ಐಪಿಎಲ್ 2025: ಇಂದಿನ 2 ಪಂದ್ಯಗಳಲ್ಲಿ ಇವೆರೆಡು ತಂಡ ಗೆದ್ದರೆ ಆರ್‌ಸಿಬಿ ಪ್ಲೇಆಫ್‌ಗೆ ಪ್ರವೇಶ !

Date:

ಇಂಡಿಯನ್ ಪ್ರೀಮಿಯರ್ ಲೀಗ್​ನ 58ನೇ ಪಂದ್ಯ ಮಳೆಯಿಂದ ರದ್ದಾಗಿದೆ. ಇದರಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಬಹುತೇಕ ಹೊರಬಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ ಒಂದು ಅಂಕವನ್ನು ಮಾತ್ರ ಪಡೆದುಕೊಂಡಿದೆ. ಆದರೆ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ.

ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆದ್ದು 2 ಅಂಕಗಳನ್ನು ಪಡೆದುಕೊಂಡಿದ್ದರೆ 18 ಅಂಕಗಳೊಂದಿಗೆ ಅಧಿಕೃತವಾಗಿ ಪ್ಲೇಆಫ್​ ಪ್ರವೇಶಿಸುತ್ತಿತ್ತು. ಇದೀಗ ಆರ್‌ಸಿಬಿ ಪಡೆಯ ಪ್ಲೇಆಫ್ ಪ್ರವೇಶ ಖಚಿತವಾಗಲು ಮುಂದಿನ ಪಂದ್ಯದವರೆಗೆ ಕಾಯಬೇಕು. ಅಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆರ್​ಸಿಬಿ ಗೆದ್ದರೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

ಅದಕ್ಕೂ ಮುನ್ನ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ, ಪಂಜಾಬ್ ಕಿಂಗ್ಸ್ ತಂಡವನ್ನು ರಾಜಸ್ಥಾನ್ ರಾಯಲ್ಸ್ ತಂಡ ಸೋಲಿಸಬೇಕು. ಇಂದು (ಮೇ 18) ನಡೆಯಲಿರುವ ಆರ್‌ಆರ್‌ ಹಾಗೂ ಪಂಜಾಬ್‌ ಕಿಂಗ್ಸ್‌ ಮುಖಾಮುಖಿಯಲ್ಲಿ ಪಂಜಾಬ್ ಸೋಲನುಭವಿಸಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಡುವುದು ಖಚಿತವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವೇಳೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ, ಇಂದು ನಡೆಯಲಿರುವ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಗೆದ್ದರೆ ಸಾಕು. ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋತರೂ ಕೂಡ ಆರ್​ಸಿಬಿ ತಂಡದ ಪ್ಲೇಆಫ್ ಖಚಿತವಾಗಲಿದೆ.

ಇದನ್ನು ಓದಿದ್ದೀರಾ? ಸ್ಲಿಪ್​ನಲ್ಲಿ ವಿಕೆಟ್ ಕೀಪರ್ ನಿಂತಿದ್ದಕ್ಕೆ 5 ರನ್‌ ನೀಡಿದ ಅಂಪೈರ್; ಏನಿದು ಹೊಸ ನಿಯಮ?

ಹೀಗಾಗಿ ಇಂದು ನಡೆಯಲಿರುವ 2 ಪಂದ್ಯಗಳ ಫಲಿತಾಂಶದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಪ್ರವೇಶ ನಿರ್ಧಾರವಾಗಲಿದೆ. ಇನ್ನು ಈ ಎರಡು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗೆದ್ದರೆ, ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಅಥವಾ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದರೆ ಸಾಕು. ಈ ಮೂಲಕ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

ರಾಹುಲ್​ಗೆ ಇತಿಹಾಸ ಸೃಷ್ಟಿಸುವ ಅವಕಾಶ

ಐಪಿಎಲ್ 2025 ರ ಋತುವಿನ 60 ನೇ ಲೀಗ್ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಇಂದು ನಡೆಯಲಿದ್ದು, ಈ ಎರಡೂ ತಂಡಗಳ ನಡುವಿನ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಇಂದಿನ ಪಂದ್ಯದಲ್ಲಿ ಮತ್ತೊಮ್ಮೆ ಎಲ್ಲರ ಕಣ್ಣುಗಳು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರ ಕೆ ಎಲ್ ರಾಹುಲ್ ಅವರ ಮೇಲಿದೆ. ಅವರು ಈ ಋತುವಿನಲ್ಲಿ ಈವರೆಗೆ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ದೊಡ್ಡ ದಾಖಲೆಯನ್ನು ಮುರಿಯಲು ರಾಹುಲ್‌ಗೆ ಉತ್ತಮ ಅವಕಾಶ ಒದಗಿಬಂದಿದೆ.

ಕೆ ಎಲ್ ರಾಹುಲ್ ಐಪಿಎಲ್ 2025ರ ಋತುವಿನಲ್ಲಿ 10 ಪಂದ್ಯಗಳಲ್ಲಿ 47.63 ಸರಾಸರಿಯಲ್ಲಿ 381 ರನ್ ಗಳಿಸಿದ್ದಾರೆ, ಇದರಲ್ಲಿ ಅವರು ಮೂರು ಅರ್ಧಶತಕದ ಇನಿಂಗ್ಸ್‌ಗಳನ್ನು ಆಡಿದ್ದಾರೆ. ಅವರ ಸ್ಟ್ರೈಕ್ ರೇಟ್ ಕೂಡ 142.16 ಆಗಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೆ ಎಲ್ ರಾಹುಲ್ ಇನ್ನೂ 33 ರನ್ ಗಳಿಸಿದರೆ, ಅವರು ತಮ್ಮ ಟಿ20 ವೃತ್ತಿಜೀವನದಲ್ಲಿ 8000 ರನ್‌ಗಳ ಗಡಿಯನ್ನು ತಲುಪುತ್ತಾರೆ. ರಾಹುಲ್ ಈ ಸಾಧನೆ ಮಾಡಿದರೆ, ಅತಿ ಕಡಿಮೆ ಇನಿಂಗ್ಸ್‌ಗಳಲ್ಲಿ ಈ ದಾಖಲೆ ಮಾಡಿದ ಭಾರತೀಯ ಆಟಗಾರನಾಗುತ್ತಾನೆ. ಆ ಮೂಲಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿಯುತ್ತಾರೆ.

ಕೊಹ್ಲಿ ತಮ್ಮ ಟಿ20 ವೃತ್ತಿಜೀವನದಲ್ಲಿ 243 ಇನಿಂಗ್ಸ್‌ಗಳಲ್ಲಿ 8000 ರನ್‌ಗಳನ್ನು ಪೂರೈಸಿದ್ದರು. ಟಿ20 ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಇನಿಂಗ್ಸ್‌ಗಳಲ್ಲಿ 8000 ರನ್‌ಗಳನ್ನು ಪೂರ್ಣಗೊಳಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಅವರು ಕೇವಲ 213 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...