ಐಪಿಎಲ್ | ಗುಜರಾತ್‌ಗೆ ತವರಲ್ಲೇ ಸೋಲುಣಿಸಿದ ಪಂಜಾಬ್: 3 ವಿಕೆಟ್‌ಗಳ ರೋಚಕ ಜಯ

Date:

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಪಂದ್ಯದಲ್ಲಿ ಅತಿಥೇಯ ಗುಜರಾತ್ ಟೈಟನ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡವು 3 ವಿಕೆಟ್‌ಗಳಿಂದ ರೋಚಕವಾಗಿ ಸೋಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ ತಂಡ ಶುಭ್ಮನ್ ಗಿಲ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್‌ಗಳನ್ನು ಗಳಿಸುವ ಮೂಲಕ, ಪಂಜಾಬ್ ಕಿಂಗ್ಸ್ ತಂಡಕ್ಕೆ 200 ರನ್‌ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನತ್ತಿದ ಶಿಖರ್ ಧವನ್ ನೇತೃತ್ವದ ಪಂಜಾಬ್ ತಂಡವು 19.5 ಓವರ್‌ಗಳಲ್ಲಿ ಗುರಿ ಮುಟ್ಟುವ ಮೂಲಕ ಜಯ ಸಾಧಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್ ಟೈಟಾನ್ಸ್ ನೀಡಿದ್ದ 200 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್‌ಗೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ಶಿಖರ್ ಧವನ್ ಹಾಗೂ ಜಾನಿ ಬೈರ್‌ಸ್ಟೋವ್ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆ ಬಳಿಕ ಪ್ರಭಾಸಿಮ್ರಾನ್ ಸಿಂಗ್ ಸ್ವಲ್ಪ ಹೊತ್ತು ಆಸರೆಯಾದರು. ಔಟಾಗುವುದಕ್ಕೂ ಮುನ್ನ ಪ್ರಭಾಸಿಮ್ರಾನ್ ಸಿಂಗ್ 35 ರನ್ ಗಳಿಸಿದ್ದರು. ಕೊನೆಯಲ್ಲಿ IMPACT PLAYER ಆಗಿ ಬಂದ ಅಶುತೋಶ್ ಶರ್ಮಾ 31 ರನ್(17 ಎಸೆತ, 3 ಬೌಂಡರಿ,1 ಸಿಕ್ಸ್) ಹಾಗೂ ಶಶಾಂಕ್ ಸಿಂಗ್ ಔಟಾಗದೆ 61 ರನ್(29 ಎಸೆತ, 6 ಬೌಂಡರಿ, 4 ಸಿಕ್ಸ್) ಬಾರಿಸುವ ಮೂಲಕ ಕೊನೆಯ ಓವರ್‌ನ 5ನೇ ಎಸೆತದಲ್ಲಿ ನಿಗದಿತ ಗುರಿ ಮುಟ್ಟುವಲ್ಲಿ ಯಶಸ್ವಿಯಾದರು.

ಈ ಗೆಲುವಿನ ಮೂಲಕ ಈವರೆಗೆ ಆಡಿದ ಒಟ್ಟು ನಾಲ್ಕು ಪಂದ್ಯಗಳ ಪೈಕಿ 2ರಲ್ಲಿ ಸೋತು, ಎರಡರಲ್ಲಿ ಗೆಲುವು ಕಂಡಿದೆ. ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಕಾಯ್ದುಕೊಂಡಿದೆ.

ಗುಜರಾತ್ ಪರ ನೂರ್ ಅಹ್ಮದ್ 2 ವಿಕೆಟ್ ಪಡೆದರೆ, ಅಝ್ಮತುಲ್ಲ ಒಮರ್ ಝಾಯ್, ಉಮೇಶ್ ಯಾದವ್, ರಶೀದ್ ಖಾನ್, ಮೋಹಿತ್ ಶರ್ಮಾ, ದರ್ಶನ್, ಉಮೇಶ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...