ಐಪಿಎಲ್‌ 2025 | ‘ಆರ್‌ಸಿಬಿ’ ಹೊಸ ನಾಯಕ ರಜತ್ ಪಾಟೀದಾರ್

Date:

ಐಪಿಎಲ್‌ 2025ರ ಟೂರ್ನಿಯು ಮಾರ್ಚ್‌ನಲ್ಲಿ ಆರಂಭವಾಗಲಿದೆ. ಟೂರ್ನಿಗೆ ಕೆಲವೇ ದಿನಗಳ ಬಾಕಿ ಇರುವಾಗ ‘ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು’ (RCB) ತಂಡುವ ತನ್ನ ಹೊಸ ನಾಯಕರನ್ನು ಆಯ್ಕೆ ಮಾಡಿದೆ. ಬ್ಯಾಟರ್ ರಜತ್ ಪಾಟೀದಾರ್ ಅವರು ತಂಡವನ್ನು ಮುನ್ನಡೆಸಲಾಗಿದ್ದಾರೆ ಎಂದು ಆರ್‌ಸಿಬಿ ಘೋಷಿಸಿದೆ.

ವಿರಾಟ್‌ ಕೊಹ್ಲಿ ಅವರು ತಂಡದ ನಾಯಕತ್ವವನ್ನು ತೊರೆದ ಬಳಿಕ, ಮೂರು ವರ್ಷಗಳಿಂದ ದಕ್ಷಿಣ ಆಫ್ರಿಕಾದ ಫಾಫ್‌ ಡು ಪ್ಲೆಸಿಸ್‌ ಅವರು ತಂಡವನ್ನು ಮುನ್ನಡೆಸಿದ್ದರು. ಆದರೆ, ಈ ಬಾರಿ, ಅವರನ್ನು ತಂಡದಿಂದ ಕೈಬಿಡಲಾಗಿದೆ. ಹೀಗಾಗಿ, ಹೊಸ ನಾಯಕನನ್ನು ಆಯ್ಕೆ ಮಾಡಲು ತಂಡವು ಚಿಂತನೆ ನಡೆಸಿತ್ತು.

ಆರ್‌ಸಿಬಿಯಲ್ಲಿ ವಿರಾಟ್‌ ಕೊಹ್ಲಿಯಷ್ಟು ಅನುಭವಿ ಆಟಗಾರ ಬೇರೆ ಯಾರೂ ಇಲ್ಲದ ಕಾರಣ, ಕೊಹ್ಲಿ ಅವರೇ ಮತ್ತೆ ಆರ್‌ಸಿಬಿಗೆ ನಾಯಕನಾಗಿ ಮರಳಬಹುದು ಎಂಬ ಚರ್ಚೆಗಳೂ ಇದ್ದವು. ಆದರೆ, ಕ್ಯಾಪ್ಟನ್ಸಿ ಪಡೆಯಲು ಕೊಹ್ಲಿ ನಿರಾಕರಿಸಿದ್ದರು. ಬಳಿಕ ಪಾಟೀದಾರ್ ಮತ್ತು ಕೃನಾಲ್ ಪಾಂಡ್ಯಾ ಹೆಸರನ್ನು ಮುನ್ನೆಲೆಯಲ್ಲಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ಯುವ ಆಟಗಾರ ರಜತ್ ಅವರಿಗೆ ನಾಯಕತ್ವ ನೀಡಲಾಗಿದೆ. ರಜತ್ ಪಾಟೀದಾರ್ ದೇಶೀಯ ಕ್ರಿಕೆಟ್‌ನಲ್ಲಿ ಗಮನ ಸೆಳೆದಿದ್ದ ಆಟಗಾರ. ಅವರು ಸ್ಥಳೀಯ ತಂಡವನ್ನೂ ಮುನ್ನಡೆಸಿರುವ ಅನುಭವವನ್ನೂ ಹೊಂದಿದ್ದಾರೆ. ಈ ಬಾರಿ ಪಾಟೀದಾರ್ ತಂಡವನ್ನು ಮುನ್ನಡೆಸಲಿದ್ದಾರೆ.

ತಮ್ಮನ್ನು ತಂಡದ ನಾಯಕನ್ನಾಗಿ ನೇಮಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪಾಟೀದಾರ್, “ಈಗಾಗಲೇ ದಿಗ್ಗಜರು ಆರ್‌ಸಿಬಿ ತಂಡದ ನಾಯಕರಾಗಿದ್ದಾರೆ. ಈ ಬಾರಿ ನನ್ನನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿರುವುದು, ನನಗೆ ಸಿಕ್ಕ ದೊಡ್ಡ ಗೌರವವೆಂದು ನಾನು ಭಾವಿಸುತ್ತೇನೆ. ನನ್ನ ನಾಯಕತ್ವದ ಶೈಲಿ ಕೊಂಚ ವಿಭಿನ್ನವಾಗಿರಲಿದೆ. ನಾನು ಶಾಂತಚಿತ್ತವಾಗಿರುತ್ತೇನೆ. ಪಂದ್ಯದ ಪರಿಸ್ಥಿತಿಗೆ ಅನುಗುಣವಾಗಿ ತಂಡಕ್ಕೆ ಏನು ಬೇಕು, ಏನು ಬೇಡ ಎಂಬುದನ್ನು ಅರ್ಥಮಾಡಿಕೊಂಡು ತಂಡವನ್ನು ಮುನ್ನಡೆಸುತ್ತೇನೆ” ಎಂದು ಹೇಳಿದ್ದಾರೆ.

ಹೊಸ ನಾಯಕನಾಗಿರುವ ರಜತ್ ಪಾಟೀದಾರ್ ಮುಂದಾಳತ್ವದಲ್ಲಿ ಆರ್‌ಸಿಬಿ ಹೊಸ ಅಧ್ಯಾಯ ಬರೆಯುವುದೇ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...