ಐಪಿಎಲ್ ಫೈನಲ್‌ | ಟಾಸ್‌ ಗೆದ್ದ ಪಂಜಾಬ್; ಆರ್‌ಸಿಬಿ ತಂಡದಲ್ಲಿ ಮಹತ್ವದ ಬದಲಾವಣೆ

Date:

ಅಂತಿಮ ಘಟ್ಟ ತಲುಪಿರುವ ಐಪಿಎಲ್‌ನ ರೋಚಕ ಹಣಾಹಣಿಯ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಪಂಜಾಬ್‌ ತಂಡದ ನಾಯಕ ಶ್ರೇಯಸ್‌ ಅಯ್ಯರ್ ಬೌಲಿಂಗ್‌ ಆಯ್ದುಕೊಂಡಿದ್ದಾರೆ. ಆರ್‌ಸಿಬಿಯ ರಜತ್‌ ಪಾಟಿದಾರ್‌ ತಂಡ ಬ್ಯಾಟಿಂಗ್‌ ಮಾಡಲು ಸಜ್ಜಾಗಿದ್ದಾರೆ. ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಉಭಯ ತಂಡಗಳಿಂದ 11 ಆಟಗಾರರ ಪಡೆ ತಮ್ಮ ಕ್ರೀಡಾ ಪರಾಕ್ರಮ ತೋರಲು ಸಿದ್ಧರಾಗಿದ್ದಾರೆ. ತಂಡದಲ್ಲಿ ಬದಲಾವಣೆ ಇಲ್ಲದಿದ್ದರೂ ತಂತ್ರಗಾರಿಕೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಆರ್‌ಸಿಬಿ ನಾಯಕ ರಜತ್‌ ಹೇಳಿದ್ದಾರೆ

ಎರಡೂ ತಂಡಗಳು ಬಹಳ ಸಮಯದ ನಂತರ ಫೈನಲ್ ತಲುಪಿದ್ದು, ಇಲ್ಲಿಯವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲವಾದ್ದರಿಂದ ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಅದು ಅವರ ಚೊಚ್ಚಲ ಐಪಿಎಲ್ ಪ್ರಶಸ್ತಿಯಾಗಲಿದೆ.

ಇದು ಬೆಂಗಳೂರಿನ ನಾಲ್ಕನೇ ಐಪಿಎಲ್ ಫೈನಲ್ ಆಗಲಿದೆ. ಇದಕ್ಕೂ ಮೊದಲು ತಂಡವು 3 ಬಾರಿ ಸೋಲನ್ನು ಎದುರಿಸಿದೆ. 2009 ರಲ್ಲಿ ಮೊದಲು ಡೆಕ್ಕನ್ ಚಾರ್ಜರ್ಸ್ ವಿರುದ್ಧ ಸೋಲನುಭವಿಸಿತು. ನಂತರ 2011 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿತು. ನಂತರ 2016 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬೆಂಗಳೂರು ತಂಡವನ್ನು ಕೇವಲ 8 ರನ್‌ಗಳ ಅಂತರದಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೊಂದೆಡೆ, ಪಂಜಾಬ್ ಕಿಂಗ್ಸ್ ಎರಡನೇ ಬಾರಿಗೆ ಫೈನಲ್ ಆಡುತ್ತಿದೆ. 2014 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಫೈನಲ್ ಆಡಿದ್ದ ಪಂಜಾಬ್​ಗೆ ಸೋಲು ಎದುರಾಗಿತ್ತು.

ಪಂದ್ಯವಾಡುವ ಉಭಯ ತಂಡಗಳ ಆಟಗಾರರು:

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಮಯಾಂಕ್ ಅಗರ್ವಾಲ್ , ರಜತ್ ಪಾಟೀದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಜೋಶ್ ಹ್ಯಾಜಲ್‌ವುಡ್.

ಪಂಜಾಬ್ ಕಿಂಗ್ಸ್ : ಪ್ರಭ್‌ಸಿಮ್ರನ್ ಸಿಂಗ್, ಪ್ರಿಯಾಂಶ್ ಆರ್ಯ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶ್ರೇಯಸ್ ಐಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೋಯಿನಿಸ್, ಅಜಮತುಲ್ಲಾ ಒಮರ್‌ಜಾಯ್, ಕೈಲ್ ಜೇಮಿಸನ್, ಅರ್ಶದೀಪ್ ಸಿಂಗ್,  ಯುಜ್ವೇಂದ್ರ ಚಹಲ್, ವಿಜಯಕುಮಾರ್ ವೈಶಾಕ್

ಪಂದ್ಯದ ಸಮಯ: 7.30

ನೇರ ಪ್ರಸಾರ: ಜಿಯೋ ಹಾಟ್‌ ಸ್ಟಾರ್, ಸ್ಟಾರ್‌ ಸ್ಪೋರ್ಟ್ಸ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...