ಐಪಿಎಲ್ ಫೈನಲ್‌ | ಆರ್‌ಸಿಬಿ ಗೆದ್ದರೆ ಸಂಭ್ರಮ ಇರಲಿ, ಅತಿರೇಕದ ವರ್ತನೆ ಬೇಡ: ಪೊಲೀಸ್ ಕಮಿಷನರ್

Date:

ಐಪಿಎಲ್ ಸೀಸನ್-18ರ ಮಹಾಸಮರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಚೊಚ್ಚಲ ಟ್ರೋಫಿಗಾಗಿ ಸೆಣಸಲಿದೆ.

ಈ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡವಾಗಿ ಆರ್​ಸಿಬಿ ತಂಡ ಗುರುತಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ಫೈನಲ್‌ ಪಂದ್ಯದ ಕಾತುರ ಹೆಚ್ಚಾಗಿದೆ. ಆರ್‌ಸಿಬಿ ಗೆದ್ದು ಬೀಗಿದರೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಕ್ಕೆ ಪಾರವೇ ಇಲ್ಲ.

ಈ ಹಿನ್ನೆಲೆಯಲ್ಲಿ ಆರ್‌ಸಿಬಿ ಗೆದ್ದರೆ ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಮಾಡಬಾರದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್​ಸಿಬಿ ಗೆದ್ದರೆ ಸಂಭ್ರಮಾಚರಣೆ ವೇಳೆ ಯಾವುದೇ ಅವಘಡಗಳು ಸಂಭವಿಸದಂತೆ ಅಗತ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಲಾಗಿದೆ. ರಸ್ತೆ ತಡೆಯುವುದು, ಟೈರ್​ಗೆ ಬೆಂಕಿ ಹಚ್ಚುವುದು, ವಾಹನ ತಡೆಯುವುದು. ಸಾರ್ವಜನಿಕರಿಗೆ ತೊಂದರೆ, ಶಾಂತಿಭಂಗ ಉಂಟು ಮಾಡುವಂತಿಲ್ಲ. ಇಂತಹ ಘಟನೆಗಳು ಕಂಡುಬಂದಲ್ಲಿ ಕಾನೂನುಕ್ರಮ ಕೈಗೊಳ್ಳಲು ಡಿಸಿಪಿ, ಎಸಿಪಿಗಳಿಗೆ ಕಮಿಷನರ್ ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಐಪಿಎಲ್‌ ಫೈನಲ್‌ಗಿಂತ ಹೆಚ್ಚಾದ ಆರ್‌ಸಿಬಿ ಜ್ವರ, ಏನಿದು ವಿದ್ಯಮಾನ?

ಆಯಾ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಲು ಸೂಚಿಸಿಲಾಗಿದೆ. ಎಂ.ಜಿ.ರಸ್ತೆ, ಕೋರಮಂಗಲ, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ನಿಗಾ ಹೆಚ್ಚಿಸಲಾಗುತ್ತದೆ. ಬೆಂಗಳೂರಿನಲ್ಲಿ ಸ್ಕ್ರೀನ್ ಅಳವಡಿಸಿರುವ ಕಡೆ ಪೊಲೀಸರ ಕಣ್ಗಾವಲು ಇರಲಿದೆ. ಪೊಲೀಸರ ಅನುಮತಿ ಪಡೆಯದೆ ಸ್ಕ್ರೀನ್​​ ಅಳವಡಿಕೆ ಮಾಡುವಂತಿಲ್ಲ ಎಂದು ಕಮಿಷನರ್ ಬಿ.ದಯಾನಂದ್ ಸ್ಪಷ್ಟಪಡಿಸಿದ್ದಾರೆ.

ಪಬ್, ಕ್ಲಬ್, ರೆಸ್ಟೋರೆಂಟ್​​​ ಗಳು ಅವಧಿ ಮೀರಿ ಕಾರ್ಯಾಚರಣೆ ಮಾಡುವಂತಿಲ್ಲ. ರೆಸ್ಟೋರೆಂಟ್ ​​​ಗಳನ್ನು ನಿಗದಿತ ಸಮಯಕ್ಕೆ ಬಂದ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಎಲ್ಲೆಡೆ ಹೊಯ್ಸಳ ಮತ್ತು ಬೀಟ್ ಪೊಲೀಸರು ಗಸ್ತು ಕಾರ್ಯಾಚರಣೆ ಹೆಚ್ಚಿಸಿ ನಿಗಾ ವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...