ಐಪಿಎಲ್ | ಡೆಲ್ಲಿ ವಿರುದ್ಧ ಗೆಲುವಿನೊಂದಿಗೆ ‘ಪ್ಲೇ-ಆಫ್ ಹೋಪ್’ ಉಳಿಸಿಕೊಂಡ ಆರ್‌ಸಿಬಿ

Date:

ಐಪಿಎಲ್ ಆರಂಭದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಆರ್‌ಸಿಬಿ ತಂಡವು, ಕಳೆದ ಐದೂ ಪಂದ್ಯದಲ್ಲಿ ಐದರಲ್ಲಿ ಗೆಲುವು ಸಾಧಿಸುವುದರೊಂದಿಗೆ ತಾನಿನ್ನೂ ಪ್ಲೇ ಆಫ್ ಕನಸನ್ನು ಕೈಬಿಟ್ಟಿಲ್ಲ ಎಂಬ ಸಂದೇಶವನ್ನು ಅಭಿಮಾನಿಗಳಿಗೆ ನೀಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ರೋಚಕ ಜಯ ಗಳಿಸಿದ್ದು, ಇನ್ನೂ ಕೂಡ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿಲ್ಲ‌.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಜತ್ ಪಾಟೀದಾರ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 187 ರನ್ ದಾಖಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಸಿಬಿ ನೀಡಿದ್ದ 188 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಹಂಗಾಮಿ ನಾಯಕ ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು, 19.1 ಓವರ್‌ಗಳಲ್ಲಿ 140 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಆ ಮೂಲಕ 47 ರನ್‌ಗಳಿಂದ ಸೋಲೊಪ್ಪಿಕೊಂಡಿತು. ನಾಯಕ ರಿಷಭ್ ಪಂತ್ ಅವರಿಗೆ ಒಂದು ಪಂದ್ಯಕ್ಕೆ ನಿಷೇಧ ಹೇರಲಾಗಿತ್ತು. ‌ಇದರಿಂದಾಗಿ ವಿಫಲಗೊಂಡ ಡೆಲ್ಲಿ, ಅವರ ಅನುಪಸ್ಥಿತಿಯಲ್ಲಿ ಸೋಲು ಅನುಭವಿಸಿದೆ.

ಡೆಲ್ಲಿ ಪರ ಹಂಗಾಮಿ ನಾಯಕ ಅಕ್ಷರ್ ಪಟೇಲ್ ಅರ್ಧಶತಕ(57 ರನ್, 39 ಎಸೆತ) ಗಳಿಸುವ ಮೂಲಕ ಹೋರಾಟ ನಡೆಸಿದರಾದರೂ, ಆರ್‌ಸಿಬಿಯ ಸಂಘಟಿತ ಬೌಲಿಂಗ್‌ ಹಾಗೂ ಉತ್ತಮ ಫೀಲ್ಡಿಂಗ್‌ನಿಂದಾಗಿ ಸೋಲೊಪ್ಪಿಕೊಳ್ಳಬೇಕಾಯಿತು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇಬ್ಬರು ಪ್ರಮುಖ ಬ್ಯಾಟರ್‌ಗಳಾದ ಜೇಕ್ ಫ್ರೇಸರ್(21 ರನ್) ಹಾಗೂ ಸ್ಟಬ್ಸ್(3 ರನ್) ರನೌಟ್ ಆದ್ದರಿಂದ ಆರ್‌ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.

ಆರ್‌ಸಿಬಿ ಪರ ಉತ್ತಮ ಬೌಲಿಂಗ್‌ ನಡೆಸಿದ ಯಶ್ ದಯಾಳ್ 3 ವಿಕೆಟ್ ಪಡೆದರೆ, ಫರ್ಗ್ಯುಸನ್ 2 ಹಾಗೂ ಮೊಹಮ್ಮದ್ ಸಿರಾಜ್ , ಕ್ಯಾಮರೂನ್ ಗ್ರೀನ್, ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...