ಐಪಿಎಲ್ 2025 | ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕನಾಗಿ ಅಕ್ಷರ್‌ ಪಟೇಲ್‌ ನೇಮಕ

Date:

ಮಾರ್ಚ್‌ 22ರಿಂದ ಆರಂಭವಾಗುವ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) ಕ್ರಿಕೆಟ್‌ ಟೂರ್ನಮೆಂಟ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕನನ್ನಾಗಿ ಟೀಂ ಇಂಡಿಯಾದ ಆಲ್‌ರೌಂಡರ್‌ ಅಕ್ಷರ್‌ ಪಟೇಲ್‌ ಅವರನ್ನು ನೇಮಕ ಮಾಡಲಾಗಿದೆ.

ಈ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕನ ಆಯ್ಕೆಯಲ್ಲಿ ಕೆ ಎಲ್‌ ರಾಹುಲ್‌ ಅವರು ಕೂಡ ಪೈಪೋಟಿಯಲ್ಲಿದ್ದರು. ಆದರೆ ತಂಡದ ಮಾಲೀಕರು ಅಂತಿಮವಾಗಿ ಅಕ್ಷರ್‌ ಪಟೇಲ್‌ ಅವರಿಗೆ ಮನ್ನಣೆ ನೀಡಿದ್ದಾರೆ.

ಗುಜರಾತ್‌ನ 31 ವರ್ಷದ ಅಕ್ಷರ್‌ ಪಟೇಲ್‌ ಪಟೇಲ್ 2019 ರಿಂದ ಐಪಿಎಲ್‌ನಲ್ಲಿ ದೆಹಲಿ ಕ್ಯಾಪಿಟಲ್ಸ್‌ ತಂಡವನ್ನು ಪ್ರತಿನಿಧಿಸುತ್ತಿದ್ದು, ಈ ವರ್ಷದ ಹರಾಜು ಪ್ರಕ್ರಿಯೆಯಲ್ಲಿ 16.50 ಕೋಟಿ ನೀಡಿ ರೀಟೇನ್‌ ಮಾಡಿಕೊಳ್ಳಲಾಗಿತ್ತು. ಅದಲ್ಲದೆ ಜನವರಿಯಲ್ಲಿ ಇವರನ್ನು ಟೀಂ ಇಂಡಿಯಾ ಟಿ20 ತಂಡದ ಉಪನಾಯಕನನ್ನಾಗಿ ಕೂಡ ಆಯ್ಕೆ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ದೇವರು ನನ್ನನ್ನು ಈ ಪರಿಸ್ಥಿತಿಯಲ್ಲಿ ಇಟ್ಟಿದ್ದಾನೆ’; ಕೆ.ಎಲ್ ರಾಹುಲ್ ಹೀಗೆ ಹೇಳಿದ್ದೇಕೆ?

ಕಳೆದ ಆರು ಋತುಗಳಲ್ಲಿ ದೆಹಲಿ ಕ್ಯಾಪಿಟಲ್ಸ್‌ ತಂಡಕ್ಕಾಗಿ 82 ಪಂದ್ಯಗಳನ್ನು ಆಡಿರುವ ಅಕ್ಷರ್ ಪಟೇಲ್ ಸುಮಾರು 30 ಸರಾಸರಿಯಲ್ಲಿ 235 ರನ್ ಗಳಿಸಿದ್ದು, 7.65 ರ ಎಕಾನಮಿ ದರದಲ್ಲಿ 11 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಭಾರತದ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಅವರನ್ನು ಐಪಿಎಲ್ ಪ್ರಮುಖ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ.

ಐಪಿಎಲ್‌ನ ಮೂಲ ಎಂಟು ಫ್ರಾಂಚೈಸಿಗಳಲ್ಲಿ, ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ಒಮ್ಮೆಯೂ ಪ್ರಶಸ್ತಿ ಗೆಲ್ಲದ ಮೂರು ಫ್ರಾಂಚೈಸಿಗಳಲ್ಲಿ ಒಂದಾಗಿದೆ. ಕಳೆದ ಋತುವಿನಲ್ಲಿ ಡಿಸಿ ತಲಾ ಏಳು ಪಂದ್ಯಗಳನ್ನು ಗೆದ್ದು ಆರನೇ ಸ್ಥಾನ ಪಡೆಯಿತು.

ಡಿಸಿ ತಂಡ ಮಾರ್ಚ್ 24 ರಂದು ವಿಶಾಖಪಟ್ಟಣದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ಜೊತೆ ಆಡುವ ಮೂಲಕ ತಮ್ಮ ಐಪಿಎಲ್ 2025ರ ಅಭಿಯಾನವನ್ನು ಪ್ರಾರಂಭಿಸಲಿದೆ.

ಈ ಬಾರಿಯ ಐಪಿಎಲ್‌ನಲ್ಲಿ ಐದು ತಂಡಗಳು ತಮ್ಮ ನಾಯಕರನ್ನು ಆಯ್ಕೆ ಮಾಡಿವೆ. ಆರ್‌ಸಿಬಿಯನ್ನು ರಜತ್ ಪಾಟಿದಾರ್, ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು ಅಜಿಂಕ್ಯ ರಹಾನೆ, ಲಖನೌ ಸೂಪರ್ ಜೈಂಟ್ಸ್ ಅನ್ನು ರಿಷಭ್ ಪಂತ್ ಮತ್ತು ಪಂಜಾಬ್ ಕಿಂಗ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...