ಐಪಿಎಲ್ | ರವೀಂದ್ರ ಜಡೇಜಾ ಆಲ್‌ರೌಂಡ್ ಪ್ರದರ್ಶನಕ್ಕೆ ತಲೆಬಾಗಿದ ಪಂಜಾಬ್: ಚೆನ್ನೈಗೆ 28 ರನ್‌ಗಳ ಜಯ

Date:

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಅಸೋಸಿಯೇಷನ್​​ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು, ಚೆನ್ನೈ ಸೂಪರ್ ಕಿಂಗ್ಸ್ ತಂಡ 28 ರನ್‌ಗಳಿಂದ ಭರ್ಜರಿ ಜಯ ಕಂಡಿದೆ.

ಟಾಸ್ ಗೆದ್ದುಕೊಂಡಿದ್ದ ಪಂಜಾಬ್ ಮೊದಲು ಫೀಲ್ಡಿಂಗ್ ಆಯ್ದುಕೊಂಡು, ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್​ ಅನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತ್ತು. ರವೀಂದ್ರ ಜಡೇಜಾ ಭರ್ಜರಿ ಬ್ಯಾಟಿಂಗ್ ಮಾಡಿ 43 ರನ್ ಗಳಿಸಿ ತಂಡಕ್ಕೆ ಆಸರೆ ಆಗಿದ್ದರಿಂದ ನಿಗದಿರ 20 ಓವರ್​ಗಳಲ್ಲಿ ಪಂಜಾಬ್​ಗೆ 167 ರನ್​​ಗಳ ಗುರಿ ನೀಡಿತ್ತು.

ಆದರೆ ಈ ಸಾಧಾರಣ ಗುರಿಯನ್ನು ಬೆನ್ನಟ್ಟಲು ಪರದಾಡಿದ ಪಂಜಾಬ್, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 139 ರನ್‌ ಗಳಿಸಲಷ್ಟೇ ಶಕ್ತವಾಯಿತು. ಚೆನ್ನೈ ಪರ ಉತ್ತಮ ಸ್ಪಿನ್ ದಾಳಿ ಮಾಡಿದ ರವೀಂದ್ರ ಜಡೇಜಾ ಪಂಜಾಬ್‌ ಗೆಲುವಿಗೆ ತಣ್ಣೀರು ಎರಚಿದರು. ಈ ಮೂಲಕ ಚೆನ್ನೈ 28 ರನ್‌ಗಳಿಂದ ಗೆಲುವು ಸಾಧಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೆನ್ನೈ ನೀಡಿ 168 ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್‌ ಆರಂಭಿದಲ್ಲೇ ಜಾನಿ ಬೈರ್‌ಸ್ಟೋವ್ (7) ಮತ್ತು ರಿಲೀ ರೊಸೊವ್ (೦) ವಿಕೆಟ್‌ ಕಳೆದುಕೊಂಡು ಆಘಾತ ಅನುಭವಿಸಿತು. ಈ ವೇಳೆ ಆರಂಭಿಕ ಪ್ರಭಾಸಿಮ್ರಾನ್ ಸಿಂಗ್ ಮತ್ತು ನಾಲ್ಕನೇ ಕ್ರಮಾಂಕದಲ್ಲಿ ಬಂದ ಶಶಾಂಕ್ ಸಿಂಗ್ ನಿಧಾನವಾಗಿ ರನ್‌ ಕಲೆ ಹಾಕಿದರು. ಉತ್ತಮವಾಗಿ ಆಡುತ್ತಿದ್ದ ಶಶಾಂಕ್‌ ಸಿಂಗ್‌ 27 ರನ್‌ಗಳಿಗೆ ಔಟ್‌ ಆದರು.

ಬಳಿಕ ಪ್ರಭಾಸಿಮ್ರಾನ್ ಸಿಂಗ್ ಕೂಡ ವಿಕೆಟ್‌ ಕಳೆದುಕೊಂಡರು. ನಂತರ ಕ್ರೀಸ್‌ಗೆ ಬಂದ ಯಾವುದೇ ಪಂಜಾಬ್‌ ಆಟಗಾರರು ತಂಡಕ್ಕೆ ಆಸರೆಯಾಗಲಿಲ್ಲ. ಸ್ಯಾಮ್ ಕರ್ರಾನ್(7), ಜಿತೇಶ್ ಶರ್ಮಾ(0), ಅಶುತೋಷ್ ಶರ್ಮಾ (3) ಹರ್ಷಲ್ ಪಟೇಲ್ (12) ರಾಹುಲ್ ಚಾಹರ್ (16) ಔಟ್‌ ಆಗುವ ಮೂಲಕ ಪೆವಿಲಿಯನ್‌ ಪರೇಡ್‌‌ ನಡೆಸಿದರು.

ಕೊನೆಯಲ್ಲಿ ಪಂಜಾಬ್‌ ಗೆಲುವಿಗೆ ಹೋರಾಟ ನಡೆಸಿದ ಹರ್‌ಪ್ರೀತ್ ಬ್ರಾರ್ ಅಜೇಯ 16 ರನ್‌ ಗಳಿಸದರೆ, ಕಗಿಸೊ ರಬಾಡ 11 ರನ್‌ ಬಾರಿಸಿದರು. ಈ ಮೂಲಕ ಗುರಿ ತಲುವಲ್ಲಿ ಪಂಜಾಬ್‌ ವಿಫಲವಾಗಿ 28 ರನ್‌ಗಳಿಂದ ಸೋಲಿಗೆ ಶರಣಾಯಿತು.

ಚೆನ್ನೈ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್‌ಗಳು, ಸಾಧಾರಣ ಮೊತ್ತದ ಗುರಿ ನೀಡಿದ್ದರೂ ಕೂಡ ತಂಡಕ್ಕೆ ಜಯ ತಂದುಕೊಡುವಲ್ಲಿ ಸಫಲರಾದರು.

ಇದನ್ನು ಓದಿದ್ದೀರಾ? ಇಸ್ರೇಲ್‌ನಲ್ಲಿ ಅಲ್-ಜಝೀರಾ ಚಾನೆಲ್‌ನ ಪ್ರಸಾರಕ್ಕೆ ನಿ‍ಷೇಧ ಹೇರಿದ ನೆತನ್ಯಾಹು ಸರ್ಕಾರ

ರವೀಂದ್ರ ಜಡೇಜಾ 3 ವಿಕೆಟ್‌ ಕಬಳಿಸಿದರೆ, ಸಿಮರ್ಜೀತ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ 2 ವಿಕೆಟ್‌ ಪಡೆದುಕೊಂಡರು. ಮಿಚೆಲ್ ಸ್ಯಾಂಟ್ನರ್ ಹಾಗೂ ಶಾರ್ದೂಲ್ ಠಾಕೂರ್ 1 ವಿಕೆಟ್‌ ಪಡೆಯುವ ಮೂಲಕ ತಂಡದ ಗೆಲುವಿಗೆ ತಮ್ಮದೇ ಆದ ಕೊಡುಗೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...