ಐಪಿಎಲ್ 2025 | ಇದು ನನ್ನ ಮೈದಾನ: ಗೆದ್ದ ನಂತರ ಕೆ ಎಲ್ ರಾಹುಲ್‌ಗೆ ಟಾಂಗ್‌ ಕೊಟ್ಟ ವಿರಾಟ್ ಕೊಹ್ಲಿ!

Date:

ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಆರ್‌ಸಿಬಿ ಗೆಲುವು ಪಡೆದ ನಂತರ ತಂಡದ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ‘ಇದು ನನ್ನ ಮೈದಾನ’ ಎಂದು ಹೇಳಿ ಕೆ ಎಲ್‌ ರಾಹುಲ್‌ಗೆ ತಮಾಷೆಯ ಮೂಲಕ ಟಾಂಗ್‌ ನೀಡಿದ್ದಾರೆ.

6 ವಿಕೆಟ್‌ಗಳ ಜಯ ಗಳಿಸಿದ ಬಳಿಕ ರಾಹುಲ್‌ ಜೊತೆ ಕೊಹ್ಲಿ ಸಂತೋಷದಿಂದ ಮಾತನಾಡುತ್ತಿದ್ದರು. ಈ ವೇಳೆ ಕೊಹ್ಲಿ ನೆಲಕ್ಕೆ ಕೈ ತೋರಿಸುತ್ತಾ ಇದು ನನ್ನ ಮೈದಾನ ಎಂದು ಹೇಳಿದರು. ಇದಕ್ಕೆ ರಾಹುಲ್‌, ಪೆವಿಲಿಯನ್‌ಗೇ ಕೊಹ್ಲಿ ಹೆಸರು ಇದೆ ಎಂದು ನಗು ನಗುತ್ತಲೆ ಸನ್ನೆ ಮಾಡಿದರು. ನಂತರ ಕೊಹ್ಲಿ, ರಾಹುಲ್‌ ಅವರನ್ನು ಅಪ್ಪಿಕೊಂಡು ಮುನ್ನಡೆದರು. ಈ ಎಲ್ಲ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಮೂಲತಃ ದೆಹಲಿಯವರಾದ ಕೊಹ್ಲಿ ಈ ಮೈದಾನದಲ್ಲೇ ತಮ್ಮ ಕ್ರಿಕೆಟ್‌ ಜೀವನವನ್ನು ಶುರು ಮಾಡಿದ್ದರು. ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿರುವ ಒಂದು ಸ್ಟ್ಯಾಂಡ್‌ಗೆ ‘ವಿರಾಟ್‌ ಕೊಹ್ಲಿ ಪೆವಿಲಿಯನ್‌’ ಎಂದು ಹೆಸರನ್ನು ಇಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿರುದ್ಧ ಗೆದ್ದ ಬಳಿಕ ಕನ್ನಡಿಗ ಕೆ ಎಲ್‌ ರಾಹುಲ್‌ ಕಾಂತಾರ ಶೈಲಿಯಲ್ಲಿ ವೃತ್ತ ಬರೆದು, ‘ಇದು ನನ್ನ ನೆಲ’ ಎಂದು ಸಂಭ್ರಮಿಸಿದ್ದರು.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಪಾಕ್‌ನ ಬಾಬರ್‌ ಅಜಮ್‌ ದಾಖಲೆ ಅಳಿಸಿದ ವಿರಾಟ್ ಕೊಹ್ಲಿ

ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದ ರಾಹುಲ್‌, ಬೆಂಗಳೂರು ನನ್ನ ಮನೆ. ಈ ಮೈದಾನದ ಬಗ್ಗೆ ಎಲ್ಲರಿಗಿಂತ ಚೆನ್ನಾಗಿ ನನಗೆ ತಿಳಿದಿದೆ ಎಂದರು. ಈ ಡೈಲಾಗ್‌ ಹೊಡೆಯುವ ಮೂಲಕ ಹರಾಜಿನಲ್ಲಿ ತನ್ನನ್ನು ಪರಿಗಣಿಸದ ಆರ್‌ಸಿಬಿಗೆ ಟಾಂಗ್‌ ನೀಡಿದ್ದರು.

ನಿನ್ನೆಯ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 8 ವಿಕೆಟ್‌ ನಷ್ಟಕ್ಕೆ 162 ರನ್‌ ಕಲೆ ಹಾಕಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಆರ್‌ಸಿಬಿ 9 ಎಸೆತ ಬಾಕಿ ಇರುವಂತೆಯೇ 165 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

ಕೃನಾಲ್‌ ಪಾಂಡ್ಯ ಅಜೇಯ 73 ರನ್‌ (47 ಎಸೆತ, 5 ಬೌಂಡರಿ, 4 ಸಿಕ್ಸ್‌) ಬಾರಿಸಿದರೆ, ವಿರಾಟ್‌ ಕೊಹ್ಲಿ 51 ರನ್‌( 47 ಎಸೆತ, 4 ಬೌಂಡರಿ) ಪೇರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಆಡಿದ 10 ಪಂದ್ಯಗಳಲ್ಲಿ 7 ಪಂದ್ಯ ಗೆದ್ದು 14 ಅಂಕ ಪಡೆದು ಆರ್‌ಸಿಬಿ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...