IPL 2025 | ಟೂರ್ನಿಯಿಂದ ಚೆನ್ನೈ ಹೊರಗೆ; ನಿವೃತ್ತಿ ನಿರ್ಧಾರ ಕೈಗೊಳ್ಳುತ್ತಾರಾ ಧೋನಿ?

Date:

ಐದು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಿಂದ ಹೊರಗೆ ಬಿದ್ದಿದೆ. ಐಪಿಎಲ್‌ನ 50 ಪಂದ್ಯಗಳು ಪೂರ್ಣಗೊಳ್ಳುವ ಮೊದಲೇ ಚೆನ್ನೈ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 49ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲುವುದರೊಂದಿಗೆ ಸಿಎಸ್​ಕೆ ತಂಡದ ಕಪ್ ಗೆಲ್ಲುವ ಕನಸು ನುಚ್ಚುನೂರಾಗಿದೆ.

2024 ರಲ್ಲಿ ಲೀಗ್ ಹಂತದಲ್ಲೇ ಹೊರಬಿದ್ದಿದ್ದ ಧೋನಿ ಪಡೆ ಈ ಬಾರಿ ಕೂಡ ಅದನ್ನೇ ಪುನರಾವರ್ತಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅವರ ಮುಖದಲ್ಲಿ ನಿರಾಶೆ ಎದ್ದು ಕಾಣುತ್ತಿತ್ತು. ಧೋನಿ ಬೇಸರದಿಂದ ಹೆಜ್ಜೆ ಹಾಕಿದರು. ನಿಯಮಿತ ನಾಯಕ ರುತುರಾಜ್ ಗಾಯಕ್ವಾಡ್ ಗಾಯಗೊಂಡ ನಂತರ, ಮಹೇಂದ್ರ ಸಿಂಗ್ ಧೋನಿ ಮತ್ತೊಮ್ಮೆ ಐಪಿಎಲ್‌ನಲ್ಲಿ ನಾಯಕತ್ವ ವಹಿಸಿಕೊಂಡಿದ್ದರು. ಆದರೆ ಧೋನಿ ನಾಯಕತ್ವದಲ್ಲಿಯೂ ಚೆನ್ನೈ ತಂಡ ಗೆಲುವಿನ ಲಯ ಕಂಡುಕೊಂಡಿಲ್ಲ.

ಐಪಿಎಲ್ 2025 ರಲ್ಲಿ ಚೆನ್ನೈ ತಂಡ ಸತತ ಸೋಲಿನೊಂದಿಗೆ ಅಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಚೆನ್ನೈ ಆಡಿರುವ 9 ಪಂದ್ಯಗಳಲ್ಲಿ ಏಳರಲ್ಲಿ ಸೋಲನ್ನು ಎದುರಿಸಿದ್ದು, ಕೇವಲ 4 ಅಂಕಗಳನ್ನು ಹೊಂದಿದೆ. ಇಂತಹ ಸಂದರ್ಭದಲ್ಲಿ 43 ವರ್ಷದ ಧೋನಿ ಅವರಿಗೆ ಐಪಿಎಲ್‌ನಿಂದ ನಿವೃತ್ತಿ ತೆಗೆದುಕೊಳ್ಳುವಂತೆ ಎಲ್ಲೆಡೆಯಿಂದ ನಿರಂತರವಾಗಿ ಸಲಹೆ ಬರುತ್ತಿವೆ. ಆದರೆ ಅವರು ಇನ್ನೂ ಚೆನ್ನೈ ತಂಡದಲ್ಲಿದ್ದಾರೆ. ಈಗ ಧೋನಿ ಅವರಿಗೆ ವಿಶ್ವದ ದಿಗ್ಗಜ ವಿಕೆಟ್ ಕೀಪರ್ ಆಸ್ಟ್ರೇಲಿಯಾದ ಆಡಮ್ ಗಿಲ್‌ಕ್ರಿಸ್ಟ್ ಕೂಡ ನಿವೃತ್ತಿ ಹೊಂದಲು ಕೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂದರ್ಶನವೊಂದರಲ್ಲಿ ಮಾತನಾಡಿದ ಆಡಮ್ ಗಿಲ್‌ಕ್ರಿಸ್ಟ್ ಅವರು ಐಪಿಎಲ್ 2025 ರ ನಂತರ ಧೋನಿ ನಿವೃತ್ತಿ ಹೊಂದಬೇಕು. ಧೋನಿ ಐಪಿಎಲ್ ಮತ್ತು ವಿಶ್ವ ಕ್ರಿಕೆಟ್‌ನ ಶ್ರೇಷ್ಠ ಪ್ರತಿಭೆ. ಅವರು ಇನ್ನು ಮುಂದೆ ಆಟದಲ್ಲಿ ಯಾರಿಗೂ ಏನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ. ಅವರಿಗೆ ಏನು ಮಾಡಬೇಕೆಂದು ತಿಳಿದಿರಬಹುದು. ಆದರೆ ಭವಿಷ್ಯಕ್ಕಾಗಿ ಅವರು ಮುಂದಿನ ವರ್ಷ ಐಪಿಎಲ್‌ನಲ್ಲಿ ಇರಬೇಕಾಗಿಲ್ಲ. ನಾನು ಅವರನ್ನು ಪ್ರೀತಿಸುತ್ತೇನೆ. ಧೋನಿ ನೀವು ಒಬ್ಬ ಚಾಂಪಿಯನ್ ಮತ್ತು ಐಕಾನ್ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಐಪಿಎಲ್ 2025 | ಇದು ನನ್ನ ಮೈದಾನ: ಗೆದ್ದ ನಂತರ ಕೆ ಎಲ್ ರಾಹುಲ್‌ಗೆ ಟಾಂಗ್‌ ಕೊಟ್ಟ ವಿರಾಟ್ ಕೊಹ್ಲಿ!

ಅದಲ್ಲದೆ ಮುಂದಿನ ಐಪಿಎಲ್‌ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕಟ್ಟಬೇಕಾದ ಸಮಯವಿದೆ ಎಂದಿರುವ ಗಿಲ್‌ಕ್ರಿಸ್ಟ್, ಮಹೇಂದ್ರ ಸಿಂಗ್ ಧೋನಿ ಫ್ರಾಂಚೈಸಿಯನ್ನು ತೊರೆಯಬೇಕು. ಧೋನಿ, ಕ್ರಿಕೆಟ್ ಆಟದಲ್ಲಿ ಸಾಬೀತುಪಡಿಸಲು ಬೇರೆನೂ ಇಲ್ಲ. ಅವರು ಎಲ್ಲವನ್ನೂ ಸಾಧಿಸಿದ್ದಾರೆ. ಅವರಿಗೆ ಏನು ಬೇಕು ಎಂಬುದು ಚೆನ್ನಾಗಿ ಗೊತ್ತಿದೆ. ಆದರೆ ನಾನು ಹೇಳುತ್ತಿದ್ದೇನೆ, ಭವಿಷ್ಯಕ್ಕಾಗಿ ಅವರು ಐಪಿಎಲ್‌ನಲ್ಲಿ ಆಡುವ ಅಗತ್ಯ ಇಲ್ಲ ಎಂದಿದ್ದಾರೆ.

ಐಪಿಎಲ್ 2025 ರ ಆರಂಭಕ್ಕೂ ಮುನ್ನ, ಧೋನಿ ಕಾರ್ಯಕ್ರಮವೊಂದರಲ್ಲಿ ತಮ್ಮ ಕ್ರಿಕೆಟ್‌ನ ಕೊನೆಯ ಕೆಲವು ವರ್ಷಗಳನ್ನು ಆನಂದಿಸಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದರು. “ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ 2019 ರಿಂದ ನಿವೃತ್ತಿ ಹೊಂದಿದ್ದೇನೆ. ಆದ್ದರಿಂದ ಐಪಿಎಲ್‌ನಿಂದ ನಿವೃತ್ತಿ ಘೋಷಣೆ ಮಾಡಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಈ ಮಧ್ಯೆ ನಾನು ಕೆಲವು ವರ್ಷಗಳ ಕ್ರಿಕೆಟ್ ಅನ್ನು ಆನಂದಿಸಲು ಬಯಸಿದ್ದೇನೆ. ಹೀಗಾಗಿ ಎಷ್ಟು ವರ್ಷಗಳ ಕಾಲ ನಾನು ಆಡಲು ಸಾಧ್ಯವಾಗುತ್ತದೆಯೋ ಅಷ್ಟು ವರ್ಷಗಳವರೆಗೆ ಆಡುತ್ತೇನೆ ಎಂದು ಹೇಳಿದ್ದರು.

5 ಬಾರಿಯ ಚಾಂಪಿಯನ್ ಇದೇ ಮೊದಲ ಬಾರಿಗೆ ಸತತ ಆವೃತ್ತಿಗಳಲ್ಲಿ ಮೊದಲ ಸುತ್ತಿನಲ್ಲೇ ಹೊರಬಿದ್ದು ನಿರಾಶೆ ಅನುಭವಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಬಳಿಕ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರೊಂದಿಗೆ ಸುದೀರ್ಘ ಚರ್ಚೆಯಲ್ಲಿ ತೊಡಗಿಸಿಕೊಂಡಿದ್ದರು. ಇದು ನಿವೃತ್ತಿಯ ಮುನ್ಸೂಚನೆ ಎಂದು ಹಲವರು ಮಾತನಾಡಿಕೊಳ್ಳುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...