ಐಪಿಎಲ್ 2025 | ಕ್ವಿಂಟನ್ ಡಿಕಾಕ್ ಸೊಗಸಾದ ಆಟ; ಮೊದಲ ಜಯ ದಾಖಲಿಸಿದ ಕೆಕೆಆರ್

Date:

ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ (ಅಜೇಯ 97) ಹಾಗೂ ಬೌಲರ್‌ಗಳ ಕರಾರುವಕ್ ದಾಳಿಯ ನೆರವಿನಿಂದ ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡ 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಮೊದಲು ಗೆಲುವು ದಾಖಲಿಸಿದೆ. ಈ ಮೂಲಕ ಆರ್‌ಆರ್‌ ಎರಡನೇ ಪಂದ್ಯದಲ್ಲಿ ಸೋಲು ಅನುಭವಿಸಿದೆ.

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 151 ರನ್ ಪೇರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಕೆಕೆಆರ್ 17.3 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 153 ರನ್‌ ಕಲೆ ಹಾಕಿ ಜಯ ಸಾಧಿಸಿತು.

ಡಿಕಾಕ್‌ ಅಜೇಯ 97 ರನ್‌ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಸುನಿಲ್ ನರೈನ್‌ ಅವರ ಅನುಪಸ್ಥಿತಿಯಲ್ಲಿ ಇನಿಂಗ್ಸ್‌ ಆರಂಭಿಸಿದ ಮೋಯಿನ್‌ ಅಲಿ ಹಾಗೂ ಕ್ವಿಂಟನ್‌ ಡಿಕಾಕ್ ಪವರ್‌ ಪ್ಲೇನಲ್ಲಿ ಯಾವುದೇ ವಿಕೆಟ್ ಬೀಳದಂತೆ ನೋಡಿಕೊಂಡರು. ಈ ಜೋಡಿ ಪವರ್‌ ಪ್ಲೇನಲ್ಲಿ 41 ರನ್‌ ಸೇರಿಸಿತು. ಮೋಯಿನ್ ಅಲಿ ಇಲ್ಲದ ರನ್‌ ಕದಿಯಲು ಹೋಗಿ ಔಟ್ ಆದರು. ಎರಡನೇ ವಿಕೆಟ್‌ಗೆ ಕ್ವಿಂಟನ್‌ ಡಿಕಾಕ್‌ ಅವರನ್ನು ಸೇರಿಕೊಂಡ ಅಜಿಂಕ್ಯ ರಹಾನೆ ಸಾಧಾರಣ ಆಟವನ್ನು ಆಡಿದರು. ಈ ಜೋಡಿ 24 ಎಸೆತಗಳಲ್ಲಿ 29 ರನ್‌ ಸಿಡಿಸಿತು. ನಾಯಕ ಅಜಿಂಕ್ಯ ರಹಾನೆ 15 ಎಸೆತಗಳಲ್ಲಿ 18 ರನ್‌ ಬಾರಿಸಿ ಔಟ್ ಆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರನೇ ವಿಕೆಟ್‌ಗೆ ಕ್ವಿಂಟನ್‌ ಡಿಕಾಕ್‌ ಹಾಗೂ ಯುವ ಆಟಗಾರ ಆಂಗ್ರಿಕ್ಷ್ ರಘುವಂಶಿ (22) ಜೋಡಿ ಉತ್ತಮ ಆಟವನ್ನು ಆಡಿತು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ರಾಜಸ್ಥಾನ ವಿಫಲವಾಯಿತು. ಈ ಜೋಡಿ 44 ಎಸೆತಗಳಲ್ಲಿ ಅಜೇಯ 83 ರನ್‌ಗಳ ಜತೆಯಾದ ಕಾಣಿಕೆ ನೀಡಿತು. ಭರವಸೆಯ ಆಟಗಾರ ಕ್ವಿಂಟನ್‌ ಡಿಕಾಕ್‌ ಸೊಗಸಾದ ಬ್ಯಾಟಿಂಗ್ ನಡೆಸಿದರು. ಇವರು 8 ಬೌಂಡರಿ 6 ಸಿಕ್ಸರ್‌ ಸಹಾಯದಿಂದ ಅಜೇಯ 97 ರನ್‌ ಬಾರಿಸಿ ಜಯದಲ್ಲಿ ಮಿಂಚಿದರು.

ಈ ಸುದ್ದಿ ಓದಿದ್ದೀರಾ? ಏರ್‌ ಇಂಡಿಯಾ ವಿರುದ್ಧ ಕ್ರಿಕೆಟಿಗ ಡೇವಿಡ್‌ ವಾರ್ನರ್‌ ಆಕ್ರೋಶ

ಟಾಸ್‌ ಸೋತು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡದ ಆರಂಭ ಸಾಧಾರಣವಾಗಿತ್ತು. ಯಶಸ್ವಿ ಜೈಸ್ವಾಲ್‌ ಹಾಗೂ ಸಂಜು ಸ್ಯಾಮ್ಸನ್‌ (13) ಜೋಡಿ ತಂಡಕ್ಕೆ ಉತ್ತಮ ಆರಂಭದ ಜೊತೆಯಾಟದ ಕಾಣಿಕೆ ನೀಡಲಿಲ್ಲ. ಈ ಜೋಡಿ 23 ಎಸೆತಗಳಲ್ಲಿ 33 ರನ್‌ ಸೇರಿಸಿತು. ಎರಡನೇ ವಿಕೆಟ್‌ಗೆ ಯಶಸ್ವಿ ಜೈಸ್ವಾಲ್‌ ಅವರನ್ನು ಕೂಡಿಕೊಂಡ ರಿಯಾನ್‌ ಪರಾಗ್ ಉತ್ತಮ ಜೊತೆಯಾಟ ನೀಡುವ ಸೂಚನೆ ನೀಡಿದರು.

ಆದರೆ ಈ ಜೋಡಿ ಸಹ ದೊಡ್ಡ ಜತೆಯಾಟದ ಕಾಣಿಕೆ ನೀಡಲಿಲ್ಲ. ಈ ಜೋಡಿ 24 ಎಸೆತಗಳಲ್ಲಿ 34 ರನ್‌ ಸೇರಿಸಿತು. ಪರಾಗ್‌ 15 ಎಸೆತಗಳಲ್ಲಿ 25 ರನ್‌ ಬಾರಿಸಿ ಔಟ್ ಆದರೆ, ಯಶಸ್ವಿ ಜೈಸ್ವಾಲ್‌ 24 ಎಸೆತಗಳಲ್ಲಿ 29 ರನ್‌ ಸಿಡಿಸಿ ಔಟ್ ಆದರು. ಮಧ್ಯಮ ಕ್ರಮಾಂಕದಲ್ಲಿ ನಿತೀಶ್‌ ರಾಣಾ, ವನಿಂದು ಹಸರಂಗಾ, ಶುಭಂ ದುಬೆ, ಶಿಮ್ರೋನ್‌ ಹೆಟ್ಮೆಯರ್‌, ಹೆಚ್ಚು ರನ್‌ ಗಳಿಸಲಿಲ್ಲ. ವಿಕೆಟ್ ಕೀಪರ್ ಬ್ಯಾಟರ್‌ ಧ್ರುವ್ ಜುರೇಲ್‌ ತಂಡಕ್ಕೆ ಕೊಂಚ ಆಧಾರವಾದರು.

ಅಲ್ಲದೆ ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ಶ್ರಮಿಸಿದರು. ಇವರು 28 ಎಸೆತಗಳಲ್ಲಿ 33 ರನ್‌ ಸಿಡಿಸಿ ಔಟ್ ಆದರು. ಕೆಳ ಕ್ರಮಾಂಕದಲ್ಲಿ ಜೋಫ್ರಾ ಆರ್ಚರ್ 2 ಸಿಕ್ಸರ್ ಸಹಯಾದಿಂದ 16 ರನ್‌ ಸಿಡಿಸಿದರು. ಕೆಕೆಆರ್‌ ಪರ ವೈಭವ್‌ ಆರೋರ್, ಹರ್ಷಿತ್ ರಾಣಾ, ವರುಣ್‌ ಚಕ್ರವರ್ತಿ, ಮೋಯಿನ್ ಅಲಿ ತಲಾ 2 ವಿಕೆಟ್‌ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...