ಐಪಿಎಲ್‌ 2023 | ಕೋಪದಲ್ಲಿ ಕಿರುಚಾಡಿದ ಕೂಲ್ ಕ್ಯಾಪ್ಟನ್‌ ಧೋನಿ!

Date:

ಕ್ರಿಕೆಟ್‌ ಮೈದಾನದಲ್ಲಿ ಎಂ ಎಸ್‌ ಧೋನಿ ಕೂಲ್ ಕ್ಯಾಪ್ಟನ್‌ ಎಂದೇ ಚಿರಪರಿಚಿತ. ಯಾವುದೇ ಸಂದರ್ಭದಲ್ಲೂ ತಾಳ್ಮೆ ಕಳೆದುಕೊಳ್ಳದೆ, ಗೆದ್ದಾಗ ಅತಿಯಾಗಿ ಸಂಭ್ರಮಿಸಿದ-ಸೋತಾಗ ನಿರಾಸೆ ವ್ಯಕ್ತಪಡಿಸದ ಧೋನಿ ಅಭಿಮಾನಿಗಳ ಪಾಲಿಗೆ ಅಚ್ಚುಮೆಚ್ಚು.

ಧೋನಿ ತಾಳ್ಮೆ ಕಳೆದುಕೊಳ್ಳುವುದು ತುಂಬಾ ವಿರಳ. ಆಟದ ವೇಳೆ ಸಹ ಆಟಗಾರರ ಮೇಲೆ ಧೋನಿ ಕೂಗಾಡುವುದು ಅತ್ಯಪರೂಪ. ಆದರೆ 2019ರ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧದ ಪಂದ್ಯದಲಿ ನೋ ಬಾಲ್‌ ವಿವಾದವೊಂದರಲ್ಲಿ ಪಂದ್ಯ ನಡೆಯುತ್ತಿರುವ ಮಧ್ಯೆಯೇ ಮೈದಾನ ಪ್ರವೇಶಿಸಿದ್ದ ಎಸಿಎಸ್‌ಕೆ ನಾಯಕ ಧೋನಿ ಅಂಪೈರ್‌ ಜೊತೆ ವಾಗ್ವಾದ ನಡೆಸಿದ್ದು ಭಾರೀ ಸುದ್ದಿಯಾಗಿತ್ತು.

ಗುರುವಾರ ಜೈಪುರದ ಸವಾಯ್‌ ಮಾನ್‌ಸಿಂಗ್‌ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಕೂಲ್ ಕ್ಯಾಪ್ಟನ್‌ ಧೋನಿ ಸಹ ಆಟಗಾರರ ಮೇಲೆ ಕೋಪಗೊಂಡಿರುವ ವಿಡಿಯೋ ಇದೀಗ ವೈರಲ್‌ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನಿಂಗ್ಸ್‌ನ 16ನೇ ಓವರ್‌ನಲ್ಲಿ ಮತೀಶ ಪತಿರಾನ ಅವರು ಶಿಮ್ರಾನ್ ಹೆಟ್ಮೆಯರ್‌ಗೆ ಬೌಲಿಂಗ್‌ ಮಾಡುತ್ತಿದ್ದರು. ನಿಧಾನಗತಿಯ ಬೌನ್ಸರ್ ಅನ್ನು ಅಂದಾಜಿಸುವಲ್ಲಿ ವಿಫಲರಾದ ಹೆಟ್ಮೆಯರ್‌ ದೇಹಕ್ಕೆ ತಗುಲಿದ ಚೆಂಡು ನೇರವಾಗಿ ಕೀಪರ್‌ ಧೋನಿಯ ಕೈ ಸೇರಿತ್ತು. ಈ ವೇಳೆ ಬ್ಯಾಟರ್ ರನ್ ಗಳಿಸಲು ಪ್ರಯತ್ನಿಸಿದರು. ರನೌಟ್‌ಗಾಗಿ ಧೋನಿ ಚೆಂಡನ್ನು ನಾನ್‌ ಸ್ಟ್ರೈಕರ್‌ ಕಡೆಗೆ ಎಸೆದರು. ಆದರೆ ಬೌಲರ್‌ ಪತಿರಾನ ಪಿಚ್‌ ಮಧ್ಯಭಾಗದಲ್ಲಿ ನಿಂತಿದ್ದ ಕಾರಣ ಚೆಂಡು ಸ್ಟಂಪ್‌ಗೆ ತಾಗಲಿಲ್ಲ. ರನೌಟ್‌ಗೆ ಬಲಿಯಾಗಬೇಕಿದ್ದ ಹೆಟ್ಮೆಯರ್‌ಗೆ ಪತಿರಾನ ʻಜೀವದಾನʼ ನೀಡಿದ್ದರು. ಇದರಿಂದ ಕೋಪಗೊಂಡ ಧೋನಿ, ಪತಿರಾನ ಅವರತ್ತ ಕೋಪದಿಂದ ಕೂಗಿದರು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಕೆಕೆಆರ್‌ ವಿರುದ್ಧ ತವರಿನಲ್ಲೇ ಮುಗ್ಗರಿಸಿದ ಆರ್‌ಸಿಬಿ

ಇದೇ ಪಂದ್ಯದ ಅಂತಿಮ ಎಸೆತದಲ್ಲಿ ರಾಜಸ್ಥಾನ ಬ್ಯಾಟರ್‌ಗಳು ಮೂರು ರನ್‌ ಗಳಿಸಿದ್ದರು. ಆದರೆ ಈ ವೇಳೆ ಲೆಗ್ ಸೈಡ್‌ನಲ್ಲಿ ಕ್ಷೇತ್ರರಕ್ಷಣೆಯಲ್ಲಿದ್ದ ಶಿವಂ ದುಬೆ ಚೆಂಡನ್ನು ಪಡೆದು ಕ್ಷಿಪ್ರವಾಗಿ ಥ್ರೋ ಮಾಡಲು ವಿಫಲರಾದರು. ರನೌಟ್‌ ಅವಕಾಶ ತಪ್ಪಿದ ಕಾರಣ ಕೂಲ್ ಕ್ಯಾಪ್ಟನ್‌ ಧೋನಿ, ದುಬೆ ವಿರುದ್ಧ ʻಗರಂʼ ಆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...