ಐಪಿಎಲ್ | ಕೆ ಎಲ್ ರಾಹುಲ್-ಡಿ ಕಾಕ್ ಶತಕದ ಜೊತೆಯಾಟ: ಚೆನ್ನೈ ವಿರುದ್ಧ ಲಕ್ನೋಗೆ ಭರ್ಜರಿ ಗೆಲುವು

Date:

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 34ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವು, ಕೆ ಎಲ್ ರಾಹುಲ್-ಡಿ ಕಾಕ್ ಶತಕದ ಜೊತೆಯಾಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರವೀಂದ್ರ ಜಡೇಜಾ ಮತ್ತು ಎಂಎಸ್ ಧೋನಿ ಅವರ ಅದ್ಭುತ ಫಿನಿಶಿಂಗ್ ಆಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿ, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 177 ರನ್‌ಗಳ ಗುರಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿಯನ್ನು ಬೆನ್ನಟ್ಟಿದ ಕೆ ಎಲ್ ರಾಹುಲ್ ನೇತೃತ್ವದ ತಂಡವು 19 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ಕಳೆದುಕೊಂಡು 180 ರನ್ ದಾಖಲಿಸುವ ಮೂಲಕ ಬಲಿಷ್ಠ ಚೆನ್ನೈ ವಿರುದ್ಧ ಗೆದ್ದು ಬೀಗಿದೆ.

ಗುರಿ  ಬೆನ್ನತ್ತಿದ ಲಕ್ನೋ ಸೂಪರ್​ ಜೈಂಟ್ಸ್​​ ತಂಡದ ಪರ ನಾಯಕ, ಕನ್ನಡಿಗ ಕೆ.ಎಲ್​​ ರಾಹುಲ್ ಹಾಗೂ ಕ್ವಿಂಟನ್ ಡಿ ಕಾಕ್ ಮೊದಲ ವಿಕೆಟ್‌ಗೆ 134 ರನ್‌ಗಳ ಜೊತೆಯಾಟ ನಡೆಸುವ ಮೂಲಕ ಚೆನ್ನೈ ಬೌಲರ್​ಗಳನ್ನು ಕಾಡಿದರು. ಕ್ವಿಂಟನ್​ ಡಿಕಾಕ್​​ ತಾನು ಆಡಿದ 43 ಎಸೆತದಲ್ಲಿ 1 ಸಿಕ್ಸರ್​​, 5 ಬೌಂಡರಿ ಸಮೇತ ಅರ್ಧಶತಕ ಸಿಡಿಸಿ. ಮಿಂಚಿದರು. ಮುಸ್ತಫೀಝ್‌ ರಹ್ಮಾನ್ ಎಸೆತದಲ್ಲಿ ವಿಕೆಟ್ ಕೀಪರ್ ಧೋನಿಗೆ ಕ್ಯಾಚಿತ್ತು ಔಟಾದರು.

ಆ ಬಳಿಕ ಬ್ಯಾಟಿಂಗ್​ ಮುಂದುವರಿಸಿದ ಕೆ ಎಲ್ ರಾಹುಲ್​​, 52 ಎಸೆತದಲ್ಲಿ ಭರ್ಜರಿ 3 ಸಿಕ್ಸರ್​​, 9 ಬೌಂಡರಿಯ ನೆರವಿನಿಂದ  82 ರನ್​ ಬಾರಿಸಿದರು. ಥರ್ಡ್‌ ಮೆನ್‌ನಲ್ಲಿದ್ದ ರವೀಂದ್ರ ಜಡೇಜಾ ಹಿಡಿದ ಅಧ್ಭುತ ಕ್ಯಾಚ್‌ನಿಂದಾಗಿ ರಾಹುಲ್ ಔಟಾದರು.

ಆ ಬಳಿಕ ಬಂದ ನಿಕೊಲಸ್ ಪೂರನ್​ ಕೇವಲ 12 ಬಾಲ್​ನಲ್ಲಿ 23 ರನ್​ ಬಾರಿಸಿದರೆ, ಸ್ಟೋಯ್ನಿಸ್ 8 ರನ್ ಗಳಿಸಿ, ಔಟಾಗದೆ ಉಳಿಯುವ ಮೂಲಕ ಲಕ್ನೋ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಚೆನ್ನೈ ಪರ ಬೌಲಿಂಗ್‌ನಲ್ಲಿ ಮುಸ್ತಫೀಝ್‌ ರಹ್ಮಾನ್ ಹಾಗೂ ಪತಿರಾನ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...