ಅಂತಾರಾಷ್ಟ್ರೀಯ ಟಿ20 ಇತಿಹಾಸದಲ್ಲಿ ಅತಿ ಕಡಿಮೆ ಮೊತ್ತಕ್ಕೆ ಆಲೌಟ್‌ ಆದ ತಂಡ ಯಾವುದು ಗೊತ್ತಾ?

Date:

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು ಅತಿ ಕಡಿಮೆ ಮೊತ್ತಕ್ಕೆ ಆಲೌಟ್‌ ಆಗಿ ದಾಖಲೆ ನಿರ್ಮಿಸಿದೆ. ಐವರಿ ಕೋಸ್ಟ್ ತಂಡ ಕೇವಲ 7 ರನ್‌ಗಳಿಗೆ ಆಲೌಟ್‌ ಆಗಿ 264 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿದೆ. ಲಾಗೋಸ್‌ನಲ್ಲಿ ನಡೆಯುತ್ತಿರುವ ಐಸಿಸಿ ಅಂತಾರಾಷ್ಟ್ರೀಯ ಪುರುಷರ ಟಿ20 ವಿಶ್ವಕಪ್‌ ಸಬ್‌ ರೀಜನಲ್‌ ಆಫ್ರಿಕಾ ಕ್ವಾಲಿಫೈಯರ್‌ ಗ್ರೂಪ್‌ ಸಿ ಪಂದ್ಯದಲ್ಲಿ ಐವರಿ ಕೋಸ್ಟ್ ನೈಜೀರಿಯಾ ವಿರುದ್ಧ 7 ರನ್‌ಗಳಿಗೆ ಆಲೌಟ್‌ ಆಗಿ ಹೊಸ ದಾಖಲೆ ನಿರ್ಮಿಸಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ನೈಜೀರಿಯಾ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 271 ರನ್‌ ಪೇರಿಸಿತ್ತು. ಸಲೀಮ್‌ ಸಲಾಲು 112, ಸುಲೇಮಾನ್‌ ರುನ್‌ಸೆವೆ 50 ಹಾಗೂ ಐಸಾಕ್‌ ಒಪ್ಕೆ 65 ರನ್‌ ಪೇರಿಸಿದ ಪರಿಣಾಮ ನೈಜೀರಿಯಾ 271 ರನ್ ಬಾರಿಸಿತು.

ಈ ಗುರಿಯನ್ನು ಬೆನ್ನಟ್ಟಿದ ಐವರಿ ಕೋಸ್ಟ್ ತಂಡ 7.3 ಓವರ್‌ಗಳಲ್ಲಿ 7 ರನ್‌ಗಳಿಗೆ ಆಲೌಟ್‌ ಆಯಿತು. ತಂಡದ 7 ಮಂದಿ ಶೂನ್ಯ ದಾಖಲಿಸಿದರೆ, ಮೂವರು ಕೇವಲ 1 ರನ್‌ ಕಲೆ ಹಾಕಿದರು. ಓರ್ವ ಮಾತ್ರ 4 ರನ್‌ ಗಳಿಸಿ ಔಟಾದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಡೆಲ್ಲಿ ಕ್ಯಾಪಿಟಲ್ಸ್‌ ಮುನ್ನಡೆಸುವ ಆಟಗಾರರ ಹೆಸರು ಘೋಷಣೆ

ಈ ಮೊತ್ತ ಟಿ20 ಅಂತಾರಾಷ್ಟ್ರೀಯ ಇತಿಹಾಸದಲ್ಲಿ ಅತೀ ಕಡಿಮೆ ಮೊತ್ತವಾಗಿದೆ. ಇದಕ್ಕೂ ಮೊದಲು ಮಂಗೋಲಿಯಾ ತಂಡ ಹಾಗೂ ಐಸಲ್‌ ಆಫ್ ಮನ್‌ ತಂಡ ಕೇವಲ 10 ರನ್‌ಗೆ ಆಲೌಟಾಗಿತ್ತು.

ನೈಜೀರಿಯಾ ತಂಡ 264 ರನ್‌ಗಳ ಅಂತರದಲ್ಲಿ ಗೆಲುವು ಗಳಿಸಿರುವುದು ಟಿ20 ಪುರುಷರ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರನೇ ಅತೀ ದೊಡ್ಡ ಅಂತರದ ಗೆಲುವಾಗಿದೆ. ಜಿಂಬಾಬ್ವೆ ತಂಡ ಗಾಂಬಿಯಾ ವಿರುದ್ಧ ಕಳೆದ ತಿಂಗಳು 290 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿತ್ತು. 2023ರ ಸೆಪ್ಟೆಂಬರ್‌ ತಿಂಗಳಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ 273 ರನ್ನುಗಳ ಅಂತರದಲ್ಲಿ ಜಯಗಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...