ಮೊದಲ ಟೆಸ್ಟ್ ಕ್ರಿಕೆಟ್ | ಇಂಗ್ಲೆಂಡ್ 246 ರನ್‌ಗಳಿಗೆ ಆಲೌಟ್: ಭಾರತ ಉತ್ತಮ ಶುಭಾರಂಭ

Date:

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ದಿನದಲ್ಲಿ ಭಾರತ ಉತ್ತಮ ಶುಭಾರಂಭ ಮಾಡಿದೆ.

ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 246 ರನ್‌ಗಳಿಗೆ ಉತ್ತರವಾಗಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ ದಿನಾದಾಂತ್ಯಕ್ಕೆ 23 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿದೆ. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅಜೇಯ 76 ರನ್ ಹಾಗೂ ಶುಭಮನ್ ಗಿಲ್ ಅಜೇಯ 14 ರನ್ ಗಳಿಸಿದ್ದರು. ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಪಡೆಯಲು 127 ರನ್ ಗಳಿಸಬೇಕಿದೆ.

ನಾಯಕ ರೋಹಿತ್ ಶರ್ಮಾರೊಂದಿಗೆ ಇನಿಂಗ್ಸ್ ಆರಂಭಿಸಿದ ಜೈಸ್ವಾಲ್ ಮೊದಲ ವಿಕೆಟ್ ನಷ್ಟಕ್ಕೆ 80 ರನ್ ಕಲೆ ಹಾಕಿದರು. ರೋಹಿತ್ 13ನೇ ಓವರ್‌ನಲ್ಲಿ 24 ರನ್ ಗಳಿಸಿ ಲೀಚ್ ಬೌಲಿಂಗ್ ನಲ್ಲಿ ಔಟಾದರು. 70 ಚೆಂಡುಗಳಲ್ಲಿ ರನ್ ಗಳಿಸಿದ ಜೈಸ್ವಾಲ್ ಅವರ ಆಟದಲ್ಲಿ 9 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ಗಳಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಪಿನ್ನರ್‌ಗಳ ದಾಳಿಗೆ ಇಂಗ್ಲೆಂಡ್ ತತ್ತರ

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ಗಳ ದಾಳಿಗೆ ಸಿಲುಕಿದ ಆಂಗ್ಲರ ಪಡೆ ಮೊದಲ ಇನಿಂಗ್ಸ್ ನಲ್ಲಿ 64.3 ಓವರ್‌ಗಳಲ್ಲಿ 246 ರನ್‌ಗಳಿಗೆ ಆಲೌಟ್ ಆಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

ಇಂಗ್ಲೆಂಡ್ ಪರ ನಾಯಕ ಅರ್ಧ ಶತಕ (70) ಬಾರಿಸಿದ್ದನ್ನು ಬಿಟ್ಟರೆ ಉಳಿದ ಆಟಗಾರರು 40ರ ಗಡಿ ದಾಟಲಿಲ್ಲ. ಝಾಕ್ ಕ್ರಾಲಿ(20), ಬೆನ್ ಡಕೆಟ್(35), ಜಾನಿ ಬೈರ್ಸ್ಟೋ(37), ಜೋ ರೂಟ್ (29), ಟಾಮ್ ಹಾರ್ಟ್ಲಿ(23) ರನ್ ಗಳಿಸಿ ತಂಡದ ಮೊತ್ತ 240 ದಾಟಲು ಕಾರಣರಾದರು.

ಭಾರತದ ಪರ ಅಶ್ವಿನ್ 68/3, ಅಕ್ಸರ್ ಪಟೇಲ್ 33/2, ರವೀಂದ್ರ ಜಡೇಜಾ 88/3 ಹಾಗೂ ಬುಮ್ರಾ 28/2 ವಿಕೆಟ್ ಕಬಳಿಸಿ ಇಂಗ್ಲೆಂಡ್ ತಂಡವನ್ನು ಕಟ್ಟಿ ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...