ಐಪಿಎಲ್ 2023 | ಅಯ್ಯರ್ ಶತಕ ವ್ಯರ್ಥ! ತವರಿನಲ್ಲಿ ಗೆದ್ದ ಮುಂಬೈ

Date:

ವೆಂಕಟೇಶ್ ಅಯ್ಯರ್ ಗಳಿಸಿದ ಭರ್ಜರಿ ಶತಕದ ಹೊರತಾಗಿಯೂ ಮುಂಬೈ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡ ಮುಗ್ಗರಿಸಿದೆ.


ಮುಂಬೈನ ವಾಂಖೆಡೆ ಮೈದಾನದಲ್ಲಿ ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿದ್ದ ಕೆಕೆಆರ್, ಎಡಗೈ ಬ್ಯಾಟರ್ ವೆಂಕಟೇಶ್ ಅಯ್ಯರ್ ಗಳಿಸಿದ ಆಕರ್ಷಕ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 185 ರನ್‌ಗಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...


51 ಎಸೆತಗಳನ್ನು ಎದುರಿಸಿದ ಅಯ್ಯರ್, 9 ಭರ್ಜರಿ ಸಿಕ್ಸರ್ ಮತ್ತು 6 ಬೌಂಡರಿಗಳ ನೆರವಿನಿಂದ 104 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು. ಇದು ಈ ಬಾರಿಯ ಐಪಿಎಲ್‌ನಲ್ಲಿ ದಾಖಲಾದ ಎರಡನೇ ಶತಕವಾಗಿದೆ.

ಆಂಡ್ರೆ ರಸೆಲ್ 21 ಮತ್ತು ರಿಂಕು ಸಿಂಗ್ 18 ರನ್‌ಗಳಿಸಿದರು.

ಚೇಸಿಂಗ್ ವೇಳೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಮೈದಾನಕ್ಕಿಳಿದ ರೋಹಿತ್ ಶರ್ಮಾ 20 ರನ್‌ಗಳಿಸಿ ಔಟಾದರು. ಇಶಾನ್ ಕಿಶಾನ್ 58 ರನ್‌ಗಳಿಸಿದರೆ ನಾಯಕ ಸೂರ್ಯ ಕುಮಾರ್ ಯಾದವ್ 43 ರನ್ ಗಳಿಸಿದರು.

ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ

ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಐಪಿಎಲ್ ಟೂರ್ನಿಗೆ ಪದಾರ್ಪಣೆಗೈಯ್ದಿದ್ದಾರೆ.

ಪಂದ್ಯದಲ್ಲಿ ಎರಡು ಓವರ್ ಎಸೆದ ಅರ್ಜುನ್, 17 ರನ್ ನೀಡಿದರಾದರೂ ಯಾವುದೇ ವಿಕೆಟ್ ಪಡೆಯುವಲ್ಲಿ ವಿಫಲರಾದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...