ಐಪಿಎಲ್ | ರಸ್ಸೆಲ್ ಸ್ಫೋಟಕ ಬ್ಯಾಟಿಂಗ್: ಹೈದರಾಬಾದ್‌ಗೆ ಗೆಲ್ಲಲು 209 ರನ್‌ಗಳ ಗುರಿ ನೀಡಿದ ಕೆಕೆಆರ್

Date:

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ಸನ್‌ರೈಸರ್ಸ್‌ ಹೈದರಾಬಾದ್ ತಂಡದ ವಿರುದ್ಧ ನಡೆದ ಐಪಿಎಲ್‌ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಸ್ಫೋಟಕ ಬ್ಯಾಟರ್ ಆಂಡ್ಯ್ರೂ ರಸ್ಸೆಲ್ ಅವರ ಭರ್ಜರಿ ಆಟದ ನೆರವಿನಿಂದ 208 ರನ್‌ಗಳ ಬೃಹತ್ ರನ್ ದಾಖಲಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್, ಆರಂಭಿಕ ಆಘಾತಕ್ಕೊಳಗಾಯಿತಾದರೂ, ಫಿಲ್ ಸಾಲ್ಟ್ ಅವರ ಅರ್ಧಶತಕ(54 ರನ್, 40 ಎಸೆತ, 3 ಬೌಂಡರಿ ಹಾಗೂ 3 ಸಿಕ್ಸರ್) ಹಾಗೂ ಮಧ್ಯಮ ಕ್ರಮಾಂಕ ಬ್ಯಾಟರ್ ಆಂಡ್ಯ್ರೂ ರಸ್ಸೆಲ್ ಅವರ ಸ್ಫೋಟಕ ಆಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ ದಾಖಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇವಲ 25 ಎಸೆತಗಳನ್ನು ಎದುರಿಸಿದ ವೆಸ್ಟ್‌ಇಂಡೀಸ್‌ನ ದೈತ್ಯ ಬ್ಯಾಟರ್ ರಸ್ಸೆಲ್, ಭರ್ಜರಿ 7 ಸಿಕ್ಸರ್ ಹಾಗೂ ಮೂರು ಬೌಂಡರಿಯ ನೆರವಿನಿಂದ 64 ರನ್‌ಗಳನ್ನು ಬಾರಿಸಿದರು.

ಬ್ಯಾಟಿಂಗ್ ಆರಂಭಿಸಿದ ಕೆಕೆಆರ್ ಕೇವಲ 51 ರನ್ ಗಳಿಸುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆ ಬಳಿಕ ಸಾವಧಾನ ಆಟವಾಡಿದ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು, ಬೃಹತ್ ಗುರಿಯನ್ನು ನೀಡುವಲ್ಲಿ ಸಫಲರಾದರು.

ಕೆಕೆಆರ್ ಪರ ನಾಯಕ ಶ್ರೇಯಸ್ ಅಯ್ಯರ್ ಶೂನ್ಯ ಸುತ್ತುವ ಮೂಲಕ ಮೊದಲ ಪಂದ್ಯದಲ್ಲೇ ರನ್ ಗಳಿಸಲು ವಿಫಲರಾದರು. ಉಳಿದಂತೆ ಸುನಿಲ್ ನರೇನ್ 2 ರನ್, ವೆಂಕಟೇಶ್ ಅಯ್ಯರ್ 7, ನಿತೀಶ್ ರಾಣಾ 9 ರನ್ ಗಳಿಸಿ, ವಿಕೆಟ್ ಒಪ್ಪಿಸುವ ಮೂಲಕ ಎರಡಂಕೆ ದಾಟಲು ವಿಫಲವಾದರು.

ರಮಣ್‌ದೀಪ್ ಸಿಂಗ್ 35 ರನ್ ಹಾಗೂ ರಿಂಕು ಸಿಂಗ್ 23 ರನ್ ಗಳಿಸುವ ಮೂಲಕ ಸ್ಕೋರ್‌ ಬೋರ್ಡ್‌ಗೆ ತಮ್ಮದೇ ಆದ ಕೊಡುಗೆ ನೀಡಿದರು.

ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಪರ ಬೌಲಿಂಗ್‌ನಲ್ಲಿ ನಟರಾಜನ್ 3 ವಿಕೆಟ್ ಪಡೆಯುವಲ್ಲಿ ಸಫಲರಾದರೆ, ಮಯಾಂಕ್ ಮಾರ್ಕಂಡೆ 2 ವಿಕೆಟ್ ಗಳಿಸಿದರು. ನಾಯಕ ಪ್ಯಾಟ್ ಕಮ್ಮಿನ್ಸ್ 1 ವಿಕೆಟ್ ಗಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...