IPL 2025 | ಹಿರಿಯರ ವಿರುದ್ಧ ದಾಖಲೆಯ ಶತಕ ಸಿಡಿಸಿದ ಕಿರಿಯ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ

Date:

ಪಂಜಾಬ್ ಕಿಂಗ್ಸ್ ತಂಡದ ಎಡಗೈ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ(priyansh arya) ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ (Punjab Kings vs Chennai Super Kings) ವಿರುದ್ಧ 39 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದರು. ಆ ಶತಕದಲ್ಲಿ ಒಂಬತ್ತು ಸಿಕ್ಸರ್‌ಗಳು ಮತ್ತು ಏಳು ಬೌಂಡರಿಗಳಿದ್ದದ್ದು ವಿಶೇಷವಾಗಿತ್ತು. ಒಂದೇ ಒಂದು ಪಂದ್ಯದ ಮೂಲಕ ಆರ್ಯ ಸ್ಟಾರ್ ಆಟಗಾರನಾಗಿ ಹೊರಹೊಮ್ಮಿದ್ದರು.

ಇದು 24 ವರ್ಷಗಳ ಪ್ರಿಯಾಂಶ್ ಆರ್ಯ ಅವರ ನಾಲ್ಕನೇ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯವಾಗಿತ್ತು. ಐದು ಬಾರಿಯ ಚಾಂಪಿಯನ್ ಎನಿಸಿಕೊಂಡ, 43 ವರ್ಷದ ಹಿರಿಯ ಆಟಗಾರ ಧೋನಿಯ ಮುಂದಾಳತ್ವದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪ್ರಿಯಾಂಶ್ ಆಟ ಎಲ್ಲರಿಗೂ ಶಾಕ್ ನೀಡಿತ್ತು.

ದಿಲ್ಲಿ ತಂಡದ ಆಕ್ರಮಣಕಾರಿ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ ಅವರನ್ನು ಪಂಜಾಬ್ ಕಿಂಗ್ಸ್ 3.8 ಕೋಟಿ ರೂಪಾಯಿಗೆ ಮೆಗಾ ಹರಾಜಿನಲ್ಲಿ ಖರೀದಿಸಿತ್ತು. ದಿಲ್ಲಿ ಪ್ರಿಮಿಯರ್ ಲೀಗ್‍ನಲ್ಲಿ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡದ ಪರ 10 ಇನ್ನಿಂಗ್ಸ್ ಗಳಲ್ಲಿ 608 ರನ್‍ಗಳನ್ನು ಸಿಡಿಸಿದ ದಾಖಲೆ ಇವರ ಬೆನ್ನಿಗಿತ್ತು. ನಾರ್ತ್ ಡೆಲ್ಲಿ ಸ್ಟ್ರೈಕರ್ಸ್ ವಿರುದ್ಧ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಬಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ರಾಜ್ಯದಲ್ಲಿ ಆನ್​ಲೈನ್​ ಬೆಟ್ಟಿಂಗ್, ಗೇಮಿಂಗ್ ಆ್ಯಪ್​​ಗೆ ಕಡಿವಾಣ; ಶ್ರೀಘವೇ ಹೊಸ ಮಾನದಂಡ

2023-24ರ ಸೈಯದ್ ಮುಸ್ತಾಕ್ ಅಲಿ ಟ್ರೋಫಿಯಲ್ಲಿ ದಿಲ್ಲಿ ಪರ 7 ಇನ್ನಿಂಗ್ಸ್ ಗಳಲ್ಲಿ 31.71 ಸರಾಸರಿಯಲ್ಲಿ 166.91 ಸ್ಟ್ರೈಕ್‍ರೇಟ್‍ನಲ್ಲಿ 222 ರನ್ ಕಲೆ ಹಾಕಿದ್ದರು. 2024ರ ಐಪಿಎಲ್‍ಗೆ ಶಾರ್ಟ್‍ಲಿಸ್ಟ್ ಆಗಿದ್ದರೂ, ಯಾರೂ ಇವರನ್ನು ಖರೀದಿಸಿರಲಿಲ್ಲ.

ಐದು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡದ ಯುವ ಆಟಗಾರ ಮಂಗಳವಾರ ಕೇವಲ 39 ಎಸೆತಗಳಲ್ಲಿ ಶತಕ ಸಿಡಿಸಿ ಗಮನ ಸೆಳೆದರು. 9 ಸಿಕ್ಸ್ ಮತ್ತು 7 ಬೌಂಡರಿ ಸಿಡಿಸಿ ನೂರ್ ಅಹ್ಮದ್‍ಗೆ ವಿಕೆಟ್ ಒಪ್ಪಿಸುವ ಮುನ್ನ 103 ರನ್ ಗಳಿಸಿದ ಯುವ ಆಟಗಾರ ಪೆವಿಲಿಯನ್‍ಗೆ ವಾಪಸ್ಸಾಗುವ ವೇಳೆ ಸಹ ಆಟಗಾರರು ಹಾಗೂ ತಂಡದ ಒಡತಿ ಪ್ರೀತಿ ಝಿಂಟಾ ಎದ್ದುನಿಂತು ಗೌರವ ಸೂಚಿಸಿದರು.

ಮೊದಲ ಪಂದ್ಯದಲ್ಲಿ ಹೊಡಿಬಡಿಯ 47 ರನ್ ಗಳಿಸಿದ್ದ ಆರ್ಯ ತಮ್ಮ ನಾಲ್ಕನೇ ಪಂದ್ಯದಲ್ಲಿ ವೇಗದ ಶತಕ ಗಳಿಸಿದರು. ಐಪಿಎಲ್ ಎಂದರೆ ಸಾಮಾನ್ಯವಾಗಿ ಹೊಸಬರ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ. ಈ ಬಾರಿಯ ಐಪಿಎಲ್ ನಲ್ಲಿ ಹೊಸ ಹುಡುಗರು ಚೆನ್ನಾಗಿ ಆಡಿ, ಎಲ್ಲರ ಗಮನ ಸೆಳೆಯುತ್ತಿರುವುದು, ಮಿಂಚುತ್ತಿರುವುದು ವಿಶೇಷ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...