ಐಪಿಎಲ್ 2025 | ಇಂದು ಆರ್​ಸಿಬಿ-ಎಸ್ಆರ್​ಎಚ್ ಪಂದ್ಯ; ಲಖನೌದಲ್ಲಿ ಮಳೆ ಬರುತ್ತದೆಯೇ?

Date:

ಲಖನೌದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದರಾಬಾದ್ ತಂಡಗಳ ನಡುವೆ ಐಪಿಎಲ್‌ನ 65 ನೇ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಬಡ್ತಿ ಪಡೆಯಲು ಆರ್‌ಸಿಬಿ ಯೋಜನೆ ಮಾಡಿಕೊಂಡಿದೆ. ರಜತ್‌ ಪಾಟಿದಾರ್‌ ಸಾರಥ್ಯದ ತಂಡ ಸುಮಾರು 20 ದಿನಗಳ ಬಳಿಕ ಮೈದಾನವನ್ನು ಪ್ರವೇಶಿಸಲಿದೆ.

ಪ್ರಸಕ್ತ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿದ 12 ಪಂದ್ಯಗಳಲ್ಲಿ ಆರ್‌ಸಿಬಿ 8 ಜಯ, 3 ಸೋಲು ಕಂಡಿದ್ದು 17 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿದರೆ, 19 ಅಂಕಗಳು ಆಗುತ್ತವೆ. ಈ ಮೂಲಕ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಬಡ್ತಿ ಪಡೆಯುತ್ತದೆ. ಎಸ್‌ಆರ್‌ಎಚ್‌ ಇದೇ ಅಂಗಳದಲ್ಲಿ ಮೂರು ದಿನಗಳ ಹಿಂದೆ ಪಂದ್ಯವನ್ನು ಆಡಿದಾಗ ಕಪ್ಪು ಮಣ್ಣಿನ ಪಿಚ್‌ನಲ್ಲಿ ಆಡಿತ್ತು. ಆದರೆ ಇಂದು ಕೆಂಪು ಮಣ್ಣಿನ ಪಿಚ್‌ ಮೇಲೆ ಆಡಲಿದೆ.

ಉಭಯ ತಂಡಗಳು ಈಗಾಗಲೇ 25 ಪಂದ್ಯಗಳಲ್ಲಿ ಮುಖಾಮುಖಿ ಆಗಿದ್ದು ಆರ್‌ಸಿಬಿ 11 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಎಸ್‌ಆರ್‌ಎಚ್‌ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆದರೆ ಈ ಲೀಗ್‌ನಲ್ಲಿ ಆರ್‌ಸಿಬಿ ಅಮೋಘ ಫಾರ್ಮ್‌ನಲ್ಲಿದ್ದು, ಮತ್ತೊಂದು ಜಯದ ಕನಸಿನಲ್ಲಿದೆ. ಈ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಮಳೆ ಬರುವ ಕಾರಣದಿಂದ ಪಂದ್ಯವನ್ನು ಲಖನೌಗೆ ವರ್ಗಾಯಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಖನೌದಲ್ಲಿ ಹವಾಮಾನ ಹೇಗಿದೆ?

ಪಂದ್ಯ ಸಂಜೆ 7.30ಕ್ಕೆ ಆರಂಭವಾಗಲಿದೆ. ಪಂದ್ಯ ನಡೆಯುವ ಸಮಯದಲ್ಲಿ ಲಖನೌದಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಮಳೆ ಬರುವ ಸಾಧ್ಯತೆ ಬಹುತೇಕ ಕಡಿಮೆ. ಉತ್ತರ ಪ್ರದೇಶದ ರಾಜಧಾನಿಯಲ್ಲಿ ಇಂದು ತಾಪಮಾನ 30 ಡಿಗ್ರಿಯಿಂದ 36 ಡಿಗ್ರಿ ಇರಲಿದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನು ಓದಿದ್ದೀರಾ? ಮೈದಾನದಲ್ಲಿ ಜಗಳಕ್ಕಿಳಿದ ಅಭಿಷೇಕ್ ಶರ್ಮಾ–ದಿಗ್ವೇಶ್ ರಥಿ; ಬಿಸಿಸಿಐನಿಂದ ಒಬ್ಬರಿಗೆ ಅಮಾನತು ಶಿಕ್ಷೆ

ಒಂದುಉ ವೇಳೆ ಮಳೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ರದ್ದಾದರೆ ಅಥವಾ ಸೋತರೆ ಅಂಕಪಟ್ಟಿಯಲ್ಲಿ ಅಗ್ರ 2ರ ಸ್ಥಾನ ಪಡೆಯುವ ಆರ್‌ಸಿಬಿ ಯೋಜನೆ ಈಡೇರುವುದಿಲ್ಲ. ಹೀಗಾಗಿ ಇಂದಿನ ಪಂದ್ಯ ಕುತೂಹಲ ಕೆರಳಿಸಿದೆ.

ಪಂದ್ಯವಾಡುವ ಉಭಯ ತಂಡಗಳ ಸಂಭಾವ್ಯ ಆಟಗಾರರು

ಆರ್‌ಸಿಬಿ:

ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಮಯಾಂಕ್ ಅಗರ್ವಾಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್, ರಸಿಖ್ ದಾರ್ ಸಲಾಮ್, ಮನೋಜ್ ಸಿಂಗ್ ಭಾಂಡಗೆಲ್, ಲಿವಿಂಗ್ ಭಾಂಡಗೆಲ್, ರಾಸಿಖ್ ದಾರ್ ಸಲಾಂ, ಜಾಕೋಬ್ ಭಾಂಡಗೆಲ್ ತುಷಾರಾ, ಲುಂಗಿ ಎನ್‌ಗಿಡಿ, ಮೋಹಿತ್ ರಾಠಿ, ಸ್ವಸ್ತಿಕ್ ಚಿಕಾರಾ, ಅಭಿನಂದನ್ ಸಿಂಗ್.

ಎಸ್‌ಆರ್‌ಎಚ್‌:

ಪ್ಯಾಟ್ ಕಮ್ಮಿನ್ಸ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಅಥರ್ವ ಟೇಡೆ, ಅಭಿನವ್ ಮನೋಹರ್, ಅನಿಕೇತ್ ವರ್ಮಾ, ಸಚಿನ್ ಬೇಬಿ, ಸ್ಮರಣ್ ರವಿಚಂದ್ರನ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಹರ್ಷಲ್ ಪಟೇಲ್, ಕಮಿಂದು ಮೆಂಡಿಸ್, ವಿಯಾನ್ ಶರ್ಮಾ ಮಲ್ಡರ್, ರಾಹುಲ್ ಶರ್ಮಾ ಮಲ್ಡರ್, ಅಭ್ತಿಶ್ ಕುಮಾರ್ ಚಹಾರ್, ಸಿಮರ್ಜಿತ್ ಸಿಂಗ್, ಜೀಶನ್ ಅನ್ಸಾರಿ, ಜಯದೇವ್ ಉನದ್ಕತ್, ಇಶಾನ್ ಮಾಲಿಂಗ.

ಪಂದ್ಯ ಆರಂಭ: ಸಂಜೆ 7.30

ನೇರ ಪ್ರಸಾರ: ಜಿಯೋ ಹಾಟ್‌ ಸ್ಟಾರ್ ಹಾಗೂ ಸ್ಟಾರ್‌ ಸ್ಪೋರ್ಟ್ಸ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...