ಐಪಿಎಲ್ | ಕ್ವಿಂಟನ್ ಡಿ ಕಾಕ್ ಅರ್ಧಶತಕ: ಆರ್‌ಸಿಬಿಗೆ ಗೆಲ್ಲಲು 182 ರನ್‌ಗಳ ಗುರಿ ನೀಡಿದ ಲಕ್ನೋ

Date:

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್  ತಂಡವು ಸವಾಲಿನ ಮೊತ್ತವನ್ನು ಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್, ಕ್ವಿಂಟನ್ ಡಿ ಕಾಕ್ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ನಿಗದಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್‌ಗಳನ್ನು ಕಲೆಹಾಕಿದ್ದು, ಆರ್‌ಸಿಬಿ ತಂಡಕ್ಕೆ 182 ರನ್‌ಗಳ ಗುರಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಕ್ನೋ ಪರ ಇನ್ನಿಂಗ್ಸ್ ಆರಂಭಿಸಿದ ಕ್ವಿಂಟನ್ ಡಿ ಕಾಕ್ ಮತ್ತು ನಾಯಕ ಕೆಎಲ್ ರಾಹುಲ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 5.3 ಓವರ್‌ಗಳಲ್ಲಿ 53 ರನ್‌ಗಳ ಜೊತೆಯಾಟ ನಿರ್ಮಿಸಿತು. ಈ ವೇಳೆ 14 ಎಸೆತಗಳಲ್ಲಿ 2 ಸಿಕ್ಸರ್‌ಗಳೊಂದಿಗೆ 20 ರನ್ ಗಳಿಸಿದ್ದ ಕೆಎಲ್ ರಾಹುಲ್ ಮ್ಯಾಕ್ಸ್‌ವೆಲ್‌ಗೆ ವಿಕೆಟ್ ನೀಡಿದರು.

ನಂತರ ಬಂದ ದೇವದತ್ ಪಡಿಕ್ಕಲ್ ಕೇವಲ 6 ರನ್ ಗಳಿಸಿ ಔಟಾದರು. ಆ ಬಳಿಕ ಮಾರ್ಕಸ್ ಸ್ಟೊಯಿನಿಸ್ 15 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 24 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆರಂಭಿಕ ಬ್ಯಾಟರ್ ಕ್ವಿಂಟನ್ ಡಿ ಕಾಕ್ 56 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಮೂಲಕ 81 ರನ್ ಬಾರಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿದರು.

ನಂತರ ಕ್ರೀಸ್‌ಗೆ ಬಂದ ನಿಕೋಲಸ್ ಪೂರನ್ ಕೊನೆಯವರೆಗೂ ಆಡಿ, ಕೇವಲ 21 ಎಸೆತಗಳಲ್ಲಿ 1 ಬೌಂಡರಿ ಹಾಗೂ 5 ಸಿಕ್ಸರ್‌ನ ನೆರವಿನಿಂದ ಅಜೇಯ 40 ರನ್ ಬಾರಿಸಿ ತಂಡದ ಮೊತ್ತವನ್ನು 180ರ ಗಡಿ ಮುಟ್ಟಿಸಿದರು. ಕೊನೆಗೆ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್‌ಗಳನ್ನು ಕಲೆಹಾಕಿತು.

ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡದ ಪರ ಗ್ಲೆನ್ ಮ್ಯಾಕ್ಸ್‌ವೆಲ್ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರೆ, ಉಳಿದಂತೆ ರೀಸ್ ಟೋಪ್ಲೆ, ಯಶ್ ದಯಾಳ್ ಮತ್ತು ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...