ಮಳೆಗಾಹುತಿಯಾದ ಕೆಕೆಆರ್-ಆರ್‌ಆರ್ ಪಂದ್ಯ: ಪ್ಲೇ-ಆಫ್ ಫಿಕ್ಸ್; ಆರ್‌ಸಿಬಿ ಎದುರಾಳಿ ರಾಜಸ್ಥಾನ

Date:

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ.

ಈಗಾಗಲೇ ಪ್ಲೇ-ಆಫ್ ಪ್ರವೇಶಿಸಿದ್ದ
ರಾಜಸ್ಥಾನ್​ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ ತಂಡದ ಮಧ್ಯೆ ಈ ಪಂದ್ಯ ನಡೆಯಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ ಕಾಣದೆ ಈ ಪಂದ್ಯ ರದ್ದಾದ ಕಾರಣ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು.

10 ಗಂಟೆ ಸುಮಾರಿಗೆ ಮಳೆ ನಿಂತಿತು. ಮಳೆ ನಿಂತ ಕಾರಣ 10.45ಕ್ಕೆ ಪಂದ್ಯವನ್ನು ನಿಗದಿಪಡಿಸಿ, ಡಕ್​ವರ್ತ್​ ನಿಯಮದ ಪ್ರಕಾರ 7 ಓವರ್​ಗೆ ಸೀಮಿತಗೊಳಿಸಿ, ಟಾಸ್​ ಕೂಡ ಹಾರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಾಸ್​ ಗೆದ್ದು ಕೆಕೆಆರ್​ ಫೀಲ್ಡಿಂಗ್​ ಆಯ್ದುಕೊಂಡಿತು. ಇನ್ನೇನು ಆಟಗಾರರು ಮೈದಾನಕ್ಕೆ ಇಳಿಯಬೇಕು ಎನ್ನುವಷ್ಟರಲ್ಲಿ ಮತ್ತೆ ಮಳೆ ಸುರಿಯತೊಡಗಿತು. ಹೀಗಾಗಿ ಅಂಪೈರ್​ಗಳು ಕೊನೆಗೆ ಬೇರೆ ದಾರಿ ಕಾಣದಾಗದೆ, ಪಂದ್ಯವನ್ನು ರದ್ದು ಎಂದು ಘೋಷಿಸಿದರು.

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ, ಕಮಿನ್ಸ್​ ಪಡೆ ಲಾಭ ಪಡೆಯಿತು.

ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ.

ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು, ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಎರಡೂ ಪಂದ್ಯಗಳು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಅದೃಷ್ಟ ಕೈ ಹಿಡಿಯಬಹುದೇ ಎಂದು ಕಾದು ನೋಡಬೇಕಿದೆ.

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ನಾಕೌಟ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದ್ದ ಆರ್‌ಸಿಬಿ, ಫೈನಲ್‌ಗೇರುವ ಹುಮ್ಮಸ್ಸಿನಲ್ಲಿದೆ. ಅಭಿಮಾನಿಗಳು ಕೂಡ ಈ ಸಲ ಆರ್‌ಸಿಬಿ ಕಪ್ ಗೆದ್ದು, ‘ಹೊಸ ಅಧ್ಯಾಯ’ ಬರೆಯಲಿ ಎಂದು ಪ್ರಾರ್ಥನೆ ಮಾಡುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...