ಐಪಿಎಲ್ 2025 | ರಿವ್ಯೂ ತೆಗೆದುಕೊಳ್ಳದೆ ಪಂದ್ಯ ಸೋತರೇ ಡೆಲ್ಲಿ ಕ್ಯಾಪಿಟಲ್ಸ್?

Date:

ಐಪಿಎಲ್ 18ನೇ ಆವೃತ್ತಿಯ 48ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲನುಭವಿಸಿದೆ. ಈ ಸೋಲಿಗೆ ಪ್ರಮುಖ ಕಾರಣ ರಿವ್ಯೂ ತೆಗೆದುಕೊಳ್ಳದಿರುವುದು ಎಂದರೆ ತಪ್ಪಾಗಲಾರದು. ಏಕೆಂದರೆ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 113 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡಿತ್ತು.

ಈ ಹಂತದಲ್ಲಿ ಕಣಕ್ಕಿಳಿದ ರಿಂಕು ಸಿಂಗ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆದರೆ ಇದೇ ರಿಂಕು ಸಿಂಗ್ ಕೇವಲ 13 ರನ್​ಗಳಿಸಿದಾಗ ಪೆವಿಲಿಯನ್​ ಸೇರಬೇಕಿತ್ತು. ಅಕ್ಷರ್ ಪಟೇಲ್ ಎಸೆದ 14ನೇ ಓವರ್‌ನ ನಾಲ್ಕನೇ ಎಸೆತವನ್ನು ಲೆಗ್ ಸೈಡ್​ನತ್ತ ಬಾರಿಸಲು ರಿಂಕು ಸಿಂಗ್ ಪ್ರಯತ್ನಿಸಿದರು.

ಆದರೆ ಬ್ಯಾಟ್​ನ ಅಂಚಿನಿಂದ ಸಾಗಿದ ಚೆಂಡು ವಿಕೆಟ್ ಕೀಪರ್ ಕೈ ಸೇರಿದೆ. ಇತ್ತ ಚೆಂಡು ಬ್ಯಾಟ್​ಗೆ ತಾಗಿದೆಯಾ ಎಂಬ ಸಂಶಯವೊಂದು ಅಕ್ಷರ್ ಪಟೇಲ್​ಗೆ ಮೂಡಿತ್ತು. ಆದರೆ ವಿಕೆಟ್ ಕೀಪರ್ ಅಭಿಷೇಕ್ ಪೊರೆಲ್ ಚೆಂಡು ಬ್ಯಾಟ್​ಗೆ ತಾಗಿಲ್ಲ, ಡಿಆರ್​ಎಸ್​ ತೆಗೆದುಕೊಳ್ಳುವುದು ಬೇಡ ಎಂದರು. ಹೀಗಾಗಿ ಅಕ್ಷರ್ ಪಟೇಲ್ ರಿವ್ಯೂವನ್ನು ತೆಗೆದುಕೊಳ್ಳದಿರಲು ನಿರ್ಧರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಇದು ನನ್ನ ಮೈದಾನ: ಗೆದ್ದ ನಂತರ ಕೆ ಎಲ್ ರಾಹುಲ್‌ಗೆ ಟಾಂಗ್‌ ಕೊಟ್ಟ ವಿರಾಟ್ ಕೊಹ್ಲಿ!

ಇದಾದ ಬಳಿಕ ತೋರಿಸಲಾದ ರಿಪ್ಲೇನಲ್ಲಿ ರಿಂಕು ಸಿಂಗ್ ಅವರ ಬ್ಯಾಟ್ ಚೆಂಡಿಗೆ ತಗುಲಿರುವುದು ಸ್ಪಷ್ಟವಾಗಿತ್ತು. ಅಲ್ಲದೆ ಅಕ್ಷರ್ ಪಟೇಲ್ ರಿವ್ಯೂ ತೆಗೆದುಕೊಂಡಿದ್ದರೆ, ಮೂರನೇ ಅಂಪೈರ್ ಔಟ್ ನೀಡುತ್ತಿದ್ದರು. ಆದರೆ ಅಭಿಷೇಕ್ ಪೊರೆಲ್ ಅವರ ಅತಿಯಾದ ಆತ್ಮ ವಿಶ್ವಾಸದಿಂದಾಗಿ ರಿಂಕು ಸಿಂಗ್​​ಗೆ ಜೀವದಾನ ಲಭಿಸಿತು.

13 ರನ್​ಗಳಿಸಿದ್ದಾಗ ಸಿಕ್ಕ ಜೀವದಾನವನ್ನು ಬಳಸಿಕೊಂಡ ರಿಂಕು ಸಿಂಗ್ 25 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಬೌಂಡರಿ 35 ರನ್ ಕಲೆಹಾಕಿದರು. ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ಜೀವದಾನದಿಂದಾಗಿ ರಿಂಕು ಸಿಂಗ್ ಹೆಚ್ಚುವರಿ 22 ರನ್ ಗಳಿಸಿದ್ದರು. ಈ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಕೋರ್ 200ರ ಗಡಿದಾಟುವಲ್ಲಿ ಪ್ರಮುಖ ಪಾತ್ರವಹಿಸಿದರು.

ಅದರಂತೆ 205 ರನ್​ಗಳ ಗುರಿ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 190 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 14 ರನ್​ಗಳಿಂದ ಸೋಲೊಪ್ಪಿಕೊಂಡಿತು. ಅಂದರೆ ಇಲ್ಲಿ ರಿಂಕು ಸಿಂಗ್ ಗಳಿಸಿದ ಹೆಚ್ಚುವರಿ 22 ರನ್​ಗಳು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಿಗೆ ದುಬಾರಿಯಾಗಿ ಪರಿಣಮಿಸಿ ಸೋಲಿಗೆ ಕಾರಣವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...