ಐಪಿಎಲ್ 2025 | ಲಖನೌ ವಿರುದ್ಧ ಗೆದ್ದರೆ ಆರ್‌ಸಿಬಿಗೆ ಅಗ್ರಸ್ಥಾನ; ಸ್ಟಾರ್‌ ಆಟಗಾರ ಆಡುವುದು ಅನುಮಾನ?

Date:

ಐಪಿಎಲ್‌ 18ನೇ ಆವೃತ್ತಿಯ ಲೀಗ್‌ ಹಂತದ ಕೊನೆಯ ಪಂದ್ಯ ಇಂದು(ಮೇ 27) ಲಖನೌನ ಏಕಾನ ಮೈದಾನದಲ್ಲಿ ನಡೆಯಲಿದ್ದು, ಆರ್‌ಸಿಬಿ ತಂಡ ಲಖನೌ ಸೂಪರ್‌ ಜೈಂಟ್ಸ್ ವಿರುದ್ಧ ಸೆಣಸಲಿದೆ.

ಎಲ್‌ಎಸ್‌ಜಿ ಈ ಪಂದ್ಯವನ್ನು ಪ್ರತಿಷ್ಠೆಗಾಗಿ ಆಡಿದರೆ, ರಾಯಲ್ ಚಾಲೆಂಜರ್ಸ್‌ ಆಫ್ ಬೆಂಗಳೂರು ಅಗ್ರಸ್ಥಾನಕ್ಕೆ ಪೈಪೋಟಿ ನಡೆಸಬೇಕಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ ಕ್ವಾಲಿಫೈಯರ್‌ಗೆ ಅರ್ಹತೆ ಪಡೆಯಲಿದೆ.

ಎಲ್‌ಎಸ್‌ಜಿ ಹಾಗೂ ಆರ್‌ಸಿಬಿ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಇತಿಹಾಸ ಬರೆಯುವ ಕನಸಿನಲ್ಲಿ ಆರ್‌ಸಿಬಿ ಇದ್ದು, ಲೀಗ್‌ ಹಂತದ ಏಳು ಪಂದ್ಯಗಳನ್ನು ತವರಿನಾಚೆ ಗೆದ್ದ ದಾಖಲೆಯನ್ನು ಬರೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಸಿಬಿ ತಂಡದ ಪರ ಆರಂಭಿಕರಾಗಿ ಕಾಣಿಸಿಕೊಳ್ಳುವ ವಿರಾಟ್ ಕೊಹ್ಲಿ ಭರವಸೆ ಮೂಡಿಸಿದ್ದಾರೆ. ಈ ಪಂದ್ಯದಲ್ಲಿ ವಿರಾಟ್‌ ಉತ್ತಮ ಇನಿಂಗ್ಸ್‌ ಕಟ್ಟುವ ವಿಶ್ವಾಸವನ್ನು ಮೂಡಿಸಿದ್ದಾರೆ. ವಿರಾಟ್‌ಗೆ ಫಿಲ್ ಸಾಲ್ಟ್ ಉತ್ತಮ ಜೊತೆ ನೀಡಬಲ್ಲರು. ವಿರಾಟ್ ಈ ಪಂದ್ಯದಲ್ಲಿ 24 ರನ್‌ ಬಾರಿಸಿದರೆ ಆರ್‌ಸಿಬಿ ಪರ 9 ಸಾವಿರ ರನ್‌ ಕಲೆ ಹಾಕಿದ ಸಾಧನೆ ಮಾಡಲಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ಮಯಾಂಕ್‌ ಅಗರ್‌ವಾಲ್‌, ಜಿತೇಶ್‌ ಶರ್ಮಾ, ರೊಮಾರಿಯೋ ಶೆಫರ್ಡ್‌, ರಜತ್ ಪಾಟಿದಾರ್‌ ತಮ್ಮ ಉತ್ತಮ ಆಟವನ್ನು ಆಡಬೇಕಿದೆ. ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಗಾಯಗೊಂಡಿದ್ದ ಟೀಮ್ ಡೇವಿಡ್ ಆಡುವುದು ಅನುಮಾನವಾಗಿದೆ. ಇವರ ಬದಲಿಗೆ ಜಾಕಬ್‌ ಬೆತೆಲ್‌ ಅಥವಾ ಲಿಯಾಮ್‌ ಲಿವಿಂಗ್‌ಸ್ಟೋನ್ ಅವಕಾಶ ಸಿಗುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? ಇಂಗ್ಲೆಂಡ್‌ ಪ್ರವಾಸಕ್ಕೆ ಭಾರತದ ಅಂಡರ್‌ 19 ತಂಡ ಪ್ರಕಟ; ವೈಭವ್ ಸೂರ್ಯವಂಶಿ, ಆಯುಷ್‌ಗೆ ಸ್ಥಾನ

ಆರ್‌ಸಿಬಿ ತಂಡದ ಬೌಲಿಂಗ್‌ ಬಲಾಢ್ಯವಾಗಿದೆ. ಟೀಮ್ ಇಂಡಿಯಾದ ಪರ ಜೋಶ್‌ ಹ್ಯಾಜಲ್‌ವುಡ್‌ ತಂಡಕ್ಕೆ ಆಗಮಿಸಿರುವುದು ತಂಡಕ್ಕೆ ಬಲ ತಂದಿದೆ. ಭುವನೇಶ್ವರ್ ಕುಮಾರ್, ಯಶ್ ದಯಾಳ್ ಬಿಗುವಿನ ದಾಳಿ ನಡೆಸಿ ತಂಡಕ್ಕೆ ನೆರವಾಗಬೇಕಿದೆ. ಇನ್ನು ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ಸುಯೇಶ್ ಶರ್ಮಾ, ಕೃನಾಲ್‌ ಪಾಂಡ್ಯ ಶಿಸ್ತು ಬದ್ಧ ದಾಳಿ ನಡೆಸಬೇಕಿದೆ.

ಲಖನೌ ತಂಡದಲ್ಲಿ ಸ್ಟಾರ್ ಆಟಗಾರರು ಇದ್ದು, ಬಿರುಸಿನ ಬ್ಯಾಟ್ ಮಾಡಬೇಕಿದೆ. ಐಡೇನ್‌ ಮಾರ್ಕ್ರಾಮ್‌, ಮಿಚ್ ಮಾರ್ಷ್, ರಿಷಭ್‌ ಪಂತ್‌, ನಿಕೋಲಸ್‌ ಪೂರನ್‌ ದೊಡ್ಡ ಇನಿಂಗ್ಸ್‌ ಕಟ್ಟಬೇಕಿದೆ. ರವಿ ಬಿಷ್ಣೋಯಿ, ದಿಗ್ವೇಶ್ ರಾಠಿ ಹಾಗೂ ವೇಗದ ಬೌಲರ್‌ಗಳು ಶಿಸ್ತುಬದ್ಧ ದಾಳಿ ನಡೆಸಬೇಕಿದೆ.

ಪ್ಲೇ ಆಫ್‌ ಲೆಕ್ಕಾಚಾರ

ಆರ್‌ಸಿಬಿ ತಂಡ ಲಖನೌ ತಂಡ ಸೋಲಿಸಿದರೆ: ಕ್ವಾಲಿಫೈಯರ್-1: ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು

ಎಲಿಮಿನೇಟರ್: ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್

ಲಖನೌ ಸೂಪರ್ ಜೈಂಟ್ಸ್ ಗೆದ್ದರೆ: ಕ್ವಾಲಿಫೈಯರ್-1: ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್

ಎಲಿಮಿನೇಟರ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್

ಉಭಯ ತಂಡಗಳ ಪಂದ್ಯವಾಡುವ 11ರ ಬಳಗ

ಆರ್‌ಸಿಬಿ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ , ಮಯಾಂಕ್ ಅಗರವಾಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್ , ಯಶ್ ದಯಾಳ್‌, ಬ್ಲೆಸ್ಸಿಂಗ್ ಮುಜರಬಾನಿ, ಸುಯಾಶ್ ಶರ್ಮಾ

ಎಲ್‌ಎಸ್‌ಜಿ: ಮಿಚೆಲ್ ಮಾರ್ಷ್ , ಆರ್ಯನ್ ಜುಯಲ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ/ವಿಕೆಟ್‌ ಕೀಪರ್), ಆಯುಷ್ ಬದೋನಿ, ಅಬ್ದುಲ್ ಸಮದ್ , ಶಾರ್ದೂಲ್ ಠಾಕೂರ್/ಆಕಾಶ್ ಸಿಂಗ್, ಆಕಾಶ್ ದೀಪ್, ಆವೇಶ್ ಖಾನ್ , ಶಹಬಾಜ್ ಅಹ್ಮದ್, ದಿಗ್ವೇಶ್ ಸಿಂಗ್ ರಾಠಿ, ವಿಲಿಯಂ ಓ’ಆರ್.

ಪಂದ್ಯದ ಸಮಯ: ಸಂಜೆ 7.30ಕ್ಕೆ

ನೇರ ಪ್ರಸಾರ: ಜಿಯೋ ಹಾಟ್‌ ಸ್ಟಾರ್ ಹಾಗೂ ಸ್ಟಾರ್‌ ಸ್ಪೋರ್ಟ್ಸ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...