ಐಪಿಎಲ್‌ 2023 | ಅಗ್ರಸ್ಥಾನಕ್ಕೇರಿದ ಗುಜರಾತ್‌; ಕೆಕೆಆರ್‌ ಪಡೆಗೆ ಆರನೇ ಸೋಲು

Date:

ಐಪಿಎಲ್‌ 16ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಶನಿವಾರ ಈಡನ್‌ ಗಾರ್ಡನ್‌ ಮೈದಾನದಲ್ಲಿ ನಡೆದ ಟೂರ್ನಿಯ 39ನೇ ಪಂದ್ಯದಲ್ಲಿ ಗುಜರಾತ್‌, ಆತಿಥೇಯ ಕೆಕೆಆರ್‌ ತಂಡವನ್ನು 7 ವಿಕೆಟ್‌ಗಳ ಅಂತರದಲ್ಲಿ ಸುಲಭವಾಗಿ ಮಣಿಸಿತು.

ಕೋಲ್ಕತ್ತಾ ನೈಟ್‌ ರೈಡರ್ಸ್‌ ಮುಂದಿಟ್ಟಿದ್ದ 180 ರನ್‌ಗಳ ಗೆಲುವಿನ ಗುರಿಯನ್ನು ಗುಜರಾತ್‌, 17.5 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ ಚೇಸ್‌ ಮಾಡಿತು. ಅಮೋಘ ಫಾರ್ಮ್‌ ಮುಂದುವರಿಸಿದ ವಿಜಯ್‌ ಶಂಕರ್‌ ಭರ್ಜರಿ ಅರ್ಧಶತಕ (51 ರನ್‌, 24 ಎಸೆತ, 4×2, 6×5) ಆರಂಭಿಕ ಶುಭಮನ್‌ ಗಿಲ್‌ 49 ಹಾಗೂ ಡೇವಿಡ್‌ ಮಿಲ್ಲರ್‌ 32 ರನ್‌ಗಳಿಸುವ ಮೂಲಕ ಜಿಟಿ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಕುಸ್ತಿಪಟುಗಳ ಪ್ರತಿಭಟನೆ ʻಅಶಿಸ್ತುʼ ಎಂದ ಪಿಟಿ ಉಷಾ!

ಇದಕ್ಕೂ ಮೊದಲು ಬ್ಯಾಟ್‌ ಮಾಡಿದ್ದ ಕೆಕೆಆರ್‌ ಪರ ಆರಂಭಿಕ ರಹ್ಮಾನುಲ್ಲಾ ಗುರ್ಬಾಝ್‌, ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿದರಾದರೂ, ಸಹ ಆಟಗಾರರಿಂದ ಯಾವುದೇ ಬೆಂಬಲ ವ್ಯಕ್ತವಾಗಲಿಲ್ಲ. 39 ಎಸೆತಗಳನ್ನು ಎದುರಿಸಿದ ಗುರ್ಬಾಝ್ 7 ಸಿಕ್ಸರ್‌ ಮತ್ತು 5 ಬೌಂಡರಿಗಳ ನೆರವಿನೊಂದಿಗೆ 81 ರನ್‌ಗಳಿಸಿದ್ದ ವೇಳೆ ರಶೀದ್‌ ಖಾನ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. ಶಾರ್ದೂಲ್‌ ಠಾಕೂರ್‌ ಶೂನ್ಯ ಸುತ್ತಿದರೆ, ನಾಯಕ ನಿತೀಶ್‌ ರಾಣಾ ಕೇವಲ 4 ರನ್‌ಗಳಿಸುವಷ್ಟರಲ್ಲೇ ವಿಕೆಟ್‌ ಒಪ್ಪಿಸಿದ್ದು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿತು.

ಬೌಲಿಂಗ್‌ನಲ್ಲಿ ಗುಜರಾತ್‌ ಪರ ಮುಹಮ್ಮದ್‌ ಶಮಿ 3, ಜಾಶ್‌ ಲಿಟ್ಲ್‌ ಮತ್ತು ನೂರ್‌ ಅಹ್ಮದ್‌ ತಲಾ 2 ವಿಕೆಟ್‌ ಪಡೆದರು.

ಟೂರ್ನಿಯಲ್ಲಿ 8ನೇ ಪಂದ್ಯವನ್ನಾಡಿದ ಗುಜರಾತ್‌ 6ನೇ ಗೆಲುವು ಸಾಧಿಸಿದರೆ, 9ನೇ ಪಂದ್ಯವನ್ನಾಡಿದ ಕೆಕೆಆರ್‌ 6ನೇ ಸೋಲು ಕಂಡಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ ಜಿಟಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್‌ 7ನೇ ಸ್ಥಾನಕ್ಕೆ ಕುಸಿದಿದೆ.   

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...