ಐಪಿಎಲ್ | ಬಟ್ಲರ್ ಶತಕ: ಆರ್‌ಸಿಬಿಗೆ ಸೋಲುಣಿಸಿದ ರಾಜಸ್ಥಾನ

Date:

ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಐಪಿಎಲ್‌ನ 8ನೇ ಶತಕ ಹಾಗೂ ಸವಾಲಿನ ಮೊತ್ತ ಗಳಿಸಿದ ಹೊರತಾಗಿಯೂ, ಕಳಪೆ ಬೌಲಿಂಗ್ ಪ್ರದರ್ಶನದಿಂದ ಮತ್ತೆ ಮುಖಭಂಗ ಅನುಭವಿಸಿದೆ.

ಐಪಿಎಲ್‌ನ 19ನೇ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ್ ರಾಯಲ್ಸ್ (ಆರ್‌ಆರ್‌) ತಂಡದ ವಿರುದ್ಧ ಪ್ರವಾಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್‌ಗಳ ಸೋಲು ಕಂಡಿದೆ.

184 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ ಜೋಸ್ ಬಟ್ಲರ್ ಅವರ ಅಮೋಘ ಶತಕ ಮತ್ತು ಸಂಜು ಸ್ಯಾಮ್ಸನ್ ಅವರ ಅರ್ಧಶತಕದ ನೆರವಿನಿಂದ 19.1 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನಿಂಗ್ಸ್ ಆರಂಭಿಸಿದಾಗ ಯಶಸ್ವಿ ಜೈಸ್ವಾಲ್(0)ವಿಕೆಟನ್ನು ಬೇಗನೆ ಕಳೆದುಕೊಂಡರೂ ಕೂಡ ರಾಜಸ್ಥಾನದ ಪರ 2ನೇ ವಿಕೆಟ್‌ಗೆ 148 ರನ್ ಗಳಿಸಿದ ಬಟ್ಲರ್ ಹಾಗೂ ಸ್ಯಾಮ್ಪನ್ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು.

ನಾಯಕ ಸ್ಯಾಮ್ಸನ್(69 ರನ್, 42 ಎಸೆತ, 8 ಬೌಂಡರಿ, 2 ಸಿಕ್ಸರ್)ಅರ್ಧಶತಕ ಗಳಿಸಿ ಔಟಾದರು.

ರಿಯಾನ್ ಪರಾಗ್ (4 ರನ್), ಧ್ರುವ್ ಜುರೆಲ್ (2 ರನ್) ಅಲ್ಪ ಮೊತ್ತಕ್ಕೆ ಔಟಾದರು.

ಕೊನೆಯಲ್ಲಿ ಇನ್ನೂ 5 ಎಸೆತ ಇರುವಾಗ 94 ರನ್ ಗಳಿಸಿದ್ದ ಬಟ್ಲರ್ 19.1 ಓವರ್‌ನಲ್ಲಿ ಸಿಕ್ಸ್ ಬಾರಿಸಿ, ಜಯ ತಂದು ಕೊಟ್ಟದ್ದಲ್ಲದೇ, ಶತಕ ಕೂಡ ಬಾರಿಸಿದರು. ಆಡಿದ 100ನೇ ಐಪಿಎಲ್ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡದ ಪರ ರೀಸ್ ಟೋಪ್ಲೆ 4 ಓವರ್‌ಗಳಲ್ಲಿ 27 ರನ್ ನೀಡಿ 2 ವಿಕೆಟ್ ಪಡೆದರೆ, ಯಶ್ ದಯಾಳ್ ಮತ್ತು ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

ಈ ಗೆಲುವಿನೊಂದಿಗೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು, ಈವರೆಗೆ ಆಡಿದ ನಾಲ್ಕೂ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಆರ್‌ಸಿಬಿ ತಂಡ ಆಡಿದ 5 ಪಂದ್ಯಗಳಲ್ಲಿ ನಾಲ್ಕು ಸೋಲು ಮತ್ತು ಒಂದು ಗೆಲುವು ಪಡೆದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...