ಐಪಿಎಲ್ | ಪ್ಲೇ-ಆಫ್ ಪ್ರವೇಶಿಸಿದರೂ ಸೋಲಿನ ಸುಳಿಯಿಂದ ಹೊರಬರದ ರಾಜಸ್ಥಾನ್ ರಾಯಲ್ಸ್!

Date:

ಈ ಬಾರಿಯ ಐಪಿಎಲ್‌ನಲ್ಲಿ ಒಂದು ಕಡೆ ಆರ್‌ಸಿಬಿ ತಂಡ ಸತತ ಐದು ಪಂದ್ಯದಲ್ಲಿ ಗೆದ್ದು ಪ್ಲೇ ಆಫ್ ಪ್ರವೇಶಿಸಲು ಹೋರಾಟ ನಡೆಸುತ್ತಿದ್ದರೆ, ಪ್ಲೇ-ಆಫ್ ಪ್ರವೇಶಿಸಿದ್ದರೂ ಕೂಡ ರಾಜಸ್ಥಾನ್ ರಾಯಲ್ಸ್ ತಂಡ ಸೋಲಿನ ಸುಳಿಯಿಂದ ಇನ್ನೂ ಹೊರಬಂದಿಲ್ಲ.

ಹೌದು. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ತಂಡವು ಸತತವಾಗಿ ನಾಲ್ಕನೇ ಪಂದ್ಯದಲ್ಲೂ ಕೂಡ ಸೋಲು ಅನುಭವಿಸಿದೆ. ರಾಜಸ್ಥಾನ್ ರಾಯಲ್ಸ್ ಕೆಕೆಆರ್ ವಿರುದ್ಧ ಕೊನೆಯ ಪಂದ್ಯವನ್ನು ಮೇ 19ರಂದು ಆಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 15ರಂದು ಗುವಾಹಟಿಯ ಬರ್ಸಾಪುರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 65ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಸತತ 4ನೇ ಸೋಲು ಅನುಭವಿಸಿದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್ 2024ರ ಪ್ಲೇಆಫ್‌ಗೆ ಪ್ರವೇಶ ಪಡೆದಿದ್ದರೂ, ಅಗ್ರ 2ರಲ್ಲಿ ಲೀಗ್ ಹಂತ ಮುಗಿಸಲು ಅವಕಾಶವನ್ನು ಕೈ ಚೆಲ್ಲಿಕೊಂಡಿದೆ‌. ಇನ್ನು ಐಪಿಎಲ್ 2024ರ ಪ್ಲೇಆಫ್‌ನಿಂದ ಹೊರಬಿದ್ದಿರುವ ಪಂಜಾಬ್ ಕಿಂಗ್ಸ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ ತಂಡವು, ರಿಯಾನ್ ಪರಾಗ್ ಅವರ 48 ರನ್‌ಗಳ ಸ್ಕೋರ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 144 ರನ್ ಕಲೆಹಾಕಲಷ್ಟೇ ಶಕ್ತವಾಗಿತ್ತು.

145 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡ ಹಂಗಾಮಿ ನಾಯಕ ಸ್ಯಾಮ್ ಕರ್ರಾನ್ ಅವರ ಅಮೋಘ ಅರ್ಧಶತಕದ ಸಾಹಸದಿಂದ 18.5 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.

ಸ್ಯಾಮ್ ಕರನ್, 41 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ ಅಜೇಯ 63 ರನ್ ಬಾರಿಸಿದರೆ, ಜಿತೇಶ್ ಶರ್ಮಾ 20 ಎಸೆತಗಳಲ್ಲಿ 2 ಸಿಕ್ಸರ್‌ಗಳ ಮೂಲಕ 22 ರನ್ ಗಳಿಸಿದರು. ಇನ್ನು ಅಶುತೋಷ್ ಶರ್ಮಾ 11 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 17 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ರಾಜಸ್ಥಾನ ಪರ ಅವೇಶ್ ಖಾನ್ 28 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಯಜುವೇಂದ್ರ ಚಹಾಲ್ 31 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಟ್ರೆಂಟ್ ಬೌಲ್ಟ್ ಒಂದು ವಿಕೆಟ್ ಪಡೆದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...