ಐಪಿಎಲ್‌ ಫೈನಲ್‌ | ಆರ್‌ಸಿಬಿ ತಂಡಕ್ಕೆ ಶುಭಹಾರೈಸಿ ಅಭಿಮಾನಿಗಳಿಗೆ ಸಿಎಂ ಹೇಳಿದ್ದೇನು?

Date:

ಐಪಿಎಲ್ ಸೀಸನ್-18ರ ಮಹಾಸಮರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಚೊಚ್ಚಲ ಟ್ರೋಫಿಗಾಗಿ ಸೆಣಸಲಿದೆ.

ಫೈನಲ್‌ ಪಂದ್ಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್‌ಸಿಬಿ ತಂಡಕ್ಕೆ ಶುಭಹಾರೈಸಿದ್ದಾರೆ. ಈ ಕುರಿತು ಎಕ್ಸ್‌ ತಾಣದಲ್ಲಿ ಬರೆದುಕೊಂಡಿರುವ ಅವರು, “ಪಂಜಾಬ್ ತಂಡದ ವಿರುದ್ಧ ಇಂದು ಫೈನಲ್ ಪಂದ್ಯವಾಡುತ್ತಿರುವ ನಮ್ಮ ಆರ್‌ಸಿಬಿ ತಂಡಕ್ಕೆ ಶುಭ ಹಾರೈಕೆಗಳು. ಆರ್‌ಸಿಬಿ ತಂಡದ ಸೋಲು – ಗೆಲುವು, ಏಳು – ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ – ಸ್ಪೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆ” ಎಂದಿದ್ದಾರೆ.

“ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ”, ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್‌ಸಿಬಿ ಅಭಿಮಾನಿಗಳ ಪಾಲಿಗಿರಲಿ” ಎಂದು ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...