ಐಪಿಎಲ್ ಫೈನಲ್ | ಸನ್‌ರೈಸರ್ಸ್‌ ಅನ್ನು ಮಣಿಸಿ ಮೂರನೇ ಬಾರಿಗೆ ಚಾಂಪಿಯನ್ ಆದ ಕೊಲ್ಕತ್ತಾ ನೈಟ್ ರೈಡರ್ಸ್

Date:

ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿಗೆ ಚಾಂಪಿಯನ್ ಆಗಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸನ್‌ರೈಸರ್ಸ್‌ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್‌ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ, ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಮಾರಕ ಬೌಲಿಂಗ್‌ ದಾಳಿಗೆ ಮಕಾಡೆ ಮಲಗಿ, ಕೇವಲ 113 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿತ್ತು.

114 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಶ್ರೇಯಸ್ ಅಯ್ಯರ್ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು, ಕೇವಲ 10.3 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಆ ಮೂಲಕ 8 ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಮೂರನೇ ಬಾರಿಗೆ ಚಾಂಪಿಯನ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲ್ಕತ್ತಾ ನೈಟ್ ರೈಡರ್ಸ್ ಪರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ವೆಂಕಟೇಶ್ ಅಯ್ಯರ್ 26 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಬೌಂಡರಿಯ ನೆರವಿನಿಂದ 52 ರನ್ ಗಳಿಸುವ ಮೂಲಕ ಅರ್ಧಶತಕ ಪೂರೈಸಿದರು. ಕೊನೆಯಲ್ಲಿ ನಾಯಕ ಶ್ರೇಯಸ್ ಅಯ್ಯರ್ 6 ರನ್ ಗಳಿಸಿ, ಔಟಾಗದೇ ಉಳಿದರು.

ರಹ್ಮಾತುಲ್ಲಾ ಗುರ್ಬಾಝ್ 31 ಎಸೆತಗಳಲ್ಲಿ 39 ರನ್ (5 ಬೌಂಡರಿ ಹಾಗೂ 2 ಸಿಕ್ಸರ್) ಗಳಿಸಿ, ಶಾಬಾಝ್‌ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದು, ವಿಕೆಟ್ ಒಪ್ಪಿಸಿದರು. 2 ಎಸೆತಗಳನ್ನು ಎದುರಿಸಿದ್ದ ಸುನಿಲ್ ನರೇನ್ ಒಂದು ಸಿಕ್ಸ್‌ನ ನೆರವಿನಿಂದ 6 ರನ್ ಗಳಿಸಿ, ಪ್ಯಾಟ್ ಕಮ್ಮಿನ್ಸ್‌ ಎಸೆತದಲ್ಲಿ ಶಾಬಾಝ್‌ಗೆ ಕ್ಯಾಚಿತ್ತು ನಿರ್ಗಮಿಸಿದರು.

ಬಾಲಿವುಡ್‌ ನಟ ಶಾರೂಖ್ ಖಾನ್ ಮಾಲೀಕತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು, 4ನೇ ಬಾರಿಗೆ ಐಪಿಎಲ್‌ ಟೂರ್ನಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಈ ಮೊದಲು 2012, 2014 ಹಾಗೂ 2021ರಲ್ಲಿ ಫೈನಲ್ ಪ್ರವೇಶಿಸಿತ್ತು. ಈ ಪೈಕಿ 2012ರಲ್ಲಿ ಚೆನ್ನೈಯನ್ನು ಹಾಗೂ 2014ರಲ್ಲಿ ಕಿಂಗ್ಸ್ ಎಲೆವೆನ್ ಪಂಜಾಬ್ ಅನ್ನು ಸೋಲಿಸಿ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ, ಚಾಂಪಿಯನ್ ಆಗಿತ್ತು.

2021ರಲ್ಲಿ ಕೂಡ ಫೈನಲ್ ಪ್ರವೇಶಿಸಿದ್ದರೂ ಕೂಡ, ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡವು 27 ರನ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲನುಭವಿಸಿ, ರನ್ನರ್ ಅಪ್ ಆಗಿತ್ತು. 2024ರಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡವನ್ನು ಸೋಲಿಸಿ, ಮೂರನೇ ಬಾರಿಗೆ ಚಾಂಪಿಯನ್ ಆಗಿದೆ.

113ಕ್ಕೆ ಆಲೌಟ್ ಆಗಿದ್ದ ಹೈದರಾಬಾದ್ ತಂಡ

ಐಪಿಎಲ್‌ನ ಲೀಗ್ ಹಂತದಲ್ಲಿ ಭರ್ಜರಿ ಸ್ಫೋಟಕ ಬ್ಯಾಟಿಂಗ್‌ನ ಕಾರಣಕ್ಕೆ ಸುದ್ದಿಯಾಗುತ್ತಿದ್ದ ಪ್ಯಾಟ್ ಕಮ್ಮಿನ್ಸ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್ ತಂಡ, ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಮಾರಕ ಬೌಲಿಂಗ್‌ ದಾಳಿಗೆ ಫೈನಲ್‌ನಲ್ಲಿ ಮಕಾಡೆ ಮಲಗಿತ್ತು.

ಫೈನಲ್ ಪಂದ್ಯದಲ್ಲಿ ಸನ್‌ರೈಸರ್ಸ್‌ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್‌ ಟಾಸ್ ಗೆದ್ದು, ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಇದನ್ನು ಸಮರ್ಥವಾಗಿ ಬಳಸಿಕೊಳ್ಳಲು ಮೊದಲ ಓವರ್‌ನಿಂದಲೇ ಹೈದರಾಬಾದ್ ಬ್ಯಾಟರ್‌ಗಳು ವಿಫಲರಾಗಿ, 18.3 ಓವರ್‌ಗಳಲ್ಲಿ ಕೇವಲ 113 ರನ್ ಗಳಿಸುವಷ್ಟರಲ್ಲಿ ಆಲೌಟ್ ಆದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...