ಐಪಿಎಲ್ | ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಕೆಕೆಆರ್‌: ಐಪಿಎಲ್ ಇತಿಹಾಸದಲ್ಲೇ 2ನೇ ಗರಿಷ್ಠ ಮೊತ್ತ ದಾಖಲು

Date:

ಮುಂಬೈ ವಿರುದ್ಧ ಕಳೆದ ಮಾರ್ಚ್ 27ರಂದು ನಡೆದಿದ್ದ ಐಪಿಎಲ್‌ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡವು 277 ರನ್‌ಗಳನ್ನು ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತ್ತು. ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಕೀರ್ತಿ ಹೈದರಾಬಾದ್ ತಂಡದ ಹೆಸರಲ್ಲಿತ್ತು. ಈ ದಾಖಲೆಯನ್ನು ಕೇವಲ ಎಂಟೇ ದಿನಗಳೊಳಗೆ ಮುರಿಯಲು ಯತ್ನಿಸಿದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ, ಕೇವಲ ಐದು ರನ್‌ಗಳಿಂದ ದಾಖಲೆ ಸರಿಗಟ್ಟುವುದರಿಂದ ತಪ್ಪಿತು.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇಂದು ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 272 ರನ್‌ಗಳ ಬೃಹತ್ ಮೊತ್ತ ದಾಖಲಿಸಿದೆ. ಇದು ಐಪಿಎಲ್‌ನ ಇತಿಹಾಸದಲ್ಲೇ ಎರಡನೇ ಗರಿಷ್ಠ ಮೊತ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಾಸ್ ಗೆದ್ದ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ತಂಡಕ್ಕೆ ಸುನಿಲ್ ನರೇನ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಬಲಿಷ್ಠ ಆರಂಭ ನೀಡಿದರು. ಐದನೇ ಓವರ್‌ನಲ್ಲಿ ಕೆಕೆಆರ್ ಮೊದಲ ವಿಕೆಟ್ ಕಳೆದುಕೊಂಡಿತಾದರೂ, ಆ ವೇಳೆಗಾಗಲೇ 70 ರನ್ ಪೇರಿಸಿತ್ತು. ಸುನಿಲ್ ನರೇನ್ 39 ಎಸೆತಗಳಲ್ಲಿ 85 ರನ್(7 ಸಿಕ್ಸ್, 7 ಬೌಂಡರಿ), ಯುವ ಬ್ಯಾಟರ್ ರಘುವಂಶಿ 27 ಎಸೆತಗಳಲ್ಲಿ 54 ರನ್ ಗಳಿಸಿ ಮಿಂಚಿದರು.

ಉಳಿದಂತೆ ಆಂಡ್ರೆ ರಸ್ಸೆಲ್ 19 ಎಸೆತಗಳಲ್ಲಿ 41, ರಿಂಕು ಸಿಂಗ್ 8 ಎಸೆತಗಳಲ್ಲಿ 26 ಹಾಗೂ ನಾಯಕ ಶ್ರೇಯಸ್ ಅಯ್ಯರ್ 18 ರನ್ ಗಳಿಸಿದರು. ಕೊನೆಯಲ್ಲಿ 7 ವಿಕೆಟ್ ಕಳೆದುಕೊಂಡು 272 ರನ್ ದಾಖಲಿಸುವ ಮೂಲಕ, ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ಗೆ 273 ರನ್‌ಗಳ ಬೃಹತ್ ಗುರಿ ನೀಡಿದೆ.

ಡೆಲ್ಲಿ ಪರ ಬೌಲಿಂಗ್‌ನಲ್ಲಿ ನೋರ್‌ಜೆ 3, ಇಶಾಂತ್ ಶರ್ಮಾ 2 ವಿಕೆಟ್ ಪಡೆದರೆ, ಖಲೀಲ್ ಹಾಗೂ ಮಾರ್ಷ್‌ ತಲಾ ಒಂದೊಂದು ವಿಕೆಟ್ ಪಡೆದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...