರಾದ ಋತುರಾಜ್‌ ಗಾಯಕ್ವಾಡ್‌ (60) ಮತ್ತು ಡೆವೋನ್‌ ಕಾನ್ವೆ ಗಳಿಸಿದ 40 ರನ್‌ಗಳ ಬಲದಲ್ಲಿ 7 ವಿಕೆಟ್‌ ನಷ್ಟದಲ್ಲಿ 172 ರನ್‌ಗಳಿಸಿತ್ತು. ಚೇಸಿಂಗ್‌ ವೇಳೆ ನಿರಂತರವಾಗಿ ವಿಕೆಟ್‌ ಕಳೆದುಕೊಳ್ಳುತ್ತಲೇ ಸಾಗಿದ ಗುಜರಾತ್‌, ಅಂತಿಮ ಓವರ್‌ನ ಅಂತಿಮ ಎಸೆತದಲ್ಲಿ 157 ರನ್‌ಗಳಿಗೆ ಆಲೌಟ್‌ ಆಯಿತು.

ಕಳೆದ ಎರಡು ಪಂದ್ಯಗಳಲ್ಲಿ ಶತಕ ಸಿಡಿಸಿ ಮಿಂಚಿದ್ದ ಶುಭಮನ್‌ ಗಿಲ್ 42 ಮತ್ತು ಕೊನೆಯ ಕ್ಷಣದಲ್ಲಿ ಅಬ್ಬರಿಸಿದ ರಶೀದ್‌ ಖಾನ್‌ 30 ರನ್‌ಗಳಿಸಿದರು. ಚೆನ್ನೈ ಪರವಾಗಿ ದೀಪಕ್‌ ಚಹಾರ್‌, ಮಹೀಶ್‌ ತೀಕ್ಷಣ, ರವೀಂದ್ರ ಜಡೇಜಾ ಹಾಗೂ ಮತೀಶ ಪತಿರಾನ ತಲಾ 2 ವಿಕೆಟ್‌ ಪಡೆದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...