2023-24ನೇ ಸಾಲಿನ ಗುತ್ತಿಗೆ ಒಪ್ಪಂದ ಪಟ್ಟಿ ಪ್ರಕಟಿಸಿದ ಬಿಸಿಸಿಐ : ಇಶಾನ್ ಕಿಶನ್, ಶ್ರೇಯಸ್ ಅಯ್ಯರ್‌ ಔಟ್!

Date:

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಜಯಭೇರಿ ಬಾರಿಸುವ ಮೂಲಕ ಟೀಮ್ ಇಂಡಿಯಾ ಸರಣಿಯನ್ನು 3-1ರಿಂದ ಕೈವಶ ಮಾಡಿಕೊಂಡ ಬೆನ್ನಲ್ಲೇ ಬಿಸಿಸಿಐ, 2024 ನೇ ಸಾಲಿನ ಗುತ್ತಿಗೆ ಒಪ್ಪಂದ ಪಟ್ಟಿಯನ್ನು ಇಂದು (BCCI Central Contract) ಪ್ರಕಟಿಸಿದ್ದು, ಪ್ರಮುಖ ಇಬ್ಬರು ಆಟಗಾರರನ್ನು ಪಟ್ಟಿಯಿಂದ ತೆಗೆದು ಹಾಕಿದೆ.

ಇತ್ತೀಚೆಗೆ ನಡೆದ ಕೆಲವು ಬೆಳವಣಿಗೆಗಳಿಂದ ಸುದ್ದಿಯಾಗಿದ್ದ ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್‌ ಅವರನ್ನು ಬಿಸಿಸಿಐ ಕೈಬಿಟ್ಟಿದೆ. ಟೆಸ್ಟ್‌ ಕ್ರಿಕೆಟ್‌ ಅನ್ನು ಆಡುವುದರಿಂದ ತಪ್ಪಿಸಿಕೊಳ್ಳಲು ಇವರಿಬ್ಬರೂ ನೆಪ ಹೇಳಿಕೊಂಡು ತಪ್ಪಿಸಿಕೊಂಡಿದ್ದರು ಎಂಬ ಆರೋಪದ ನಡುವೆಯೇ ಈ ಬೆಳವಣಿಗೆ ನಡೆದಿದೆ.

ರಣಜಿ ಟ್ರೋಫಿಗಿಂತ ಐಪಿಎಲ್‌ ಆಡುವುದೇ ಮುಖ್ಯ ಎನ್ನುವಂತೆ ವರ್ತನೆ ತೋರಿದ್ದರಿಂದ ಇಬ್ಬರನ್ನೂ ಗುತ್ತಿಗೆ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಂತದ ಶಿಫಾರಸುಗಳಲ್ಲಿ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ವಾರ್ಷಿಕ ಒಪ್ಪಂದಗಳಿಗೆ ಪರಿಗಣಿಸಲಾಗಿಲ್ಲ ಎನ್ನುವುದನ್ನು ಗಮನಿಸಬೇಕು” ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಹಿ ಮಾಡಿದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಎಲ್ಲ ಆಟಗಾರರು ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸದ ಅವಧಿಯಲ್ಲಿ ದೇಶೀಯ ಕ್ರಿಕೆಟ್‌ನಲ್ಲಿ ಭಾಗವಹಿಸಲು ಆದ್ಯತೆ ನೀಡಬೇಕು ಎಂದು ಬಿಸಿಸಿಐ ಸ್ಪಷ್ಟವಾಗಿ ಸೂಚನೆ ನೀಡಿತ್ತು ಎಂದೂ ತಿಳಿಸಲಾಗಿದೆ.

ಉಳಿದಂತೆ ಗ್ರೇಡ್ ಆಧರಿಸಿದ ಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದೆ. ಆ ಪಟ್ಟಿ ಹೀಗಿದೆ:

ಗ್ರೇಡ್ ಎ+: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ

ಗ್ರೇಡ್ ಎ: ಆರ್ ಅಶ್ವಿನ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ

ಗ್ರೇಡ್ ಬಿ: ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್.

ಗ್ರೇಡ್ ಸಿ: ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ಮತ್ತು ರಜತ್ ಪಾಟೀದಾರ್.

ಬಿಸಿಸಿಐ ಆಯ್ಕೆ ಸಮಿತಿಯು ವೇಗದ ಬೌಲಿಂಗ್ ವಿಭಾಗಕ್ಕೆ ಆಕಾಶ್ ದೀಪ್, ವಿಜಯ್‌ಕುಮಾರ್ ವೈಶಾಕ್, ಉಮ್ರಾನ್ ಮಲಿಕ್, ಯಶ್ ದಯಾಳ್ ಮತ್ತು ವಿದ್ವತ್ ಕಾವೇರಪ್ಪ ಅವರ ಹೆಸರನ್ನು ಶಿಫಾರಸು ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...