2024ರ ಐಪಿಎಲ್ ಉದ್ಘಾಟನಾ ದಿನಾಂಕ ಘೋಷಣೆ

Date:

ಭಾರತೀಯ ಕ್ರಿಕೆಟ್ ಪ್ರೇಮಿಗಳ ಹಬ್ಬ 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಪ್ರಾರಂಭದ ದಿನಾಂಕವನ್ನು ಘೋಷಿಸಲಾಗಿದೆ.

ಮಾರ್ಚ್‌ 22ರಿಂದ ಐಪಿಎಲ್ ಪಂದ್ಯಗಳು ಆರಂಭವಾಗಲಿದ್ದು, ಲೋಕಸಭಾ ಚುನಾವಣೆಯ ಹೊರತಾಗಿಯೂ ಈ ವರ್ಷದ ಸಂಪೂರ್ಣ ಪಂದ್ಯಗಳು ಭಾರತದಲ್ಲಿಯೇ ನಡೆಯಲಿವೆ ಎಂದು ಐಪಿಎಲ್‌ ಅಧ್ಯಕ್ಷ ಅರುಣ್ ಧುಮಾಲ್ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗಳು ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಐಪಿಎಲ್‌ 17ನೇ ಆವೃತ್ತಿಯ ವೇಳಾಪಟ್ಟಿಯನ್ನು ಇನ್ನು ಪ್ರಕಟಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲು 15 ದಿನಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ನಂತರ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಚುನಾವಣಾ ದಿನಾಂಕದ ಘೋಷಣೆಯ ನಂತರ ಪ್ರಕಟಿಸಲಾಗುವುದು ಎಂದು ಅರುಣ್ ಧುಮಾಲ್ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯ ದಿನಾಂಕವನ್ನು ಮುಂದಿನ ತಿಂಗಳ ಆರಂಭದಲ್ಲಿ ಘೋಷಿಸುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

“ಟೂರ್ನಿಯನ್ನು ಮಾರ್ಚ್‌ 22ರಂದು ಆರಂಭಿಸಲು ಎದುರು ನೋಡುತ್ತಿದ್ದು,ನಾವು ಸರ್ಕಾರಿ ಸಂಸ್ಥೆಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಆರಂಭದ ವೇಳಾಪಟ್ಟಿಯನ್ನು ಮೊದಲು ಬಿಡುಗಡೆ ಮಾಡುತ್ತೇವೆ. ಟೂರ್ನಿಯ ಪೂರ್ಣ ವೆಳಾಪಟ್ಟಿ ಭಾರತದಲ್ಲಿಯೇ ನಡೆಯಲಿದೆ”ಎಂದು ಧುಮಾಲ್ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯ ಪ್ರಯುಕ್ತ 2009ರಲ್ಲಿ ಮಾತ್ರ ಪೂರ್ಣ ಟೂರ್ನಿ ವಿದೇಶದಲ್ಲಿ(ದಕ್ಷಿಣ ಆಫ್ರಿಕಾ) ನಡೆದಿತ್ತು. 2014ರ ಟೂರ್ನಿಯ ಭಾಗಶಃ ಪಂದ್ಯಗಳು ಯುಎಇನಲ್ಲಿ ನಡೆದಿದ್ದವು. 2019ರಲ್ಲಿ  ಚುನಾವಣೆಯ ಹೊರತಾಗಿಯೂ ಟೂರ್ನಿ ಭಾರತದಲ್ಲಿ ನಡೆದಿದ್ದವು.

ಐಪಿಎಲ್ ಪಂದ್ಯಗಳು ಮುಗಿದ ಕೆಲವು ದಿನಗಳಲ್ಲಿಯೇ ಜೂನ್‌ 1ರಿಂದ ಟಿ20 ವಿಶ್ವಕಪ್ ಆರಂಭವಾಗಲಿದೆ. ವೆಸ್ಟ್‌ ಇಂಡೀಸ್ ಹಾಗೂ ಅಮೆರಿಕಾ ಈ ಬಾರಿಯ ಟಿ20 ವಿಶ್ವಕಪ್‌ ಟೂರ್ನಿಯ ಆತಿಥ್ಯ ವಹಿಸಲಿದೆ.

16ರ ಐಪಿಎಲ್ ಆವೃತ್ತಿಯ ಟ್ರೋಫಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಮುಡಿಗೇರಿಸಿಕೊಂಡಿದ್ದರೆ, ಗುಜರಾತ್ ಟೈಟಾನ್ಸ್ ರನ್ನರ್‌ ಅಪ್‌ ಆಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...