ಐಪಿಎಲ್ | ಆರ್‌ಸಿಬಿಯ ನಿರ್ಣಾಯಕ ಪಂದ್ಯದಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ

Date:

ಬೆಂಗಳೂರು : ಐಪಿಎಲ್‌ನ 16ನೇ ಆವೃತ್ತಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯವನ್ನಾಡುತ್ತಿರುವ ಆರ್‌ಸಿಬಿ ಪರವಾಗಿ, ವಿರಾಟ್ ಕೊಹ್ಲಿ ಶತಕ ಬಾರಿಸುವ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆಯನ್ನು ವಿರಾಟ್ ಕೊಹ್ಲಿ ತನ್ನದಾಗಿಸಿಕೊಂಡಿದ್ದಾರೆ. ಸನ್‌ರೈಸರ್ಸ್‌ ವಿರುದ್ಧ ನಡೆದಿದ್ದ ಕಳೆದ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ, ಐಪಿಎಲ್‌ನಲ್ಲಿ ಆರು ಶತಕ ಸಿಡಿಸಿದ್ದ ಕ್ರಿಸ್ ಗೇಲ್ ಅವರನ್ನು ದಾಖಲೆಯನ್ನು ಸರಿಗಟ್ಟಿದ್ದರು.

ಗುಜರಾತ್ ಟೈಟಾನ್ಸ್‌ ವಿರುದ್ಧ ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕೂಡ ಕೊಹ್ಲಿ ಶತಕ ಬಾರಿಸಿ, ಐಪಿಎಲ್‌ನಲ್ಲಿ ಏಳು ಶತಕ ದಾಖಲಿಸಿ, ಹೊಸ ದಾಖಲೆ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

60 ಎಸೆತಗಳಲ್ಲಿ ಶತಕ ದಾಖಲಿಸಿದ ಕೊಹ್ಲಿ, ಐಪಿಎಲ್‌ನಲ್ಲಿ ಸತತ ಎರಡು ಶತಕಗಳನ್ನು ಸಿಡಿಸಿದ ಮೊದಲ ಆರ್‌ಸಿಬಿ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು. 102 ನಿಮಿಷ ಕ್ರೀಸ್‌ನಲ್ಲಿ ನಿಂತು, ಒಟ್ಟು 61 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ, 101 ರನ್‌ ಗಳಿಸಿ ಅಜೇಯರಾಗುಳಿದರು.

ಐಪಿಎಲ್‌ನಲ್ಲಿ ಈವರೆಗೆ ಕ್ರಿಸ್‌ ಗೇಲ್ 6 ಶತಕ, ಜೋಸ್ ಬಟ್ಲರ್ 5 ಶತಕ, ಕೆ ಎಲ್ ರಾಹುಲ್ 4 ಶತಕ ಬಾರಿಸಿರುವ ದಾಖಲೆ ಹೊಂದಿದ್ದಾರೆ.

ಮಳೆಯಿಂದಾಗಿ ಒಂದು ಗಂಟೆ ತಡವಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾದ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲ ಇನ್ನಿಂಗ್ಸ್ ಮುಕ್ತಾಯಗೊಂಡಿದ್ದು, ಗುಜರಾತ್ ಗೆಲುವಿಗೆ ಆರ್‌ಸಿಬಿ 198 ರನ್‌ಗಳ ಗುರಿ ನೀಡಿದೆ.

ಈ ಪಂದ್ಯವನ್ನು ಆರ್‌ಸಿಬಿ ಗೆದ್ದರೆ, ಈ ಬಾರಿಯ ಐಪಿಎಲ್‌ನಲ್ಲಿ ನಾಲ್ಕನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಲಿದೆ. ಒಂದು ವೇಳೆ, ಆರ್‌ಸಿಬಿ ಗೆಲುವು ಪಡೆದು ಪ್ಲೇ ಆಫ್‌ ಪ್ರವೇಶಿಸಿದರೆ, ಮುಂಬೈ ಇಂಡಿಯನ್ಸ್‌ ತಂಡ ಟೂರ್ನಿಯಿಂದ ಹೊರಬೀಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...